ವಿಜಯಪುರ | ಬಿ ಎಂ ಪಾಟೀಲ ಪಬ್ಲಿಕ್ ಸ್ಕೂಲ್‌ನಲ್ಲಿ ಹಿರಿಯ ಪಾಲಕರ ದಿನ

Date:

ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿರುವ ಪ್ರಸ್ತುತ ದಿನಗಳಲ್ಲಿ ಶಾಲೆಗಳಲ್ಲಿ ಹಿರಿಯ ಪಾಲಕರ ದಿನ ಆಚರಿಸುತ್ತಿರುವುದು‌‌ ಹೆಮ್ಮೆಯ ವಿಷಯವಾಗಿದೆ ಎಂದು ಬಿಎಲ್‌ಡಿಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ ಎಸ್ ವಾರದ ಹೇಳಿದರು.

- Advertisement -

ವಿಜಯಪುರ ನಗರದ ಬಿಎಲ್‌ಡಿಇ‌ ಸಂಸ್ಥೆಯ ಶ್ರೀ ಬಿ ಎಂ ಪಾಟೀಲ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಪೂರ್ವ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಘಟಿಕೋತ್ಸವ ಮತ್ತು ಹಿರಿಯ ಪಾಲಕರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಇಂದಿನ ಯಾಂತ್ರಿಯ ಜಗತ್ತಿನಲ್ಲಿ ಸಂಬಂಧಗಳ ಬೆಸುಗೆ ಮುಖ್ಯವಾಗಿದೆ. ಮಕ್ಕಳು ಅಜ್ಜ, ಅಜ್ಜಿಯರ ತೊಡೆಯ ಮೇಲೆ ಆಟವಾಡುತ್ತ, ಕಥೆ ಕೇಳುತ್ತ, ಹಾಡು ಹೇಳುತ್ತ ಕಾಲ ಕಳೆಯಬೇಕು. ಇದರಿಂದ ಬಾಲ್ಯದಲ್ಲಿಯೇ ಮಕ್ಕಳಿಗೆ ತಂದೆ- ತಾಯಿಯರ ಜೊತೆಯಲ್ಲಿಯೇ ಹಿರಿಯರ ಪ್ರೀತಿಯೂ ಸಿಗುತ್ತದೆ. ಈ ದಿಸೆಯಲ್ಲಿ ಶ್ರೀ ಬಿ ಎಂ ಪಾಟೀಲ ಪಬ್ಲಿಕ್ ಸ್ಕೂಲ್ ಶಾಲೆಗೆ ಹಿರಿಯ ಪಾಲಕರನ್ನು ಆಹ್ವಾನಿಸಿ ನಾನಾ ಕ್ರೀಡೆಗಳನ್ನು ಆಯೋಜಿಸುತ್ತಿರುವುದು ಬಾಂಧವ್ಯ ಬೆಸೆಯುವ ಅತ್ಯುತ್ತಮ ಪ್ರಯತ್ನವಾಗಿದೆ” ಎಂದು ಶ್ಲಾಘಿಸಿದರು.

ಇದೇ ವೇಳೆ ಅಜ್ಜ- ಅಜ್ಜಿಯರಿಂದ ಕಿಕ್ಕಿರಿದು ತುಂಬಿದ್ದ ಸಭಾಂಗಣದಲ್ಲಿ ನಡೆದ ಹಿರಿಯರಿಗಾಗಿಯೇ ನಾನಾ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಇಳಿ ವಯಸ್ಸಿನಲ್ಲಿಯೂ ಹಿರಿಯರು ಮಕ್ಕಳಂತೆ ನಾನಾ ಆಟಗಳಲ್ಲಿ ಪಾಲ್ಗೊಂಡು ಸಂತಸಪಟ್ಟರು.

ಕ್ರೀಡೆಯಲ್ಲಿ ವಿಜೇತರಾದ ಹಿರಿಯರುಗಳಾದ ಶಂಕರ ಚವ್ಹಾಣ, ಡಾ. ರೇವಪ್ಪ ವಾಗ್ಮೋರೆ, ಭಾರತಿ ಮುಧೋಳ, ಸುಮಂಗಲಾ ಅವರಿಗೆ ಶಾಲೆಯ ಪ್ರಾಚಾರ್ಯ ಡಾ. ಶೈಜು ಕೆ ನಾಯರ ಬಹುಮಾನ ವಿತರಿಸಿದರು.

ಈ ಸುದ್ದಿ ಓದಿದ್ದೀರಾ? ಇರಾನ್‌ನ ಅಯತೊಲ್ಲಾ ಅಲಿ ಖಮೇನಿ ಹತ್ಯೆ; ಚಿಕ್ಕಬಳ್ಳಾಪುರದ ಗ್ರಾಮದಲ್ಲಿ 3 ದಿನಗಳ ಶೋಕಾಚರಣೆ

ಬಿಎಲ್‌ಡಿಇ ಸಂಸ್ಥೆಯ ನಿರ್ದೇಶಕ ಮಹೇಶ ಪಾಟೀಲ, ಸವಿತಾ ಮಂಗಳವೇಡೆ ಅವರು ಯುಕೆಜಿಯಿಂದ ಒಂದನೇ ತರಗತಿಗೆ ಕಾಲಿಡುತ್ತಿರುವ ಮಕ್ಕಳಿಗೆ ಪದವಿ ಪ್ರಧಾನ ಮಾಡಿದರು.

ಈ ಸಂದರ್ಭದಲ್ಲಿ ಶಾಲೆಯ ಹಿರಿಯ ಕಾರ್ಯ ಸಂಯೋಜಕಿ ದೀಪಾ ಜಂಬೂರೆ, ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...