ವಿಜಯಪುರ | ಶಾಲಾ ಸಂಸತ್ತು ನಾಯಕತ್ವದ ಮೊದಲ ಪಾಠ: ಡಿವೈಎಸ್ಪಿ ನಾಗರಾಜ ಜಿ

Date:

ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ ಎಂ ಪಾಟೀಲ್ ಪಬ್ಲಿಕ್ ಸಿಬಿಎಸ್‌ಇ ಶಾಲೆಯಲ್ಲಿ ವಿದ್ಯಾರ್ಥಿ ಚುನಾವಣೆಯಲ್ಲಿ ಆಯ್ಕೆಯಾದ ಶಾಲಾ ಸಂಸತ್ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭ ಸೋಮವಾರ ನಡೆಯಿತು.

- Advertisement -

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ವಿಜಯಪುರ ನಗರ ಡಿವೈಎಸ್ಪಿ ನಾಗರಾಜ ಜಿ ಮಾತನಾಡಿ, “ಶಾಲಾ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು ಹಾಗೂ ಹೊಣೆಗಾರಿಕೆಯ ಗುಣಗಳನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ. ಇಂದು ಶಾಲೆಯ ಜವಾಬ್ದಾರಿಯನ್ನು ಹೊತ್ತಿರುವ ಮುಖ್ಯ ಬಾಲಕ-ಬಾಲಕಿಯರು ನಾಳೆ ದೇಶವನ್ನು ಮುನ್ನಡೆಸುವ ನಾಯಕರಾಗುವ ಸಾಮರ್ಥ್ಯ ಹೊಂದಿದ್ದಾರೆ” ಎಂದು ಅಭಿಪ್ರಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಪಾಲಕರಿಗೆ ಗೌರವ ನೀಡಬೇಕು. ಪ್ರಮಾಣವಚನ ಸ್ವೀಕರಿಸಿದ ಪದಾಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ಮತ್ತು ಮಾದರಿಯಾಗಿ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.

ಶಾಲಾ ಮುಖ್ಯ ಬಾಲಕಿಯಾಗಿ ಕಿಂಜಲ್ ಹಜೇರಿ ಹಾಗೂ ಮುಖ್ಯ ಬಾಲಕನಾಗಿ ಅರ್ಜುನ ಪಾಟೀಲ್ ಆಯ್ಕೆಯಾಗಿದ್ದು, ಕ್ರೀಡಾ ವಿಭಾಗದ ಮುಖ್ಯ ಬಾಲಕನಾಗಿ ಅಪ್ಪು ಬಬಲೇಶ್ವರ, ಮುಖ್ಯ ಬಾಲಕಿಯಾಗಿ ಛವಿ ರುಣವಾಲ, ಸಾಂಸ್ಕೃತಿಕ ವಿಭಾಗದ ಮುಖ್ಯ ಬಾಲಕನಾಗಿ ತೇಜಸ್ ನಾಯಕ, ಮುಖ್ಯ ಬಾಲಕಿಯಾಗಿ ಸಾಮಿಯಾ ಜೈನ್, ಶಿಸ್ತು ವಿಭಾಗದ ಮುಖ್ಯ ಬಾಲಕನಾಗಿ ಸಮರ್ಥ ಮದ್ದಾನಿಮಠ, ಮುಖ್ಯ ಬಾಲಕಿಯಾಗಿ ಶ್ರೇಯಾ ವಂದಾಲ, ಶಾಲಾ ಆವರಣ ಉಸ್ತುವಾರಿ ಮುಖ್ಯ ಬಾಲಕನಾಗಿ ಫೈಝಲ್ ಬಲವನೆಕರ, ಮುಖ್ಯ ಬಾಲಕಿಯಾಗಿ ನಿಧಿ ಢವಳಗಿ ಹಾಗೂ ಮಾಧ್ಯಮ ಉಸ್ತುವಾರಿ ಮುಖ್ಯ ಬಾಲಕಿಯಾಗಿ ಅದ್ವಿಕಾ ಸಾಸನೂರ ಆಯ್ಕೆಯಾದರು.

ವೈಭವಿ ನಾರ್ವೇಕರ್, ಪ್ರಣವ ಶಹ, ವಿಶ್ವನಾಥ ನಾಗರಾಳ ಸೇರಿದಂತೆ ವಿದ್ಯಾರ್ಥಿ ತಂಡವು ಅತಿಥಿಗಳಿಂದ ಬ್ಯಾಡ್ಜ್ ಹಾಗೂ ಶಾಲಾ ಧ್ವಜವನ್ನು ಸ್ವೀಕರಿಸಿತು. ಬಳಿಕ ಅತಿಥಿಗಳು ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಚಾರ್ಯೆ ವಸುಧಾ ನಾರ್ವೇಕರ, ಹಿರಿಯ ಕಾರ್ಯ ಸಂಯೋಜಕಿ ದೀಪಾ ಜಂಬೂರೆ, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2018ರ ಪ್ರಕರಣ: ಸಿಜೆಪಿ ಪ್ರತಿಭಟನೆ ಹೊತ್ತಿನಲೇ ಧೃವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್

ಡಿಜಿಟಲ್ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ 2018ರ...

ಸೌದಿ ಅರಾಮ್ಕೊ ಪ್ರಧಾನ ಕಚೇರಿ ಮೇಲೆ ದಾಳಿ: ಮತ್ತೆ ಪುಟಿದೆದ್ದರೇ ಹೂತಿ ಬಂಡುಕೋರರು?

ಯೆಮನ್‌ನ ಹೂತಿ ಬಂಡುಕೋರರು ಸೌದಿ ಅರೇಬಿಯಾದ ಧಹ್ರಾನ್‌ನಲ್ಲಿರುವ ತೈಲ ದೈತ್ಯ ಕಂಪನಿ...

ಈ ದಿನ ಸಂಪಾದಕೀಯ | ಕಹಿ ನುಂಗುತ್ತಿರುವ ಕೃಷಿಕರು, ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿರುವ ದುಷ್ಟರು

ರೈತರು ಆಕ್ರೋಶಗೊಳ್ಳಲು, ಬೀದಿಗೆ ಇಳಿದು ಪ್ರತಿಭಟಿಸಲು ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ...

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...