ವಿಜಯಪುರ | ಕೃಷಿ ಇಲಾಖೆ ನೇಮಕಾತಿ ನಿಯಮ ತಿದ್ದುಪಡಿ ಆಗ್ರಹಿಸಿ ವಿದ್ಯಾರ್ಥಿಗಳ ಮುಷ್ಕರ

Date:

ಕೃಷಿ ಇಲಾಖೆ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ಬಿ.ಇ ಬಯೋಟೆಕ್ನಾಲಜಿ ಪದವೀಧರರಿಗೂ ಅವಕಾಶ ಕಲ್ಪಿಸಿರುವುದನ್ನು ವಿರೋಧಿಸಿ, ವಿಜಯಪುರ ನಗರದ ಹೊರವಲಯದ ಹಿಟ್ನಳ್ಳಿ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

- Advertisement -

ಕೃಷಿ ವಿಷಯಗಳಲ್ಲಿ ವಿಶೇಷವಾಗಿ ಪದವಿ ಪಡೆದ ವಿದ್ಯಾರ್ಥಿಗಳ ಹಕ್ಕಿಗೆ ಧಕ್ಕೆಯಾಗುವ ರೀತಿಯಲ್ಲಿ ನೇಮಕಾತಿ ನಿಯಮ ರೂಪಿಸಲಾಗಿದೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು, “ಭಾರತೀಯ ಕೃಷಿ ಅನುಸಂಧಾನ ಪರಿಷತ್ (ICAR) ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಪದವಿ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಕೃಷಿ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅವಕಾಶ ನೀಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಅಲ್ಲದೆ, ಐಸಿಎಆರ್ ಮಾನ್ಯತೆ ಇಲ್ಲದ ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ಕೃಷಿ ಇಲಾಖೆಯ ನೇಮಕಾತಿಯಲ್ಲಿ ಅವಕಾಶ ನೀಡಬಾರದು. ಕೃಷಿ ಇಲಾಖೆಯಲ್ಲಿ ವರ್ಷದಿಂದ ವರ್ಷಕ್ಕೆ ಖಾಲಿಯಾಗುವ ಹುದ್ದೆಗಳನ್ನು ನಿಯಮಿತವಾಗಿ ಭರ್ತಿ ಮಾಡುವ ಮೂಲಕ ಕೃಷಿ ಪದವೀಧರರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂಬುದು ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯಾಗಿದೆ.

Advertisements

ವಿದ್ಯಾರ್ಥಿ ಮುಖಂಡರಾದ ಎಂ.ಡಿ. ಅಮೀರ್, ಸುರೇಶ ಬಿರಾದಾರ, ಶರಣಬಸು ನಾಯ್ಕಲ್, ರೋಹಿಣಿ ದೇಸಾಯಿ ಹಾಗೂ ವೈಷ್ಣವಿ ಕೆ. ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರಭಾರಿ ಡೀನ್ ಡಾ. ಎ.ಪಿ. ಬಿರಾದಾರ ಹಾಗೂ ಸಹ ವಿಸ್ತರಣೆ ನಿರ್ದೇಶಕ ಡಾ. ಆರ್.ಬಿ. ಜೊಳ್ಳಿ ಅವರಿಗೆ ಮನವಿ ಸಲ್ಲಿಸಿದರು. ಬಳಿಕ ಕಾಲೇಜು ಆವರಣದ ಮುಂಭಾಗದಲ್ಲಿ ಶಾಂತಿಯುತವಾಗಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದರು.

ಹೋರಾಟದಲ್ಲಿ ಮಹಾವಿದ್ಯಾಲಯದ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ, ಸರ್ಕಾರ ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕೆಂದು ಒತ್ತಾಯಿಸಿದರು. ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ವಿದ್ಯಾರ್ಥಿಗಳು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...