ವಿಜಯಪುರ |ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ;ಡಿಸಿ ಆನಂದ ಕೆ

Date:

ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜನರು ಮತ್ತು ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು.

- Advertisement -

ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀರಿನ ಲಭ್ಯತೆ ಮತ್ತು ಪೂರೈಕೆಯ ಮೇಲೆ ನಿರಂತರ ನಿಗಾ ವಹಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ತಾಲೂಕು ಮಟ್ಟದಲ್ಲಿ ಎರಡು-ಮೂರು ದಿನಗಳಿಗೊಮ್ಮೆ ಟಾಸ್ಕ್ ಫೋರ್ಸ್ ಸಭೆ ನಡೆಸಿ, ಕೆರೆ ಹಾಗೂ ಕಾಲುವೆಗಳಲ್ಲಿ ನೀರು ಪೋಲಾಗದಂತೆ 24 ಗಂಟೆಯೂ ನಿಗಾ ವಹಿಸಬೇಕು. ಶಾಲೆ, ಆಸ್ಪತ್ರೆ, ಅಂಗನವಾಡಿ ಮತ್ತು ವಸತಿ ನಿಲಯಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಾಗುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಾನುವಾರುಗಳಿಗೆ ಮೇವು ಕೊರತೆಯಿರುವ ಪ್ರದೇಶಗಳನ್ನು ಗುರುತಿಸಿ, ಅಗತ್ಯವಿರುವ ಕಡೆ ಮೇವು ಕಿಟ್ ವಿತರಿಸಬೇಕು. ಜಿಲ್ಲೆಯಲ್ಲಿ 2.74 ಲಕ್ಷಕ್ಕೂ ಅಧಿಕ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದು, ವಿಮೆಯ ಪ್ರಯೋಜನ ಸಮರ್ಪಕವಾಗಿ ತಲುಪಿಸಲು ಹಾಗೂ ಬೆಳೆ ಕಟಾವು ಪ್ರಯೋಗದ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಪ್ರಕಾಶ ಮೀನಾ, ಉಪ ವಿಭಾಗಾಧಿಕಾರಿ ಜುಫಿಶಾನ ಹಕ್, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಾಡುಪ್ರಾಣಿ ಹಾವಳಿಗೆ ಶಾಶ್ವತ ಪರಿಹಾರ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಯೋಜನೆ

ಮಲೆನಾಡಿನಲ್ಲಿ ಮಾನವ - ಪ್ರಾಣಿ ಸಂಘರ್ಷ ಹೆಚ್ಚಾಗಿದ್ದು, ನಿರಂತರವಾಗಿ ಕಾಡುತ್ತಿರುವ ಕಾಡುಪ್ರಾಣಿ...

ಕೋಲಾರ | ಡಿಸಿಸಿ ಬ್ಯಾಂಕ್ ಅಕ್ರಮಗಳ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇಮಿಸಿ: ರೈತ ಸಂಘ ಒತ್ತಾಯ

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ನೂರಾರು...

ಚಿಕ್ಕಮಗಳೂರು | SIR ಪ್ರಕ್ರಿಯೆ: ಅಂತಿಮ ಪಟ್ಟಿಯಲ್ಲಿ 8,74,462 ಮತದಾರರು; ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಪರಿಷ್ಕರಣೆಯ...