ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ ಹಕ್ಕುಗಳು, ಮತದಾರರ ಪಟ್ಟಿಯಲ್ಲಿನ ಲೋಪದೋಷಗಳು ಹಾಗೂ ಸಾರ್ವಜನಿಕರ ಅಹವಾಲುಗಳನ್ನು ಪರಿಶೀಲಿಸುವ ಉದ್ದೇಶದಿಂದ ‘SIR ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’ ಹಮ್ಮಿಕೊಳ್ಳಲಾಗಿದೆ.

- Advertisement -

ಈ ಅಭಿಯಾನದ ಭಾಗವಾಗಿ ಖ್ಯಾತ ಚಲನಚಿತ್ರ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಅವರು ಅಕ್ಟೋಬರ್ 4ರಂದು ವಿಜಯಪುರಕ್ಕೆ ಆಗಮಿಸಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಾಗರಿಕ ಸಂಘಟನೆಗಳೊಂದಿಗೆ ನಡೆಯುತ್ತಿರುವ ಪರಿಶೋಧನಾ ಕಾರ್ಯದ ಭಾಗವಾಗಿ ವಿಜಯಪುರಕ್ಕೂ ಭೇಟಿ ನೀಡಲಿದ್ದಾರೆ ಎಂದು ‘ಮತ ಕಾವಲು ಸಮಿತಿ ವಿಜಯಪುರ’ ತಿಳಿಸಿದೆ.

ವಿಜಯಪುರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ (ಜಂತರ್ ಮಂತರ್), ಸ್ಟೇಷನ್ ರಸ್ತೆಯಲ್ಲಿ ಅಕ್ಟೋಬರ್ 4ರಂದು ಸಂಜೆ 5ರಿಂದ 7ರವರೆಗೆ ಕಾರ್ಯಕ್ರಮ ನಡೆಯಲಿದೆ. ಪ್ರಕಾಶ್ ರಾಜ್ ಸೇರಿದಂತೆ ನಾಗರಿಕ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಭೆಯಲ್ಲಿ SIR ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು, ಮತದಾರರ ಪಟ್ಟಿಯಲ್ಲಿನ ಲೋಪದೋಷಗಳು, ಹೆಸರುಗಳ ಕುರಿತ ಗೊಂದಲಗಳು ಹಾಗೂ ದಾಖಲೆಗಳ ಪರಿಶೀಲನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

SIR ಪ್ರಕ್ರಿಯೆಯಡಿ ರಾಜ್ಯದ ಆಯ್ದ 100 ಮತಗಟ್ಟೆಗಳಲ್ಲಿ ಮತದಾರರ ಪಟ್ಟಿಯ ಪರಿಶೋಧನೆ ನಡೆಸಿ, ಸಮಸ್ಯೆ ಎದುರಿಸುತ್ತಿರುವ ಮತದಾರರಿಂದ ಮಾಹಿತಿ ಹಾಗೂ ದಾಖಲೆಗಳನ್ನು ಸಂಗ್ರಹಿಸುವುದು ಅಭಿಯಾನದ ಉದ್ದೇಶವಾಗಿದೆ. ಸಂಗ್ರಹಿಸಲಾದ ಮಾಹಿತಿಯ ಆಧಾರದ ಮೇಲೆ ನಾಗರಿಕ ವರದಿ ಸಿದ್ಧಪಡಿಸಲಾಗುವುದು ಎಂದು ಸಮಿತಿ ತಿಳಿಸಿದೆ.

ಮತದಾರರ ಹಕ್ಕುಗಳು ಹಾಗೂ ಮತದಾರರ ಪಟ್ಟಿಯಲ್ಲಿನ ಸಮಸ್ಯೆಗಳ ಕುರಿತು ನಡೆಯಲಿರುವ ಕಾರ್ಯಕ್ರಮದಲ್ಲಿ ವಿಜಯಪುರದ ನಾಗರಿಕರು, ಸಾಮಾಜಿಕ ಸಂಘಟನೆಗಳ ಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಮಾಧ್ಯಮ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ‘ಮತ ಕಾವಲು ಸಮಿತಿ ವಿಜಯಪುರ’ ಅಧ್ಯಕ್ಷ ಭೋಗೇಶ್ ಸೋಲಾಪುರ್ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...