ವಿಜಯಪುರ | ʼಸೂರ್ಯಕಾಂತಿʼಗೆ ಬೆಂಬಲ ಬೆಲೆ ಘೋಷಣೆ

Date:

ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ಗೆ ₹7,721 ಬೆಂಬಲ ಬೆಲೆಯಡಿ ಖರೀದಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

- Advertisement -

ಖರೀದಿಗಾಗಿ ರೈತರ ನೋಂದಣಿಯನ್ನು 50 ದಿನಗಳವರೆಗೆ ಮತ್ತು ಖರೀದಿ ಅವಧಿಯನ್ನು 60 ದಿನಗಳವರೆಗೆ ನಿಗದಿಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಈ ನಿರ್ಣಯವನ್ನು ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸಭೆಯಲ್ಲಿ ಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಬೆಂಬಲ ಬೆಲೆಯಡಿ ಸೂರ್ಯಕಾಂತಿ ಉತ್ಪನ್ನ ಖರೀದಿಗಾಗಿ ಬಬಲೇಶ್ವರ, ಸವನಹಳ್ಳಿ, ಬೆಳ್ಳುಬ್ಬಿ, ತಾಜಪುರ, ವಿಜಯಪುರ, ಮುದ್ದೇಬಿಹಾಳ, ತಾಳಿಕೋಟಿ, ತಂಗಡಗಿ, ಇಂಡಿ, ಚಡಚಣ, ಹಲಸಂಗಿ, ಸಿಂದಗಿ ಮತ್ತು ಬಸವನ ಬಾಗೇವಾಡಿ ಸೇರಿದಂತೆ ಒಟ್ಟು 13 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.

ನಾಫೆಡ್ ಸಂಸ್ಥೆಯನ್ನು ಕೇಂದ್ರ ಖರೀದಿ ಏಜೆನ್ಸಿಯಾಗಿ ಮತ್ತು ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ ಸಂಸ್ಥೆಯನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದೆ. ಖರೀದಿ ಕೇಂದ್ರಗಳಲ್ಲಿ ರೈತರ ನೋಂದಣಿಯೊಂದಿಗೆ ಖರೀದಿ ಪ್ರಾರಂಭಿಸುವಂತೆ ಜಿಲ್ಲಾ ವ್ಯವಸ್ಥಾಪಕರಿಗೆ ಸೂಚಿಸಲಾಗಿದೆ.

ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್ ಮತ್ತು ಪ್ರತಿ ರೈತರಿಂದ ಒಟ್ಟು ಗರಿಷ್ಠ 20 ಕ್ವಿಂಟಾಲ್ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಸುವಂತೆ ನಿರ್ಧರಿಸಲಾಗಿದೆ. ಬೆಂಬಲ ಬೆಲೆ ಯೋಜನೆಯ ಮಾರ್ಗಸೂಚಿಗಳ ಪ್ರಕಾರ ಖರೀದಿಸಿದ ಉತ್ಪನ್ನದ ಮೌಲ್ಯವನ್ನು ರೈತರಿಗೆ 5 ದಿನಗಳ ಒಳಗಾಗಿ, ರೈತರ ಹೆಸರಿನಲ್ಲಿ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‌ಫರ್ (ಡಿಬಿಟಿ) ಮೂಲಕ ಜಮೆ ಮಾಡುವಂತೆ ಪಾವತಿಸಬೇಕು. ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.

ಸಭೆಯಲ್ಲಿ ಅಧಿಕಾರಿಗಳು ತಿಳಿಸಿದ ಪ್ರಕಾರ, ಹಿಂಗಾರು ಹಂಗಾಮಿನಲ್ಲಿ 161 ಹೆಕ್ಟೇರ್ ಪ್ರದೇಶದಲ್ಲಿ ಸೂರ್ಯಕಾಂತಿ ಬಿತ್ತನೆಯಾಗಿದ್ದು, ಅಂದಾಜು 2,898 ಕ್ವಿಂಟಾಲ್ ಇಳುವರಿ ಬರುವ ಸಾಧ್ಯತೆ ಇದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಾಲ್ ₹6,284 ರವರೆಗೆ ಸೂರ್ಯಕಾಂತಿ ಮಾರಾಟವಾಗುತ್ತಿದೆ.

ಇದನ್ನೂ ಓದಿ>ವಿಜಯಪುರ | ಕೇಂದ್ರದ ಕಾರ್ಮಿಕ ವಿರೋಧಿ ಸಂಹಿತೆಗಳ ವಿರುದ್ಧ ಸಿಐಟಿಯು ಆಕ್ರೋಷ

ಸಭೆಯಲ್ಲಿ ಸಹಕಾರ ಸಂಘಗಳ ಉಪನಿಬಂಧಕರು, ಕೆಒಎಫ್ ಜಿಲ್ಲಾ ವ್ಯವಸ್ಥಾಪಕರು, ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು, ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸದಸ್ಯ ಕಾರ್ಯದರ್ಶಿ ಶಿವಾನಂದ ಗೋರೆ ಸೇರಿದಂತೆ ಮೂರು ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3,000 ಮದರಸಾಗಳ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜಸ್ಥಾನ ಹೈಕೋರ್ಟ್‌ ಸೂಚನೆ

ರಾಜಸ್ಥಾನದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 3,000 ಮದರಸಾಗಳ ಪರಿಣಾಮಕಾರಿ ನಿರ್ವಹಣೆ, ಮೇಲ್ವಿಚಾರಣೆ ಹಾಗೂ...

45 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಷಡ್ಯಂತ್ರ; ಮುಖ್ಯ ಚುನಾವಣಾಧಿಕಾರಿಗೆ ಸಿಎಂ ದೂರು

ರಾಜ್ಯದಲ್ಲಿ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಸುಮಾರು 45...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...