ವಿಜಯಪುರ | ಕೃಷ್ಣಾ ನೀರಿನ ನ್ಯಾಯಯುತ ಹಂಚಿಕೆ ಆಗ್ರಹಿಸಿ ರಾಜ್ಯವ್ಯಾಪಿ ಹೋರಾಟ

Date:

ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿ ವತಿಯಿಂದ ಇಂದು ವಿಜಯಪುರ ನಗರದ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ರೈತ ಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು, ಸಾಮಾಜಿಕ ಹೋರಾಟಗಾರರು ಹಾಗೂ ವಿವಿಧ ಸಂಘಟನೆಗಳ ಮುಖಂಡರ ಸಭೆ ನಡೆಯಿತು.

- Advertisement -

ಸಭೆಯಲ್ಲಿ ಕೃಷ್ಣಾ ನದಿ ನೀರಿನ ಹಂಚಿಕೆ, ಆಲಮಟ್ಟಿ ಅಣೆಕಟ್ಟಿನ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಿಸುವಂತೆ ಮತ್ತು ಕೃಷ್ಣಾ ಕಣಿವೆಯ ರೈತರ ನೀರಾವರಿ ಹಕ್ಕುಗಳು, ಉತ್ತರ ಕರ್ನಾಟಕದ ಜನರ ನ್ಯಾಯಯುತ ಬೇಡಿಕೆಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಸಭೆಯಲ್ಲಿ ಮಾತನಾಡಿದ ಹಿರಿಯ ಹೋರಾಟಗಾರ ಎಸ್.ವಿ ಪಾಟೀಲ್, “ಕೃಷ್ಣಾ ಕೊಳ್ಳದ ಜನರ ಹಕ್ಕುಗಳಿಗಾಗಿ ನಿರಂತರ ಹೋರಾಟ ಮತ್ತು ಪ್ರಯತ್ನಗಳನ್ನು ಮುಂದುವರಿಸಬೇಕೆಂದು ಕರೆ ನೀಡಿದರು. ಮುಂದಿನ ಒಂದು ತಿಂಗಳೊಳಗೆ ಸಮಗ್ರ ಹೋರಾಟದ ಕರಡು ಸಿದ್ಧಪಡಿಸಿ, ವಿಷಯ ಪರಿಣಿತರು ಮತ್ತು ತಂತ್ರಜ್ಞರನ್ನು ಒಳಗೊಂಡ ಕಾರ್ಯಾಗಾರವನ್ನು ಆಯೋಜಿಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸಬೇಕೆಂದು” ಸಲಹೆ ನೀಡಿದರು.

ರವಿ ಪಾಟೀಲ್ ಮಾತನಾಡಿ, “ನಾವು ಯೋಜನೆಯ ಫಲಾನುಭವಿಗಳಲ್ಲ, ಯೋಜನೆಯಿಂದ ನಿರಾಶ್ರಿತರಾದವರು. ಆದ್ದರಿಂದ ನಮ್ಮ ಹಕ್ಕುಗಳಿಗಾಗಿ ಹೋರಾಟ ಅನಿವಾರ್ಯವಾಗಿದೆ. ರಾಜ್ಯದ ಎಲ್ಲಾ ಸಂಬಂಧಿತ ಜಿಲ್ಲೆಗಳಲ್ಲಿ ಸಭೆಗಳನ್ನು ನಡೆಸಿ ಸ್ಥಳೀಯ ಹೋರಾಟ ಸಮಿತಿಗಳನ್ನು ರಚಿಸಬೇಕು. ಜನಪ್ರತಿನಿಧಿಗಳ ಬೆಂಬಲ ಪಡೆಯಲು ಅವರನ್ನು ಹೋರಾಟದ ಭಾಗವಾಗಿಸಬೇಕು. ಹೋರಾಟವನ್ನು ಬಲಿಷ್ಠಗೊಳಿಸಲು ವಿವಿಧ ಸಂಘ-ಸಂಸ್ಥೆಗಳು ಮತ್ತು ಅಸೋಸಿಯೇಷನ್‌ಗಳಿಂದ ಆರ್ಥಿಕ ಸಹಕಾರವನ್ನು ಪಡೆಯಬೇಕು” ಎಂದು ಅಭಿಪ್ರಾಯಪಟ್ಟರು.

ಅದೃಶ್ಯಪ್ಪ ದೇಸಾಯಿ (ಗಲಗಲಿ) ಮಾತನಾಡಿ, “ಬಚಾವತ್ ಆಯೋಗದ ಶಿಫಾರಸುಗಳ ಪ್ರಕಾರ ಕರ್ನಾಟಕಕ್ಕೆ ನ್ಯಾಯಯುತ ನೀರಿನ ಹಂಚಿಕೆ ದೊರೆತಿದ್ದರೂ, ರಾಜ್ಯ ಸರ್ಕಾರಗಳು ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ವಿಫಲವಾಗಿವೆ. ಬ್ರಿಜೇಶ್ ಕುಮಾರ್ ನ್ಯಾಯಮಂಡಳಿಯ ವರದಿಯ ನಂತರವೂ ವಿಜಯಪುರ ಸೇರಿದಂತೆ ಕೃಷ್ಣಾ ಕೊಳ್ಳದ ಜನರು ತಮ್ಮ ಹಕ್ಕಿನ ಸುಮಾರು 80 ಟಿಎಂಸಿ ನೀರಿನ ಸಂಪೂರ್ಣ ಪ್ರಯೋಜನವನ್ನು ಪಡೆಯುತ್ತಿಲ್ಲ. ತಮ್ಮ ಹಕ್ಕಿನ ನೀರಿನ ಬದಲಾಗಿ ಉಳಿದ ನೀರನ್ನು ಮಾತ್ರ ಬಳಸುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ವಿಷಾದ ವ್ಯಕ್ತಪಡಿಸಿದರು.

ಸಭೆಯಲ್ಲಿ ಮುಂದಿನ ಹಂತದ ಹೋರಾಟದ ಕುರಿತು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ರಾಜ್ಯದ 7 ಜಿಲ್ಲೆಗಳಲ್ಲಿ ಜನಜಾಗೃತಿ ಸಭೆಗಳನ್ನು ನಡೆಸಿ ನೈಜ ಹೋರಾಟಗಾರರನ್ನು ಗುರುತಿಸುವ ಕಾರ್ಯ ಆರಂಭಿಸಲಾಗುವುದು. ಸಂಸದರು ಹಾಗೂ ಶಾಸಕರನ್ನು ಭೇಟಿ ಮಾಡಿ ಬೆಂಬಲ ಕೋರಲಾಗುವುದು. ಅಗತ್ಯವಿದ್ದಲ್ಲಿ ರಾಷ್ಟ್ರೀಯ ಮಟ್ಟದ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಕೃಷ್ಣಾ ಕೊಳ್ಳದ ಜನರ ಬೇಡಿಕೆಗಳನ್ನು ಮಂಡಿಸಲು ಚರ್ಚಿಸಲಾಯಿತು.

“ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗುವ ಮೊದಲೇ ಹೋರಾಟವನ್ನು ತೀವ್ರಗೊಳಿಸಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಈ ನಿಟ್ಟಿನಲ್ಲಿ ಪಾದಯಾತ್ರೆ ಆಯೋಜಿಸಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುವುದು, ಜನಪ್ರತಿನಿಧಿಗಳ ಮನೆಗಳ ಎದುರು ಹಂತ ಹಂತವಾಗಿ ಧರಣಿ ನಡೆಸುವುದು ಹಾಗೂ ಜನಾಂದೋಲನ ರೂಪಿಸುವ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಸಮಿತಿ ತಿಳಿಯಪಡಿಸಿತು.

ಹೋರಾಟವನ್ನು ದೀರ್ಘಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಸಲು ಪ್ರತಿಯೊಬ್ಬ ಹೋರಾಟಗಾರರು ಹಾಗೂ ಸಂಘಟನೆಗಳು ತಮ್ಮ ವಾರ್ಷಿಕ ಆದಾಯದ ಒಂದು ಭಾಗವನ್ನು ಹೋರಾಟದ ನಿಧಿಗೆ ನೀಡುವ ಕುರಿತು ಸಹ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಕೃಷ್ಣಾ ಕೊಳ್ಳದ ನೀರು, ನೆಲ ಮತ್ತು ರೈತರ ಹಕ್ಕುಗಳಿಗಾಗಿ ಯಾವುದೇ ರಾಜಿ ಇಲ್ಲ. ಈ ಭಾಗದ ಜನರಿಗೆ ನ್ಯಾಯ ದೊರೆಯುವವರೆಗೂ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿ ನಿರಂತರವಾಗಿ ಮುಂದುವರಿಸಲಾಗುವುದು ಎಂದು ಸಭೆಯಲ್ಲಿ ಏಕಮತದಿಂದ ಘೋಷಿಸಲಾಯಿತು.

ಸಭೆಯಲ್ಲಿ ವಿವಿಧ ರೈತ ಸಂಘಟನೆಗಳ ಮುಖಂಡರಾದ ಅರವಿಂದ್ ಕುಲಕರ್ಣಿ, ಅನಿಲ ಹೊಸಮನಿ,ಸುರೇಶ ಬಿಜಾಪುರ್, ಸಿದ್ದಲಿಂಗ ಬಾಗೆವಾಡಿ, ಭೋಗೇಶ ಸೊಲ್ಲಾಪುರ್, ಮಲ್ಲಿಕಾರ್ಜುನ ಎಚ್ ಟಿ, ಭರತ ಕುಮಾರ ಎಚ್ ಟಿ, ಲಲಿತ ಬಿಜ್ಜರಗಿ, ಶಿವಬಾಳಮ್ಮ ಕೊಂಡಗೂಳಿ, ಶ್ರೀಕಾಂತ ಕೊಂಡಗೂಳಿ ಹಾಗೂ ಪ್ರಗತಿಪರ ಚಿಂತಕರು, ಸಾಮಾಜಿಕ ಹೋರಾಟಗಾರರು ಹಾಗೂ ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯ

ಹಟ್ಟಿ ಚಿನ್ನದ ಗಣಿ ಕಾರ್ಮಿಕರ ದೀರ್ಘಾವಧಿಯ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಒತ್ತಾಯಿಸಿ...

ಹಾಸನ | ಅ. 29ರಿಂದ ನ. 11ರವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವ

ಹಾಸನ ಜಿಲ್ಲೆಯಲ್ಲಿ 12 ದಿನ ಭಕ್ತರಿಗೆ ಹಾಸನಾಂಬೆ ದರ್ಶನ ಶುರುವಾಗಲಿದೆ. ಅಕ್ಟೋಬರ್...

ಚಿಕ್ಕಮಗಳೂರು | ಭೀಕರ ರಸ್ತೆ ಅಪಘಾತ: ಸವಾರ ಸ್ಥಳದಲ್ಲೇ ಸಾವು 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಕಸ್ಕೆಬೈಲ್‌ನಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ...

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...