ವಿಜಯಪುರ |ಆಲಮಟ್ಟಿಯಿಂದ ನಾರಾಯಣಪುರಕ್ಕೆ ನೀರು ಹರಿಸುವುದನ್ನು ನಿಲ್ಲಿಸಿ: ರೈತ ಸಂಘಟನೆಗಳ ಆಗ್ರಹ

Date:

ಆಲಮಟ್ಟಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಹರಿಸುತ್ತಿರುವ ನೀರನ್ನು ತಕ್ಷಣ ಸ್ಥಗಿತಗೊಳಿಸಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ರೈತರ ಬೆಳೆಗಳ ರಕ್ಷಣೆಗಾಗಿ ಡಿಸೆಂಬರ್ 30ರವರೆಗೆ ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿ ಯೋಜನೆಗಳ ಎಲ್ಲ ಕಾಲುವೆಗಳಿಗೆ ನಿರಂತರ ನೀರು ಹರಿಸಬೇಕು ಎಂದು ಮೂರು ರೈತ ಸಂಘಟನೆಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿವೆ.

- Advertisement -

ಅಖಂಡ ಕರ್ನಾಟಕ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಆಲಮಟ್ಟಿ ಮುಖ್ಯ ಅಭಿಯಂತರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಸ್ಥಳೀಯ ಭಾಗದಲ್ಲಿ ಮಳೆ ಕೈಕೊಟ್ಟಿದ್ದರೂ ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಉತ್ತಮ ಮಳೆಯಾದ ಪರಿಣಾಮ ಆಲಮಟ್ಟಿ ಜಲಾಶಯ ಭರ್ತಿಯಾಗಿತ್ತು. ಆದರೆ ಮುಂಗಾರು ಬೆಳೆಗಳಿಗೆ ಸಮರ್ಪಕ ನೀರು ನೀಡದ ಸರ್ಕಾರ, ಇದೀಗ ಹಿಂಗಾರು ಬೆಳೆಗಳಿಗೂ ನೀರು ನಿರಾಕರಿಸುತ್ತಿರುವುದು ರೈತ ವಿರೋಧಿ ಕ್ರಮ ಎಂದು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಕಳೆದ 12-13 ದಿನಗಳಿಂದ ಪ್ರತಿದಿನ 17ರಿಂದ 20 ಸಾವಿರ ಕ್ಯೂಸೆಕ್ ನೀರನ್ನು ನಾರಾಯಣಪುರ ಜಲಾಶಯಕ್ಕೆ ಹರಿಸಲಾಗುತ್ತಿದೆ. ಈಗಾಗಲೇ ತೆಲಂಗಾಣಕ್ಕೆ 7 ಟಿಎಂಸಿಗೂ ಅಧಿಕ ನೀರು ಹರಿಸಲಾಗಿದೆ. ಇದರಿಂದ ಆಲಮಟ್ಟಿ ಜಲಾಶಯದ ಸಂಗ್ರಹ ಕಡಿಮೆಯಾಗುತ್ತಿದ್ದು, ಬೇಸಿಗೆಯಲ್ಲಿ ಕುಡಿಯುವ ನೀರಿಗೂ ಸಂಕಷ್ಟ ಎದುರಾಗುವ ಆತಂಕವಿದೆ ಎಂದರು.ಆಲಮಟ್ಟಿ ಜಲಾಶಯಕ್ಕಾಗಿ ಈ ಭಾಗದ ರೈತರು ಫಲವತ್ತಾದ ಭೂಮಿ ಕಳೆದುಕೊಂಡಿದ್ದರೂ ನೀರಾವರಿ ವಿಚಾರದಲ್ಲಿ ಅನ್ಯಾಯ ಮುಂದುವರಿದಿದೆ. ತೊಗರಿ, ಹತ್ತಿ, ಮೆಕ್ಕೆಜೋಳ ಹಾಗೂ ಈರುಳ್ಳಿ ಬೆಳೆಗಳಿಗೆ ತುರ್ತಾಗಿ ನೀರಿನ ಅಗತ್ಯವಿದ್ದು, ಸ್ಥಳೀಯ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ಬೇರೆ ರಾಜ್ಯಗಳಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಬೇಡಿಕೆಗಳನ್ನು ತಕ್ಷಣ ಈಡೇರಿಸದಿದ್ದರೆ ಆಲಮಟ್ಟಿಯ ಕೆಬಿಜೆಎನ್‌ಎಲ್ ಮುಖ್ಯ ಅಭಿಯಂತರರ ಕಚೇರಿ ಎದುರು ಮೂರು ರೈತ ಸಂಘಟನೆಗಳ ನೇತೃತ್ವದಲ್ಲಿ ಜಂಟಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ |ಪ್ರತಿ ವಿದ್ಯಾರ್ಥಿಗೂ 60ಕ್ಕೂ ಹೆಚ್ಚು ಅಂಕ, ಪ್ರತಿ ಶಾಲೆಗೂ ಶೇ.100 ಫಲಿತಾಂಶ: ಮಧು ಬಂಗಾರಪ್ಪ ಗುರಿ

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಫಲಿತಾಂಶ ಸುಧಾರಿಸುವುದಷ್ಟೇ ಅಲ್ಲ, ಪ್ರತಿಯೊಬ್ಬ...

ರಾಯಚೂರು | ಮದರಸಾದಲ್ಲಿ ಬಾಲಕನಿಗೆ ಹಲ್ಲೆ; ಶಿಕ್ಷಕ ಬಂಧನ

ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಮದರಸಾ ದಾರುಲ್ ಹುಪ್ಪಾಜ್ ಶಾಲೆಯಲ್ಲಿ...

ಕಲಬುರಗಿ | ಬಿಸಿಎಂ ಹಾಸ್ಟೆಲ್‌ಗಳಲ್ಲಿ ಆಹಾರ ಕಲಬೆರಕೆ ಆರೋಪ; ವಾರ್ಡನ್‌ಗಳು, ಅಧಿಕಾರಿಗಳ ಅಮಾನತಿಗೆ ಆಗ್ರಹ

ಜೇವರ್ಗಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಎಂ ವಸತಿ...

ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ...