ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

Date:

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ವಿಜಯಪುರ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಕೆ-ಸೆಟ್ ಪರೀಕ್ಷೆಯ ಸಿದ್ಧತೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳ ಭದ್ರತೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ನಗರದ 24 ಪರೀಕ್ಷಾ ಕೇಂದ್ರಗಳಲ್ಲಿ ಕೆ-ಸೆಟ್ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗೆ 8,817 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು. ಪರೀಕ್ಷಾ ಪ್ರಶ್ನೆ ಪತ್ರಿಕೆ ಕೊಂಡೊಯ್ಯಲು 9 ಮಾರ್ಗಗಳನ್ನು ಗುರುತಿಸಲಾಗಿದೆ. ಪರೀಕ್ಷಾ ಮಾರ್ಗಗಳ ಮೂಲಕ ಪ್ರಶ್ನೆ ಪತ್ರಿಕೆಗಳನ್ನು ಸುರಕ್ಷಿತವಾಗಿ ತೆಗೆದುಕೊಂಡು ಹೋಗಲು ನಿಯೋಜಿತ ಅಧಿಕಾರಿಗಳಿಗೆ ಸೂಚಿಸಲಾಯಿತು.

ಪರೀಕ್ಷೆಗೆ ಸಂಬಂಧಿಸಿದಂತೆ ಗೌಪ್ಯ ಸಾಮಗ್ರಿಗಳನ್ನು ಮಾರ್ಗಾಧಿಕಾರಿಗಳ ತಂಡಕ್ಕೆ ಅಪರ ಜಿಲ್ಲಾಧಿಕಾರಿಗಳು, ಜಿಲ್ಲಾ ಖಜಾನೆ ಉಪನಿರ್ದೇಶಕರು ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನೊಳಗೊಂಡ ಸಮಿತಿ ನೇಮಿಸಲಾಗಿದೆ ಎಂದು ತಿಳಿಸಿದರು.

ತಂಡ ರಚನೆ: ಪರೀಕ್ಷಾ ಸಾಮಗ್ರಿಗಳನ್ನು ಭದ್ರವಾಗಿ ತಲುಪಿಸಲು ತ್ರಿ-ಸದಸ್ಯ ಮಾರ್ಗಾಧಿಕಾರಿಗಳ ತಂಡ ನಿಯೋಜಿಸಲಾಗಿದೆ. ಮಾರ್ಗಾಧಿಕಾರಿಗಳು ಬೆಳಿಗ್ಗೆ 7 ಗಂಟೆಗೆ ಜಿಲ್ಲಾ ಖಜಾನೆಯಿಂದ ಸಾಮಗ್ರಿಗಳನ್ನು ಪಡೆದು ಕೇಂದ್ರಗಳಿಗೆ ನಿಗದಿತ ಅವಧಿಯಲ್ಲಿ ತಲುಪಿಸಬೇಕು ಎಂದು ತಿಳಿಸಿದರು.

ವೀಕ್ಷಕರ ನೇಮಕ: ಪ್ರತಿ ಪರೀಕ್ಷಾ ಕೇಂದ್ರಕ್ಕೂ ಓರ್ವರಂತೆ ವೀಕ್ಷಕರನ್ನು ನೇಮಿಸಲಾಗಿದ್ದು, ಪರೀಕ್ಷೆ ಪ್ರಾರಂಭವಾಗುವ 2 ಗಂಟೆ ಮುಂಚಿತವಾಗಿಯೇ ಕೇಂದ್ರದಲ್ಲಿ ಹಾಜರಿದ್ದು, ಪರೀಕ್ಷೆ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದರು.

ಫ್ಲೈಯಿಂಗ್ ಸ್ಕ್ವಾಡ್: ಪ್ರತಿ 4 ರಿಂದ 5 ಪರೀಕ್ಷಾ ಕೇಂದ್ರಗಳಿಗೆ ಒಂದರಂತೆ 5 ಸದಸ್ಯರನ್ನೊಳಗೊಂಡ ಫ್ಲೈಯಿಂಗ್ ಸ್ಕ್ವಾಡ್ ತಂಡವನ್ನು ನಿಯೋಜಿಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ಲೋಪದೋಷಗಳಿಲ್ಲದೆ, ಯಾವುದೇ ಸಮಸ್ಯೆ ಬಾರದಂತೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿ ಪೊಲೀಸ್ ಹಾಗೂ ಗೃಹರಕ್ಷಕ ದಳ ಸಿಬ್ಬಂದಿಯಿಂದ ಸಂಪೂರ್ಣ ಫ್ರಿಸ್ಕಿಂಗ್-ತಪಾಸಣೆ ನಡೆಸಿದ ನಂತರವೇ ಪ್ರವೇಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಸಿಸಿಟಿವಿ-ಜಾಮರ್ ವ್ಯವಸ್ಥೆ: ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಜಾಮರ್‌ಗಳನ್ನು ಸಹ ಅಳವಡಿಸಲಾಗುತ್ತಿದೆ ಎಂದು ತಿಳಿಸಿದರು.

ಅಭ್ಯರ್ಥಿಗಳು ಪರೀಕ್ಷಾ ದಿನದಂದು ತಮ್ಮ ಪ್ರವೇಶ ಪತ್ರವನ್ನು (ಅಡ್ಮಿಟ್ ಕಾರ್ಡ್) ಕಡ್ಡಾಯವಾಗಿ ತರತಕ್ಕದ್ದು. ಪರೀಕ್ಷಾ ಕಾರ್ಯದಲ್ಲಿ ಲೋಪದೋಷಗಳಾಗದಂತೆ ಸಾರಿಗೆ ಸಂಸ್ಥೆ, ಹೆಸ್ಕಾಂ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸೂಕ್ತ ಸಮನ್ವಯ ಸಾಧಿಸಲಾಗಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಖಜಾನೆ ಇಲಾಖೆಯ ಉಪ ನಿರ್ದೇಶಕ ಆನಂದ ಮುಚ್ಚಂಡಿ, ಹೆಸ್ಕಾಂನ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಕೆಕೆಆರ್‌ಟಿಸಿಯ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಎ. ಬಿರಾದಾರ, ಪಿಎಸ್‌ಐ ಆರೀಫ್, ತರಬೇತಿದಾರರಾದ ಎಲ್.ಜಿ. ಕುಂಬಾರ ಮತ್ತು ಜಗದೀಶ ಗುಲಗಂಜಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಮತ್ತು ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಅಧೀಕ್ಷಕರು, ಉಪ ಅಧೀಕ್ಷಕರು ಹಾಗೂ ಪರೀಕ್ಷೆಗಳಿಗೆ ನಿಯೋಜನೆಗೊಂಡ ಅಧಿಕಾರಿಗಳು, ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

‘ಸಮಸ್ತ’ ಆ್ಯಪ್ ಸಮಸ್ಯೆ ಪರಿಹರಿಸಿ, ಗೃಹಲಕ್ಷ್ಮಿ ಹೆಚ್ಚುವರಿ ಕೆಲಸ ಕೈಬಿಡಿ: ಆಶಾ ಕಾರ್ಯಕರ್ತೆಯರ ಆಗ್ರಹ

‘ಸಮಸ್ತ’ ಆ್ಯಪ್‌ನಲ್ಲಿ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು, ಗೃಹಲಕ್ಷ್ಮಿ ಯೋಜನೆಯ...

ಇಳಕಲ್ | SIR ರದ್ದು, ಜ್ಞಾನೇಶ್ ಕುಮಾರ್ ವಜಾಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...