ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಎಂ.ಎ ಪತ್ರಿಕೋದ್ಯಮ ಹಾಗೂ ವ್ಯಾಲ್ಯು ಆಡೆಡ್ ಡಿಪ್ಲೋಮಾ ಕೋರ್ಸ್ಗಳ ಪ್ರಥಮ ವರ್ಷದ ಉಳಿಕೆ ಸೀಟುಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ಯುಯುಸಿಎಂಎಸ್ ಮೂಲಕ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯದೆ ಇರುವವರು ಹಾಗೂ ಇದುವರೆಗೆ ಅರ್ಜಿ ಸಲ್ಲಿಸದ ಅರ್ಹ ಅಭ್ಯರ್ಥಿಗಳು ಕೂಡ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಸೆ.15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅಭ್ಯರ್ಥಿಗಳು ಯುಯುಸಿಎಂಎಸ್ ತಂತ್ರಾಂಶದ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ನೇರವಾಗಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಕ್ಕೆ ಭೇಟಿ ನೀಡಿ ಪ್ರವೇಶ ಪಡೆಯಬಹುದು ಎಂದು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ 9611488205 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





