ವಿಜಯಪುರ | ವೈದ್ಯಕೀಯ ಕಾಲೇಜು ಸ್ಥಾಪನೆಗೆ ವಿಶೇಷಾಧಿಕಾರಿಗಳಿಂದ ಪರಿಶೀಲನೆ

Date:

ವಿಜಯಪುರ ಜಿಲ್ಲೆಯ ಜನರ ಬಹುಕಾಲದ ಕನಸಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಬೇಡಿಕೆಯ ಈಡೇರಿಕೆಯ ಕಾಲ ಸನ್ನಿಹಿತವಾಗಿದ್ದು, ರಾಜ್ಯ ಸರ್ಕಾರದ ವಿಶೇಷಾಧಿಕಾರಿಗಳಾದ ಡಾ. ರಾಜಶೇಖರ್ ದ್ಯಾಬೇರಿ, ವಿಜಯಪುರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಿರುವ ಮೂಲಸೌಕರ್ಯ ಮತ್ತು ಲಭ್ಯವಿರುವ ಸಂಪನ್ಮೂಲಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.

- Advertisement -

ಪರಿಶೀಲನೆ ವೇಳೆ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯ ಸದಸ್ಯರು ವಿಶೇಷಾಧಿಕಾರಿಗಳನ್ನು ಭೇಟಿ ಮಾಡಿ ಜಿಲ್ಲೆಯ ಜನರ ಬಹುವರ್ಷಗಳ ಬೇಡಿಕೆ, ವೈದ್ಯಕೀಯ ಶಿಕ್ಷಣದ ಅಗತ್ಯತೆ ಹಾಗೂ ಜಿಲ್ಲೆಯ ಆರೋಗ್ಯ ಕ್ಷೇತ್ರದ ಸವಾಲುಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಸಮಿತಿಯ ಸದಸ್ಯರು ಮಾತನಾಡಿ “ವಿಜಯಪುರವು ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಯಾಗಿದ್ದರೂ, ಇಲ್ಲಿಯವರೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗದಿರುವುದು ಜಿಲ್ಲೆಯ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಅನ್ಯಾಯವಾಗಿದೆ ಎಂದು ಅಭಿಪ್ರಾಯಪಟ್ಟರು. ವೈದ್ಯಕೀಯ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳು ದೂರದ ಜಿಲ್ಲೆಗಳಿಗೆ ತೆರಳಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದು, ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತಿದೆ” ಎಂದು ತಿಳಿಸಿದರು.

ಇದಲ್ಲದೆ, ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾದಲ್ಲಿ ಜಿಲ್ಲೆಯ ಆರೋಗ್ಯ ಸೇವೆಗಳ ಗುಣಮಟ್ಟ ಹೆಚ್ಚುವುದರ ಜೊತೆಗೆ ತಜ್ಞ ವೈದ್ಯರ ಲಭ್ಯತೆ, ಆಧುನಿಕ ಚಿಕಿತ್ಸಾ ಸೌಲಭ್ಯಗಳು ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ ಎಂದು ಹೋರಾಟ ಸಮಿತಿ ಪ್ರತಿಪಾದಿಸಿತು.

ವಿಶೇಷಾಧಿಕಾರಿ ಡಾ. ರಾಜಶೇಖರ್ ದ್ಯಾಬೇರಿ ಅವರು ಆಸ್ಪತ್ರೆಯ ವಿವಿಧ ವಿಭಾಗಗಳನ್ನು ಪರಿಶೀಲಿಸಿ, ಅಗತ್ಯ ಮಾಹಿತಿಯನ್ನು ಸಂಗ್ರಹಿಸಿದರು. “ಪರಿಶೀಲನಾ ವರದಿಯನ್ನು ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು” ಎಂದು ಅವರು ಭರವಸೆ ನೀಡಿದರು.

ಹೋರಾಟ ಸಮಿತಿಯ ಸದಸ್ಯರು, ಜಿಲ್ಲೆಯ ಜನರ ನ್ಯಾಯಸಮ್ಮತ ಬೇಡಿಕೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ, “ಮುಂಬರುವ ಬಜೆಟ್ ಅಥವಾ ಆಡಳಿತಾತ್ಮಕ ಹಂತದಲ್ಲೇ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಧಿಕೃತ ಅನುಮೋದನೆ ನೀಡಬೇಕು” ಎಂದು ಒತ್ತಾಯಿಸಿದರು.

“ವಿಜಯಪುರ ಜಿಲ್ಲೆಯ ಅಭಿವೃದ್ಧಿ, ಆರೋಗ್ಯ ಸೇವೆಗಳ ವಿಸ್ತರಣೆ ಹಾಗೂ ಯುವಕರ ಭವಿಷ್ಯದ ದೃಷ್ಟಿಯಿಂದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅತ್ಯಂತ ಅಗತ್ಯವಾಗಿದ್ದು, ಈ ಬೇಡಿಕೆ ಈಡೇರುವವರೆಗೆ ಹೋರಾಟ ನಿರಂತರವಾಗಿ ಮುಂದುವರಿಯಲಿದೆ” ಎಂದು ಹೋರಾಟ ಸಮಿತಿ ತಿಳಿಸಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ್ ಮಾಸ್ತಿಹೋಳಿ ಹೋರಾಟ ಸಮಿತಿಯ ಸದಸ್ಯರಾದ ಅನಿಲ್ ಹೊಸಮನಿ, ಅರವಿಂದ್ ಕುಲಕರ್ಣಿ, ಬಿ.ಭಾಗವಾನ ರೆಡ್ಡಿ, ಅಕ್ರಮ ಮಾಶಾಲ್ಕರ್, ಸುರೇಶ್ ಜೀಬಿ, ಪೂಜ್ಯ ಸಂಗನಬಸವ ಸ್ವಾಮೀಜಿ, ಲಲಿತಾ ಬಿಜ್ಜರಗಿ, ಎಲ್.ಎಚ್. ಲೆಂಡಿ, ಸಿದ್ದಲಿಂಗ ಬಾಗೇವಾಡಿ, ಡಾ. ಗುರಿಕರ್, ಗಿರೀಶ್ ಕಲಘಟಗಿ, ಲಕ್ಷ್ಮಣ್ ಕಂಬಾಗಿ, ಸಿದ್ರಾಮ್ ಹಿರೇಮಠ, ಮಲ್ಲು ಕಾಮನಕೇರಿ, ಶಿವರಂಜಿನಿ ಇತರರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ತಹಸೀಲ್ದಾರ್‌ಗೆ ಮನವಿ

ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯಿಂದ ಉಂಟಾಗುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕಲ್ಯಾಣ...

ಕಲಬುರಗಿ | ನಗರದ ಪ್ರಮುಖ ರಸ್ತೆಗಳಲ್ಲಿ ಭೂಗತ ವಿದ್ಯುತ್ ಜಾಲ ನಿರ್ಮಾಣಕ್ಕೆ ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ

ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಕಂಬಗಳು ಮತ್ತು ಮೇಲ್ಮಟ್ಟದ ತಂತಿಗಳ ಜಾಲವನ್ನು...

ವಿಜಯಪುರ |ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ;ಡಿಸಿ ಆನಂದ ಕೆ

ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು....

ಯಾದಗಿರಿ | ಬುದ್ಧನ ಸಮಾನತೆ, ಶಾಂತಿ ಸಂದೇಶದೊಂದಿಗೆ ವರ್ಷವಾಸ ಸಮಾರೋಪ; ಭಿಕ್ಕುಗಳಿಗೆ ಚೀವರದಾನ

ಬುದ್ಧನ ಸಮಾನತೆ, ಶಾಂತಿ, ಮಾನವೀಯತೆ ಹಾಗೂ ಪ್ರಜ್ಞೆಯ ಸಂದೇಶವನ್ನು ಜನಜೀವನದಲ್ಲಿ ಅಳವಡಿಸಿಕೊಳ್ಳುವ...