ವಿಜಯಪುರ | ‘ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ’ ವ್ಯಾಖ್ಯಾನ ನೀಡಿದವರೇ ಸಾವಿತ್ರಿಬಾಯಿ ಫುಲೆ: ಶ್ರೀನಾಥ ಪೂಜಾರಿ

Date:

ಹೆಣ್ಣೊಂದು ಕಲಿತರೆ ಶಾಲೆಯೆಂದು ತೆರೆದಂತೆ ವ್ಯಾಖ್ಯಾನ ಕೊಟ್ಟವರು ಸಾವಿತ್ರಿಬಾಯಿ ಫುಲೆ ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ ಹೇಳಿದರು.

- Advertisement -

ವಿಜಯಪುರ ನಗರದ ಶ್ರೀ ಕಂದಗಲ್ಲ ಹನುಮಂತರಾವ ರಂಗಮಂದಿರದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಮಿತಿಯಿಂದ ಹಮ್ಮಿಕೊಂಡಿದ್ದ ಭಾರತದ ಮೊದಲ ಮಹಿಳಾ ಶಿಕ್ಷಕಿ ಮಾತೆ ಸಾವಿತ್ರಿಬಾಯಿ ಫುಲೆ ಅವರ 195ನೇ ಜನ್ಮದಿನದ ಅಂಗವಾಗಿ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕಿಯರಿಗೆ ʼಅಕ್ಷರದ್ವ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿʼ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“16 ವರ್ಷದಿಂದ ಸಾವಿತ್ರಿಬಾಯಿ ಫುಲೆ ಅವರ ಹೆಸರಿನ ಪ್ರಶಸ್ತಿ ನೀಡುತ್ತ ವಿಜಯಪುರದಲ್ಲಿ ಸಮಾರಂಭ ಆಯೋಜನೆ ಮಾಡಲಾಗುತ್ತಿದೆ. ಸಾವಿತ್ರಿಬಾಯಿ ಫುಲೆ ಅವರ ಹೆಸರಿನ ಪ್ರಶಸ್ತಿ ಸ್ವೀಕರಿಸುವುದು ಗೌರವದ ಜತೆಗೆ ದೊಡ್ಡ ಜವಾಬ್ದಾರಿಯೂ ಆಗಿದೆ. ಫುಲೆಯವರ ಜನ್ಮದಿನದ ನೆಪದಲ್ಲಿ ಅವರ ವಿಚಾರಧಾರೆ, ಹೋರಾಟ ಮತ್ತು ಸಾಮಾಜಿಕ ಕೊಡುಗೆಗಳನ್ನು ಸ್ಮರಿಸುವುದು ನಮ್ಮ ಉದ್ದೇಶವಾಗಿದೆ” ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ್ ಪೋದ್ದಾರ ಹಾಗೂ ಮಹಾನಗರ ಪಾಲಿಕೆ ಸದಸ್ಯೆ ಆರತಿ ಶಹಾಪುರ ಮಾತನಾಡಿ, “ಮಹಿಳಾ ಶಿಕ್ಷಣವೇ ಸಮಾಜದ ಬದಲಾವಣೆಗೆ ಮೂಲ” ಎಂದು ಹೇಳಿದರು.

ಸಾವಿತ್ರಿಬಾಯಿ ಫುಲೆ ಜಯಂತಿ 1 1

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ವಿಜಯಾ ಕೋರಿಶೆಟ್ಟಿ ಮಾತನಾಡಿ, “ಹೆಣ್ಣು ಶಿಕ್ಷಣ ಕಲಿಯುವುದೇ ಅಂದು ದೊಡ್ಡ ಸವಾಲಾಗಿದ್ದ ಸಂದರ್ಭದಲ್ಲಿ ಸಾವಿತ್ರಿಬಾಯಿ ಫುಲೆ ಅವರು ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಿ ವಿಧವೆಯರಿಗೆ ಶಿಕ್ಷಣ ನೀಡಿ ಶಿಕ್ಷಕರನ್ನಾಗಿ ರೂಪಿಸಿದರು. ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನೀಡಿ ಆಶ್ರಯ ನೀಡಿದ ಅವರ ಕಾರ್ಯ ಸಮಾಜ ಪರಿವರ್ತನೆಯ ಮಹತ್ತರ ಹೆಜ್ಜೆಯಾಗಿದೆ. ಇಂದು ಸಾವಿರಾರು ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಪಡೆಯುತ್ತಿರುವುದಕ್ಕೆ ಸಾವಿತ್ರಿಬಾಯಿ ಫುಲೆಯವರ ಕೊಡುಗೆ ಮೂಲ ಕಾರಣ” ಎಂದು ಹೇಳಿದರು.

ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, “21ನೇ ಶತಮಾನದಲ್ಲಿ ‘ಜೈ ಜವಾನ್, ಜೈ ಕಿಸಾನ್’ ಜತೆಗೆ ‘ಜೈ ಶಿಕ್ಷಕ’ ಎಂಬ ಘೋಷವನ್ನೂ ಸೇರಿಸಬೇಕು. ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಅಮೂಲ್ಯವಾಗಿದೆ. ವ್ಯಕ್ತಿತ್ವ ನಿರ್ಮಾಣ ಮತ್ತು ಸಮಾಜ ಪರಿವರ್ತನೆಯ ಶಕ್ತಿ ಶಿಕ್ಷಕರ ಕೈಯಲ್ಲಿದೆ” ಎಂದರು.

ವಿಶೇಷ ಸನ್ಮಾನಿತ ಬಸವರಾಜ ಯಲಿಗಾರ ಮಾತನಾಡಿ, “ಶತಮಾನಗಳಿಂದ ದಮನಕ್ಕೊಳಗಾದ ದಲಿತರು, ಮಹಿಳೆಯರು ಮತ್ತು ಹಿಂದುಳಿದ ವರ್ಗಗಳ ಉನ್ನತಿಗಾಗಿ ಶ್ರಮಿಸಿದವರು ಸಾವಿತ್ರಿಬಾಯಿ ಹಾಗೂ ಜ್ಯೋತಿಬಾ ಫುಲೆ ದಂಪತಿ. ಅವರ ವಿಚಾರಗಳು ಇಂದೂ ಕೂಡ ಪ್ರಸ್ತುತವಾಗಿವೆ. ಫುಲೆ ದಂಪತಿ ಬೀಜವಾದರೆ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ವೃಕ್ಷ; ನಾವು ಅದರ ಫಲಾನುಭವಿಗಳು” ಎಂದು ಹೇಳಿದರು.

ಡಾ. ಬಸವರಾಜ ಚಲವಾದಿ ಮಾತನಾಡಿ, “ಶಿಕ್ಷಣವೇ ಶೋಷಣೆಯ ವಿರುದ್ಧದ ಶಕ್ತಿಯಾಗಿದೆ. ಒಬ್ಬ ಶಿಕ್ಷಕ ಮನಸ್ಸು ಮಾಡಿದರೆ ಇಡೀ ಸಮಾಜವನ್ನು ಬದಲಾಯಿಸಬಹುದು” ಎಂದು ಅಭಿಪ್ರಾಯಪಟ್ಟರು.

ಎಸ್‌ ಬಿ ವಿಸ್ಡಮ್ ಕರೀಯರ್ ಅಕಾಡೆಮಿಯ ಶರಣಯ್ಯ ಭಂಡಾರಿಮಠ ಮಾತನಾಡಿ, “ಅಕ್ಷರ ಮತ್ತು ಪ್ರೀತಿಯಿಂದ ಬದುಕನ್ನು ಅರಳಿಸಬಹುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರೈತರ ಜೀವನ ಸುಧಾರಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ: ಪ್ರೊ ರವಿವರ್ಮ ಕುಮಾರ್

ಕಾರ್ಯಕ್ರಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನಾತ್ಮಕ ಕ್ರಾಂತಿ ಮತ್ತು ಮಹಿಳೆಯರು ಉನ್ನತ ಸ್ಥಾನಕ್ಕೆ ಏರಬೇಕು ಎಂಬ ಅವರ ಕನಸನ್ನು ಸ್ಮರಿಸಲಾಯಿತು. ಕಾರ್ಯಕ್ರಮವು ಮಾತೆ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಜತೆಗೆ ಸಂವಿಧಾನ ಸಂಕಲ್ಪ ಗೀತೆಯ ಮೂಲಕ ಚಾಲನೆ ನೀಡಲಾಯಿತು. ನಾಡಿನ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಮಹಿಳಾ ಸಾಧಕಿಯರಿಗೆ ಗಣ್ಯರ ಮೂಲಕ ಸನ್ಮಾನಿಸಿ ʼಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿʼ ನೀಡಿ ಗೌರವಿಸಲಾಯಿತು.

ಈ ವೇಳೆ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ಜಿಲ್ಲಾ ಸಂಚಾಲಕ ಅಕ್ಷಯಕುಮಾರ ಅಜಮನಿ, ಉಪಾಧ್ಯಕ್ಷ ಮಹಾದೇವ ಚಲವಾದಿ, ಯಶೋಧ ಕಾಂಬಳೆ, ಪ್ರೇಮಾ ಕೊಳಿ, ಲತಾ ರಾಠೋಡ ಅಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಮತ್ತು ಜಿಲ್ಲಾ ಮುಖಂಡರು ಹಾಗೂ ವಿದ್ಯಾರ್ಥಿ ಯುವಜನರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ‘ಜಲಜೀವನ್ ಮಿಷನ್’ ಕಾಮಗಾರಿ ಪೂರ್ಣಗೊಳಿಸಲು ಡಿಸೆಂಬರ್‌ ಗಡುವು

ಗ್ರಾಮೀಣ ಭಾಗದಲ್ಲಿ ಬೇಸಿಗೆ ಸೇರಿದಂತೆ ಯಾವುದೇ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...