ವಿಜಯಪುರ | ಬರದ ಛಾಯೆ: ರೈತರ ಸಂಕಷ್ಟಕ್ಕೆ ಸ್ಪಂದಿಸುವುದಾಗಿ ಸಚಿವ ಎಂ ಬಿ ಪಾಟೀಲ್ ಭರವಸೆ

Date:

ವಿಜಯಪುರ ಜಿಲ್ಲೆಯಲ್ಲಿ ಬರ ಪರಸ್ಥಿತಿ ಎದುರಾಗಿದೆ. ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರ ರೈತರ ಪರವಾಗಿ ನಿಲ್ಲಲಿದೆ. ಶೇ.17ರಷ್ಟು ಬಿತ್ತನೆಯಾಗಿದ್ದು, ಬಹುತೇಕ ಕಡೆ ಬಿತ್ತನೆಯೇ ಆಗಿಲ್ಲ. ರೈತರ ಈ ನೈಜ ಸ್ಥಿತಿಯನ್ನು ಖುದ್ದು ವೀಕ್ಷಿಸಲಾಗಿದೆ.‌ ಸಮಗ್ರ ಹಾಗೂ ವೈಜ್ಞಾನಿಕ ವರದಿ ಸಲ್ಲಿಸಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಡಾ. ಎಂ ಬಿ ಪಾಟೀಲ್ ಅವರು, ಸಕಾರಾತ್ಮಕ ಭರವಸೆ ನೀಡಿದರು.

- Advertisement -

ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾನುವಾರ ಬೆಳಿಗ್ಗೆ ಬರ ಅವಲೋಕನಾ ಪ್ರವಾಸ ಕೈಗೊಂಡ ಸಚಿವರು, ಹಿಟ್ಟಿನಹಳ್ಳಿ,ಮದಭಾವಿ, ಶಿವಣಗಿ, ದೇವರ ಹಿಪ್ಪರಗಿ, ಬಮ್ಮನಜೋಗಿ, ಕನ್ನೊಳಿ ಸೇರಿದಂತೆ ವಿವಿಧ ಪ್ರದೇಶಗಳ ವ್ಯಾಪ್ತಿಯ ಕೃಷಿಕರ ತಾಕುಗಳಿಗೆ ತೆರಳಿ ಹತ್ತಿ, ಕಬ್ಬು, ಸೂರ್ಯಕಾಂತಿ, ತೊಗರಿ ಸೇರಿದಂತೆ ವಿವಿಧ ಬೆಳೆಗಳ ಪ್ರಸ್ತುತ ಸ್ಥಿತಿಯನ್ನು ಅವಲೋಕಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

“ಬಿತ್ತಿದ ಬೆಳೆಗಳು ಸಂಪೂರ್ಣ ಹಾನಿಗೀಡಾಗುವ ಪರಿಸ್ಥಿತಿಯಿದೆ. ಹಾಗಾಗಿ ಖುದ್ದು ಬರ ಪರಿಸ್ಥಿತಿ ವೀಕ್ಷಿಸಿ, ಸಂಕಷ್ಟದಲ್ಲಿರುವ ರೈತರನ್ನು ಕಷ್ಟದಿಂದ ಪಾರು ಮಾಡುವ ಸಲುವಾಗಿ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಲಾಗುವುದು” ಎಂದು ಭರವಸೆ ನೀಡಿದರು.

ಕುಡಿಯುವ ನೀರಿಗೆ ತೊಂದರೆಯಿಲ್ಲ: “ಜಿಲ್ಲೆಯಲ್ಲಿ ವಾಡಿಕೆಯಷ್ಟು ಆಗಬೇಕಾದ ಮಳೆಯಾಗಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಬೆಳೆಗಳು ಒಣಗುವ ಹಂತದಲ್ಲಿವೆ. ಆದರೆ ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಏನಿಲ್ಲ. ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ ಸಾಕಷ್ಟು ನೀರಿನ ಸಂಗ್ರಹವಿದೆ. ಹಾಗಾಗಿ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆ ಇಲ್ಲ” ಎಂದರು.

ಆಗಸ್ಟ್ ಅಂತ್ಯದಲ್ಲಿ ಬರ ಘೋಷಣೆ ಸಾಧ್ಯತೆ: “ಕೇಂದ್ರ ಸರ್ಕಾರ ಆಗಸ್ಟ್ ಅಂತ್ಯದಲ್ಲಿ ಬರ ಪರಿಸ್ಥಿತಿ ಘೋಷಿಸಬಹುದು. ಬರ ಪರಿಸ್ಥಿತಿ ಎದುರಾದಾಗ ಕೇಂದ್ರ ಸರ್ಕಾರ ವಾಡಿಕೆಯಂತೆ ಆಗಸ್ಟ್ ಅಂತ್ಯದಲ್ಲಿ ಅಧಿಕೃತವಾಗಿ ಬರ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಿದರು.

ಬೆಳೆವಿಮೆ: ಕಳೆದ ವರ್ಷ ಜಿಲ್ಲೆಯಲ್ಲಿ 97 ಸಾವಿರ ಮಂದಿ ರೈತರು ಬೆಳೆ ವಿಮೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಅವರಿಗೆ 235 ಕೋಟಿ ರೂ. ಬೆಳೆವಿಮೆ ಮಂಜೂರಾಗಿದೆ. ಈ ವರ್ಷ 2.54 ಲಕ್ಷ ಮಂದಿ ರೈತರು ಬೆಳೆವಿಮೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಸಚಿವರು ತಿಳಿಸಿದರು.

ಮಳೆ ಅಭಾವದಿಂದಾಗಿ ಬೆಳೆಗಳ ಬೆಳವಣಿಗೆ ಕುಂಠಿತಗೊಂಡು ಬಿತ್ತನೆ ಮಾಡಿದ ಪೈರು ಒಣಗುತ್ತಿರುವುದನ್ನು ಪ್ರತ್ಯಕ್ಷವಾಗಿ ವೀಕ್ಷಿಸಿದ ಸಚಿವರು, ಸ್ಥಳದಲ್ಲಿದ್ದ ರೈತರು ಹಾಗೂ ಕೃಷಿ ಅಧಿಕಾರಿಗಳಿಂದ ಬೆಳೆಹಾನಿ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು.

ರೈತರ ಅಹವಾಲುಗಳನ್ನು ಅತ್ಯಂತ ತಾಳ್ಮೆಯಿಂದ ಆಲಿಸಿದ ಸಚಿವ ಡಾ. ಎಂ.ಬಿ. ಪಾಟೀಲ್ ಅವರು ಜಿಲ್ಲಾದ್ಯಂತ ಭೇಟಿ ನೀಡಿ ಮಳೆ ಹಾಗೂ ಬೆಳೆ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾದ್ಯಂತ ಸುದೀರ್ಘ ವೀಕ್ಷಣೆ ನಡೆಸಿ ಪೂರ್ಣ ಪ್ರಮಾಣದ ವರದಿ ಸಲ್ಲಿಸಲಾಗುವುದು. ವರದಿ ಸಲ್ಲಿಕೆಯಾದ ತಕ್ಷಣ ಸರ್ಕಾರವು ಸೂಕ್ತ ನಿರ್ಧಾರ ವರದಿಯನ್ನು ಸರ್ಕಾರಕ್ಕೆ ಕ್ರಮಗಳನ್ನು ಕೈಗೊಳ್ಳಲಿದೆ.

ರೈತರ ಪ್ರತಿಯೊಂದು ಸಂಕಷ್ಟಕ್ಕೂ ಸರ್ಕಾರವು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿ, ಅವರ ಹಿತರಕ್ಷಣೆಗೆ ಸದಾ ಬದ್ದವಾಗಿರುತ್ತದೆ ಎಂದು ಸಚಿವರು ಹೇಳಿದರು.

ಆರಂಭದಲ್ಲಿ ತೊಗರಿ ಬಿತ್ತನೆ ಮಾಡಿ ಮಳೆ ಕೊರತೆಯಿಂದ ಬೆಳೆ ಒಣಗಿದಾಗ ಬಳಿಕ ಹತ್ತಿ ಬಿತ್ತನೆ ಮಾಡಿ, ನಂತರ ಕೈಯಿಂದಲೇ ಬೀಜ ಊರಿ ಗೊಬ್ಬರ ಹಾಕಿದರೂ ಬೆಳೆ ಕೈಗೂಡದೆ ಕಷ್ಟದಲ್ಲಿದ್ದ ರೈತನ ನೋವಿಗೆ ಸಚಿವರು ಅತ್ಯಂತ ಆತ್ಮೀಯವಾಗಿ ಸ್ಪಂದಿಸಿದರು.

ನಿಗದಿತ ಅವಧಿಯಲ್ಲಿ ನಾಲ್ಕು ಅಡಿ ಬೆಳೆಯಬೇಕಿದ್ದ ಸೂರ್ಯಕಾಂತಿ ಕೇವಲ ಒಂದು ಅಡಿ ಮಾತ್ರ ಬೆಳೆದು ಸಂಪೂರ್ಣ ಇಳುವರಿ ಕುಸಿದಿರುವುದನ್ನು ಕಂಡು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಶೀಘ್ರದಲ್ಲೇ ಸರ್ಕಾರಕ್ಕೆ ಸಮಗ್ರ ವರದಿ: ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತಕ್ಷಣವೇ ಸೂಕ್ತ ಹಾಗೂ ನಿಖರವಾದ ವರದಿ ಸಿದ್ಧಪಡಿಸಿ ಸಲ್ಲಿಸುವಂತೆ ಸೂಚನೆ ನೀಡಿದ ಸಚಿವರು, ಸರ್ಕಾರವು ಸಂಕಷ್ಟದಲ್ಲಿರುವ ರೈತರ ಪರವಾಗಿ ನಿಲ್ಲಲು ಸಂಪೂರ್ಣ ಬದ್ಧವಾಗಿದೆ ಎಂದು ಭರವಸೆ ನೀಡಿದರು. ಸದ್ಯದಲ್ಲೇ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

ಇದನ್ನೂ ಓದಿದ್ದೀರಾ? ರಾಯಚೂರು | ಮಹಿಳೆಯರ ಹಕ್ಕು, ಸಮಾನತೆಗಾಗಿ ಹೋರಾಡಿದವರು ಅಂಬೇಡ್ಕರ್: ದೀಕ್ಷಾ ಎಸ್.ಎಲ್

ಈ ಸಂದರ್ಭದಲ್ಲಿ ನಾಗಠಾಣ ಮತಕ್ಷೇತ್ರದ ಶಾಸಕ ವಿಠಲ ಕಟಕದೊಂಡ, ಸಿಂದಗಿ ಶಾಸಕ ಅಶೋಕ ಮನಗೂಳಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಸಿದ್ದರಾಮ ಬರಗಿಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ರೈತರು, ಸಾರ್ವಜನಿಕರುಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

'ಸೌಜನ್ಯ ಪ್ರಕರಣ'ದ ಮರುತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನದ ಬೆನ್ನಲ್ಲೇ, ರಾಜ್ಯ...

ಕೊಪ್ಪಳ | ಡ್ಯಾನ್ಸ್‌ ಮಾಡಬೇಡವೆಂದು ಬುದ್ಧಿವಾದ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಮನೆಯಲ್ಲಿ ಡ್ಯಾನ್ಸ್ ಮಾಡಬೇಡ ಎಂದು ತಂದೆ-ತಾಯಿ ಬುದ್ದಿವಾದ ಹೇಳಿದಕ್ಕೆ ಮನನೊಂದು 10ನೇ...

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...