ವಿಜಯಪುರ ನಗರಾಭಿವೃದ್ಧಿ ಪ್ರಗತಿಗೆ ಅಧಿಕಾರಿಗಳು ಬದ್ಧರಾಗಿರಬೇಕು: ಡಾ. ಯತೀಂದ್ರ ಸಿದ್ದರಾಮಯ್ಯ ನಿರ್ದೇಶನ

Date:

ಬಾಕಿ ವಸೂಲಿ, ಇ-ಖಾತಾ, ತ್ಯಾಜ್ಯ ನಿರ್ವಹಣೆ ಹಾಗೂ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ನಿಮ್ಮ ಅಭಿವೃದ್ದಿಯೇ ನಮ್ಮ ಧ್ಯೇಯವೆಂದು ವಿಜಯಪುರ ಜನತೆಗೆ ಹೇಳಿದ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯನವರು, ಅಧಿಕಾರಿಗಳು ನಗರಾಭಿವೃದ್ಧಿ ಪ್ರಗತಿಗೆ ಬದ್ಧರಾಗಿರುವಂತೆ ನಿರ್ದೇಶನ ನೀಡಿದರು.

- Advertisement -

ವಿಜಯಪುರ ಮಹಾನಗರ ಪಾಲಿಕೆ ಸಭಾಭವನದಲ್ಲಿ ನಡೆದ ವಿಜಯಪುರ ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರದ ಕುಡಿಯುವ ನೀರು, ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ, ಆಸ್ತಿ ತೆರಿಗೆ, ವಾಣಿಜ್ಯ ಮಳಿಗೆಗಳ ಬಾಡಿಗೆ ವಸೂಲಿ, ಇ-ಖಾತಾ, ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

“ಮಳೆಯ ಹಿನ್ನೆಲೆಯಲ್ಲಿ ಕುಡಿಯುವ ನೀರು ಕಲುಷಿತಗೊಳ್ಳದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಾಗುವಂತೆ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು” ಎಂದು ಸೂಚಿಸಿದರು.

“ಮಹಾನಗರ ಪಾಲಿಕೆಗೆ ಬರಬೇಕಿರುವ ಆಸ್ತಿ ತೆರಿಗೆ ಹಾಗೂ ವಾಣಿಜ್ಯ ಮಳಿಗೆಗಳ ಬಾಡಿಗೆಯನ್ನು ಯಾವುದೇ ಬಾಕಿ ಉಳಿಸದೆ ಪರಿಣಾಮಕಾರಿಯಾಗಿ ವಸೂಲಿ ಮಾಡಬೇಕು ತೆರಿಗೆ ಹಾಗೂ ಇತರೆ ಆದಾಯ ಮೂಲಗಳ ವಸೂಲಾತಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ನಗರದಲ್ಲಿ ಈಗಾಗಲೇ 2 ವಿಕೇಂದ್ರೀಕೃತ ತ್ಯಾಜ್ಯ ನಿರ್ವಹಣಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಇನ್ನೂ 2 ಘಟಕಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ, ನಗರದ ತ್ಯಾಜ್ಯ ನಿರ್ವಹಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು” ಎಂದು ಸಚಿವರು ತಿಳಿಸಿದರು.

“ಇ-ಖಾತಾ ವಿತರಣೆಯಲ್ಲಿ ಪ್ರಸ್ತುತ ಶೇ.48.76ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ ಇದನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು. ಸಾರ್ವಜನಿಕರಿಗೆ ಯಾವುದೇ ಅನಗತ್ಯ ವಿಳಂಬವಾಗದಂತೆ ಇ-ಖಾತಾ ಪ್ರಕ್ರಿಯೆಯನ್ನು ಸರಳ ಹಾಗೂ ವೇಗವಾಗಿ ಕೈಗೊಳ್ಳಬೇಕು” ಎಂದು ಸಚಿವರು ಸೂಚಿಸಿದರು.

“ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುವ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಪೌರ ಕಾರ್ಮಿಕರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ, ನಗರ ಸ್ವಚ್ಛತಾ ವ್ಯವಸ್ಥೆಯನ್ನು ಬಲಪಡಿಸಬೇಕು” ಎಂದು ನಿರ್ದೇಶನ ನೀಡಿದರು.

“ನಗರದ ವಿವಿಧೆಡೆ ಹಾಳಾಗಿರುವ ರಸ್ತೆಗಳನ್ನು ಗುರುತಿಸಿ, ಅವುಗಳ ದುರಸ್ತಿಗೆ ಅಗತ್ಯವಿರುವ ಅಂದಾಜು ವೆಚ್ಚವನ್ನು ಸಿದ್ಧಪಡಿಸಿ, ಸಮಗ್ರ ಯೋಜನೆ ರೂಪಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಒಟ್ಟು 17 ಗ್ರಾಮಗಳು ಒಳಗೊಂಡಿವೆ. ನಿವೇಶನ ರಹಿತರಿಗೆ ವಸತಿ ಕಲ್ಪಿಸುವ ಉದ್ದೇಶದಿಂದ 75 ಎಕರೆ ಜಮೀನು ಮಂಜೂರು ಮಾಡುವಂತೆ ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿರುವ ಕುರಿತು ಸಚಿವರು ಪರಿಶೀಲಿಸಿದರು. ಈ ಪ್ರಸ್ತಾವನೆಯ ಕುರಿತು ಅಗತ್ಯ ಕ್ರಮಗಳನ್ನು ಕೈಗೊಂಡು, ಪ್ರಗತಿಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

“ನಗರಾಭಿವೃದ್ಧಿ ಪ್ರಾಧಿಕಾರವು ಪ್ರತಿ ತಿಂಗಳು ನಿಯಮಿತವಾಗಿ ಸಭೆ ನಡೆಸಿ, ಅಭಿವೃದ್ಧಿ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಬೇಕು. ನಗರದಲ್ಲಿ ವಸತಿ ಅಗತ್ಯವಿರುವ ಜನರಿಗೆ ಅನುಕೂಲವಾಗುವಂತೆ ಸೂಕ್ತ ವಸತಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವತ್ತ ಗಮನಹರಿಸಬೇಕು. ನಗರದ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಾರ್ವಜನಿಕ ಸೇವೆಗಳ ಗುಣಮಟ್ಟ ಸುಧಾರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು” ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವೆ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಸಭೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಡಾ. ಎಂ ಬಿ ಪಾಟೀಲ್, ವಿಜಯಪುರ ಮಹಾನಗರ ಪಾಲಿಕೆ ಅಧ್ಯಕ್ಷ ಸಂಗಣ್ಣ ಕರಡಿ, ಉಪಾಧ್ಯಕ್ಷೆ ಸುಮಿತ್ರಾ ಜಾದವ್, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಂಗಾಧರ್ ಸಂಬಣ್ಣ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ್ ನಕ್ಕಳಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸತ್ತಳೆಂದು ಅಂತ್ಯಕ್ರಿಯೆ ಸಿದ್ದತೆ ವೇಳೆ, ಸಾವಿನಂಚಿನಿಂದ ಪಾರಾದ ಅಜ್ಜಿ

ಅಜ್ಜಿ ಸತ್ತಳೆಂದು ಕುಟುಂಬಸ್ಥರೆಲ್ಲಾ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ರು. ಕೊನೇ ಕ್ಷಣದಲ್ಲಿ ಜೀವಂತ ಇದ್ದ ಮಹಿಳೆ...

ಔರಾದ ತಾಲೂಕು ʼಬರʼ ಘೋಷಿಸಿ : ಸಿಎಂಗೆ ಶಾಸಕ ಪ್ರಭು ಚವ್ಹಾಣ ಮನವಿ

ಔರಾದ(ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ...

ಕೆವಡಿಯಾದ ರಸ್ತೆಗಳಲ್ಲಿ ಮಹಿಳೆಯರ ಕೈಗೆ ಸ್ಟೀರಿಂಗ್; ಪ್ರವಾಸೋದ್ಯಮದಿಂದ ಬದಲಾಯಿತು ಜೀವನದ ಲೆಕ್ಕಾಚಾರ

ಸ್ಟ್ಯಾಚ್ಯೂ ಆಫ್ ಯೂನಿಟಿ (ಏಕತೆಯ ಮೂರ್ತಿ) ಆವರಣದಲ್ಲಿ ಸಂಚರಿಸುವಾಗ ಗಮನ ಸೆಳೆಯುವ...

ಬಡವರು, ಉಳ್ಳವರು ಎಂದು ಹೇಗೆ ವಿಂಗಡಣೆ ಮಾಡುತ್ತೀರಿ: ಬಿಜೆಪಿ ನಾಯಕರಿಗೆ ಸಿಎಂ ಡಿ ಕೆ ಶಿವಕುಮಾರ್ ಪ್ರಶ್ನೆ

"ಗ್ಯಾರಂಟಿ ಯೋಜನೆಗಳನ್ನು ಉಳ್ಳವರಿಗೆ ಕೊಡಬೇಡಿ ಎಂದು ಹೇಳುತ್ತಿದ್ದೀರ. ಹಾಗಾದರೆ ನಿಮ್ಮ ಪ್ರಕಾರ,...