ವಿಜಯಪುರ | ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಡಾ. ತೇಜಸ್ವಿನಿ ವಲ್ಲಭ

Date:

ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಕ್ರೀಡೆಯ ಪಾತ್ರ ಮಹತ್ವದ್ದಾಗಿದ್ದು, ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ದೈಹಿಕ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದು ವಿಜಯಪುರದ ಬಿ.ಎಲ್.ಡಿ.ಇ ವಿಶ್ವವಿದ್ಯಾಲಯದ ವೈದ್ಯಕೀಯ ವಿಭಾಗದ ಡೀನ್ ಹಾಗೂ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ ಹೇಳಿದರು.

- Advertisement -

ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ಅಂಗವಾಗಿ ಬಿ.ಎಲ್.ಡಿ.ಇ ವಿಶ್ವವಿದ್ಯಾಲಯದ ಕ್ರೀಡಾ ವಿಭಾಗದ ವತಿಯಿಂದ ಆ. 28ರಿಂದ 30ರವರೆಗೆ ಮೂರು ದಿನಗಳ ಕಾಲ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಗೆ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ದೈಹಿಕ ಸದೃಢತೆ ಜತೆಗೆ ಮಾನಸಿಕ ಆರೋಗ್ಯವೂ ಸುಧಾರಿಸುತ್ತದೆ. ಆದ್ದರಿಂದ ಶಿಕ್ಷಣದೊಂದಿಗೆ ಕ್ರೀಡೆಗೂ ಸಮಾನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಬಿ.ಎಲ್.ಡಿ.ಇ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಸ್.ಎಸ್ ಕೋರಿ, ಮೇಜರ್ ಧ್ಯಾನ್ ಚಂದ್ ಅವರ ಜೀವನ, ಸಾಧನೆ ಹಾಗೂ ಭಾರತೀಯ ಹಾಕಿ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಕುರಿತು ಮಾತನಾಡಿದರು. ಸ್ಕೂಲ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನ ವಿದ್ಯಾರ್ಥಿನಿ ಶ್ರಾವಣಿ ಅವರು ರಾಷ್ಟ್ರೀಯ ಕ್ರೀಡಾ ದಿನದ ಪ್ರತಿಜ್ಞಾವಿಧಿ ಬೋಧಿಸಿದರು.

ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ಅರೀಜ್ ಅವರಿಗೆ ಅತ್ಯುತ್ತಮ ಮಹಿಳಾ ಕ್ರೀಡಾಪಟು ಹಾಗೂ ಮಿತಾಂಶು ಪಾಟೀಲ ಅವರಿಗೆ ಅತ್ಯುತ್ತಮ ಪುರುಷ ಕ್ರೀಡಾಪಟು ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕ್ರೀಡಾ ವಿಭಾಗದ ಸಹಾಯಕ ನಿರ್ದೇಶಕಿ ಡಾ. ಮಹಾದೇವಿ ವಾಲಿ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾ ವಿಭಾಗದ ಡೀನ್ ಡಾ. ಗಿರೀಶ್ ಕುಲ್ಲೊಳ್ಳಿ ವಂದಿಸಿದರು.

ಬಳಿಕ ಫಿಟ್ ಇಂಡಿಯಾ ವಾಕ್‌ಥಾನ್ ನಡೆಯಿತು. ಎರಡನೇ ದಿನ ‘ಏಕ್ ಘಂಟಾ ಖೇಲ್ ಕೆ ಮೈದಾನ್ ಮೇ’ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕ್ರಿಕೆಟ್, ಬ್ಯಾಡ್ಮಿಂಟನ್, ಟೇಬಲ್ ಟೆನಿಸ್ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂಡಿಯಾ ಒಕ್ಕೂಟದತ್ತ ಮುಖ ಮಾಡಿದರೇ ಜಗನ್?

ಆಂಧ್ರಪ್ರದೇಶದ ರಾಜಕಾರಣದಲ್ಲಿ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೊಸದೊಂದು ರಾಜಕೀಯ ಸಮೀಕರಣ ರೂಪುಗೊಳ್ಳುವ...

ಭಾಲ್ಕಿ | ಪತ್ರಿಕಾ ಭವನ ನಿರ್ಮಾಣಕ್ಕೆ ಪತ್ರಕರ್ತರ ಮನವಿ

ಭಾಲ್ಕಿ ನಗರದಲ್ಲಿ ಪತ್ರಕರ್ತರ ಸಂಘಕ್ಕೆ ನಿವೇಶನ ಒದಗಿಸಿ, ಪತ್ರಿಕಾ ಭವನ ನಿರ್ಮಿಸಿಕೊಡಬೇಕೆಂದು...

ನಮ್ಮ ದೇಶದಲ್ಲಿ ಅಲ್ಲದೆ ಪಾಕಿಸ್ತಾನದಲ್ಲಿ ತ್ರಿವರ್ಣ ಧ್ವಜ ಹಾರಿಸಬೇಕೇ?; ಕೇಂದ್ರದ ವಿರುದ್ಧ ಕೇಜ್ರಿವಾಲ್‌ ಕಿಡಿ

ನಮ್ಮ ದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸದಿದ್ದರೆ ಪಾಕಿಸ್ತಾನದಲ್ಲಿ ಹಾರಿಸಬೇಕೇ? ಭಾರತದ ತ್ರಿವರ್ಣ...

ಕಮಲನಗರ | ಚಕ್ರ ಎಸೆತ : ಅಂಬೇಡ್ಕರ್‌ ವಸತಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

2026–27ನೇ ಸಾಲಿನ ಕ್ರೀಡಾಕೂಟದಲ್ಲಿ ಕಮಲನಗರ ತಾಲ್ಲೂಕಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ...