ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿರುವ ವಿಜಯಪುರ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ವಿಜಯಪುರದ ಪ್ರತಿಷ್ಠಿತ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ವಿವಿಧ ವಿಭಾಗಗಳ ಒಟ್ಟು 60 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
SSLC ಪಾಸಾದ ಅಭ್ಯರ್ಥಿಗಳಿಂದ ಹಿಡಿದು ಪದವೀಧರರ ವರೆಗೆ ವಿವಿಧ ವಿದ್ಯಾರ್ಹತೆ ಹೊಂದಿರುವವರಿಗೆ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಹುದ್ದೆಗೆ ಅನುಗುಣವಾಗಿ ಆಕರ್ಷಕ ವೇತನ ಶ್ರೇಣಿಯನ್ನೂ ನಿಗದಿಪಡಿಸಲಾಗಿದೆ.
ಯಾವ ಹುದ್ದೆಗಳಿಗೆ ನೇಮಕ?
ಒಟ್ಟು 60 ಹುದ್ದೆಗಳಲ್ಲಿ ಅಟೆಂಡರ್ 3, ಕಿರಿಯ ಸಹಾಯಕ 15, ಹಿರಿಯ ಸಹಾಯಕ 10, ಜೂನಿಯರ್ ಮ್ಯಾನೇಜರ್ 6, ವಾಹನ ಚಾಲಕ 1, ಸಿಪಾಯಿ 19 ಹಾಗೂ ನೈಟ್ ವಾಚ್‌ಮನ್ 6 ಹುದ್ದೆಗಳು ಸೇರಿವೆ.
ವಿದ್ಯಾರ್ಹತೆ ಏನು?
ಕಿರಿಯ ವ್ಯವಸ್ಥಾಪಕ, ಹಿರಿಯ ಸಹಾಯಕ ಹಾಗೂ ಕಿರಿಯ ಸಹಾಯಕ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಸಾಮಾನ್ಯ ಹಾಗೂ ಇತರೆ ವರ್ಗದ ಅಭ್ಯರ್ಥಿಗಳು ಕನಿಷ್ಠ 60% ಅಂಕ ಪಡೆದಿರಬೇಕು. SC, ST, ಪ್ರವರ್ಗ-1 ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಕನಿಷ್ಠ 45% ಅಂಕ ನಿಗದಿಪಡಿಸಲಾಗಿದೆ.
ಅಟೆಂಡರ್, ವಾಹನ ಚಾಲಕ, ಸಿಪಾಯಿ ಹಾಗೂ ನೈಟ್ ವಾಚ್‌ಮನ್ ಹುದ್ದೆಗಳಿಗೆ SSLC/CBSE ತೇರ್ಗಡೆ ಹೊಂದಿರಬೇಕು. ವಾಹನ ಚಾಲಕ ಹುದ್ದೆಗೆ ಚಾಲ್ತಿಯಲ್ಲಿರುವ ಲಘು ವಾಹನ ಚಾಲನಾ ಪರವಾನಗಿ ಕಡ್ಡಾಯವಾಗಿದೆ. ಎಲ್ಲ ಹುದ್ದೆಗಳಿಗೂ ಕನ್ನಡ ಭಾಷಾ ಜ್ಞಾನ ಕಡ್ಡಾಯ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಯೋಮಿತಿ
ಅಭ್ಯರ್ಥಿಗಳು 2026ರ ಸೆಪ್ಟೆಂಬರ್ 15ಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿ ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ. 2A, 2B, 3A, 3B, SC, ST ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ನಿಯಮಾನುಸಾರ 5 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ
ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹1,200 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. SC, ST, ಪ್ರವರ್ಗ-1 ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು ₹600 ಅರ್ಜಿ ಶುಲ್ಕ ಪಾವತಿಸಬೇಕು.
ವಿವಿಧ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಅಧಿಸೂಚನೆಯಲ್ಲಿನ ನಿಯಮಗಳನ್ನು ಪರಿಶೀಲಿಸಿ, ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.





