ವಿಜಯಪುರ | ಎಸ್‌ಐಆರ್‌ ವಿಶೇಷ ಅಭಿಯಾನ; ಬಿಎಲ್‌ಒ ಮನೆ ಮನೆ ಭೇಟಿ

Date:

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) 2026 ರ ಅಂಗವಾಗಿ ಶೇ.100 ರಷ್ಟು ಮನೆ ಮನೆ ಭೇಟಿ ನೀಡಿ ಮತ್ತು ಗಣಕೀಕರಣ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಜುಲೈ 11 ಮತ್ತು 12 ರಂದು ಜಿಲ್ಲಾದ್ಯಂತ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ ತಿಳಿಸಿದ್ದಾರೆ.

- Advertisement -

ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಹಾಗೂ ಯಾವುದೇ ಅನರ್ಹ ಮತದಾರರು ಸೇರ್ಪಡೆಯಾಗಬಾರದು ಎಂಬ ಆಶಯದೊಂದಿಗೆ “SIR-2026 Early Reach and 100% Digitisation Campaign” ಹಮ್ಮಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ವಿಶೇಷ ಅಭಿಯಾನ ದಿನಗಳಂದು ಜಿಲ್ಲೆಯ ಎಲ್ಲಾ ಮತಗಟ್ಟೆ ಅಧಿಕಾರಿಗಳು (ಬಿಎಲ್‌ಓ) ಬೆಳಿಗ್ಗೆ 8:30 ಗಂಟೆಯಿಂದಲೇ ಕಡ್ಡಾಯವಾಗಿ ಮನೆ-ಮನೆಗೆ ಭೇಟಿ ನೀಡಿ ಎನ್ನೂಮರೇಷನ್ ಗಣತಿ ನಮೂನೆಗಳನ್ನು ವಿತರಿಸಲಿದ್ದಾರೆ. ದಿನಗೂಲಿ ಕಾರ್ಮಿಕರು, ಕಾರ್ಖಾನೆ ಕಾರ್ಮಿಕರು, ಸರ್ಕಾರಿ ಹಾಗೂ ಖಾಸಗಿ ಸಿಬ್ಬಂದಿ ಮತ್ತು ವ್ಯಾಪಾರಸ್ಥರು ಹಗಲೊತ್ತಿನಲ್ಲಿ ಮನೆಯಲ್ಲಿ ಲಭ್ಯವಿರುವುದಿಲ್ಲ. ಅದ್ದರಿಂದ ಅಂತಹ ಉದ್ಯೋಗಸ್ಥರು ಮನೆಯಲ್ಲಿ ಇರುವ ಸಮಯವನ್ನು ಗುರುತಿಸಿ, ಆದ್ಯತೆಯ ಮೇರೆಗೆ ಗಣತಿ ನಮೂನೆಗಳನ್ನು ವಿತರಿಸಲು ಮತ್ತು ಶೇ.ನೂರರಷ್ಟು ಗಣಕೀಕರಣ ಮಾಡಲು ಕ್ರಮವಹಿಸಲಾಗಿದೆ.

ಬೂತ್‌ ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಏಜೆಂಟರೊಂದಿಗೆ (ಬಿಎಲ್‌ಎ) ಸಮನ್ವಯ ಸಾಧಿಸಿ ಪ್ರತಿ ಮತದಾರನನ್ನು ತಲುಪಲಿದ್ದಾರೆ. ಅಗತ್ಯವಿದ್ದಲ್ಲಿ ಮತದಾರರಿಗೆ ಫಾರ್ಮ್ ಭರ್ತಿ ಮಾಡುವ ಕುರಿತು ಸೂಕ್ತ ಮಾರ್ಗದರ್ಶನ ನೀಡಿ, ನಿಗದಿತ ಅವಧಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ನಮೂನೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಪ್ರತಿ ಮನೆಗೂ ಗಣತಿ ನಮೂನೆ ತಲುಪಿರುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ನೋಡಲ್ ಅಧಿಕಾರಿಗಳು ಹಾಗೂ ಮೇಲ್ವಿಚಾರಕರು ನಿರಂತರವಾಗಿ ಮೇಲ್ವಿಚಾರಣೆ ನಡೆಸಲಿದ್ದಾರೆ. ಅಧಿಕಾರಿಗಳು ಪ್ರತಿದಿನದ ಪ್ರಗತಿ ವರದಿಯನ್ನು ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗೆ ಸಲ್ಲಿಸಲಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಈ ಅಭಿಯಾನ ಯಶಸ್ವಿಗೊಳಿಸಲು ಸಹಕರಿಸುವಂತೆಯೂ ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...