ವಿಜಯಪುರ | ಏ.11ರಿಂದ ಅಂಬೇಡ್ಕರ್ ಹಬ್ಬ

Date:

2026ನೇ ಸಾಲಿನ ಡಾ.ಅಂಬೇಡ್ಕರ್ ಹಬ್ಬವನ್ನು ಏ.11 ರಿಂದ 14 ರವರೆಗೆ ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ವೇದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಿವಾನಂದ ಕೆಲೂರ ಹೇಳಿದರು.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ಸಹಭಾಗಿತ್ವ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಡಾ.ಅಂಬೇಡ್ಕರ್ ಆಶಯದಂತೆ ಸಮಾನತೆಯ ಅರಿವಿನ ಹಬ್ಬ ಆಯಚರಿಸಲಾಗುತ್ತಿದ್ದು, ಈ ಬಾರಿ ವಿಶಿಷ್ಟವಾಗಿ ಆಯೋಜನೆ ಮಾಡಲಾಗುತ್ತಿದೆ. ಭಾರತದ ಪ್ರಥಮ ಶಿಕ್ಷಕಿ ಜ್ಯೋತಿಬಾ ಫುಲೆ ಜನ್ಮ ದಿನಾಚರಣೆಯಿಂದ ಆರಂಭವಾಗಿದ್ದು, ಒಂದು ತಿಂಗಳವರೆಗೆ ನಿತ್ಯ ನಿರಂತರ ವಿವಿಧ ಕಾರ್ಯಕ್ರಮಗಳು ಜರುಗಲಿದ್ದು, ಅಂಬೇಡ್ಕರ್ 135ನೇ ಜನ್ಮ ದಿನಾಚರಣೆಯಂದು ಸಮಾಪ್ತಿಗೊಳ್ಳಲಿದೆ. ನಾಲ್ಕು ದಿನಗಳ ಕಾಲ ನಡೆಯುವ ಈ ವಿಶಿಷ್ಠ ಕಾರ್ಯಕ್ರಮದಲ್ಲಿ ಈ ನಾಡಿದ ಪರಮಪೂಜ್ಯರು, ಪಂಡಿತರು, ರೈತರು, ಯುವಜನತೆ, ಸಾಹಿತಿಗಳು, ಬುದ್ದಿಜೀವಿಗಳು, ಪ್ರಗತಿಪರರು, ಜನತೆ, ಸಂಘ-ಸಂಸ್ಥೆಗಳು, ರಾಜಕಾರಣಿಗಳು, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಎಲ್ಲರೂ ಜಾತಿ, ಮತ, ಪಂಥ, ಲಿಂಗಬೇಧವಿಲ್ಲದೆ ನಾಡಿನ ಸುಮಾರು 10ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ. ರಂಗಮಂದಿರದಲ್ಲಿ ಏ.11ರಿಂದ 14ರ ವರೆಗೆ ನಿತ್ಯ ಬೆಳಗ್ಗೆ 10 ಗಂಟೆಯಿಂದ ಸಂಜೆಯವರೆಗೆ ಕಾರ್ಯಕ್ರಮಗಳು ಜರುಗಲಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಮಾತನಾಡಿ, “ಕಳೆದ ವರ್ಷ ಅಂಬೇಡ್ಕರ್ ಹಬ್ಬಬನ್ನು ಮೊದಲ ಬಾರಿಗೆ ಆರಂಭಿಸಿದ್ದು, ನಾಲ್ಕು ದಿನಗಳಕಾಲ ವೈಚಾರಿಕ ಕ್ರಾಂತಿ ಮೂಡಿಸುವ ಕೆಲಸ ಆಗಿತ್ತು. ಈ ಬಾರಿಯೂ ಸಹ ಏ.11 ರಿಂದ 14ರವರೆಗೆ ಕಾರ್ಯಕ್ರಮ ಜರುಗಲಿದೆ. ಅದರ ಅಂಗವಾಗಿ ಇಂದು ಲಾಂಛನ ಬಿಡುಗಡೆ ಮಾಡಲಾಗಿದ್ದು, ಇಡಿ ದೇಶದ ಜನತೆ ಅಂಬೇಡ್ಕರ್ ಅವರನ್ನು ನೆನೆಯಬೇಕಿದೆ. ಈ ಕಾರ್ಯಕ್ರಮಗಳಲ್ಲಿ ಸಂವಾದ ಗೋಷ್ಠಿಗಳು, ಯುವಜನ ಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ವೈಚಾರಿಕ ವಿಚಾರಗಳ ಚರ್ಚೆ ನಡೆಯಲಿದೆ. ಸಮಾನತೆಯನ್ನು ಸಾವುರ ಸಲುವಾಗಿಯೇ ಪೌರ ಕಾರ್ಮಿಕರಿಂದ ಲಾಂಛನ ಬಿಡುಗಡೆ ಮಾಡಿಸಲಾಗಿದೆ” ಎಂದರು.

ಇದನ್ನೂ ಓದಿ: ವಿಜಯಪುರ | ಅಂಬೇಡ್ಕರ್‌ ಆದರ್ಶಗಳನ್ನು ಅಳವಡಿಕೊಳ್ಳಿ: ಡಾ. ಔದ್ರಾಮ್

ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ಸಹಭಾಗಿ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ ಅವರ 135ನೇ ಜಯಂತಿ ಪ್ರಯುಕ್ತ ಅಂಬೇಡ್ಕರ ಹಬ್ಬ-2026ರ ಪೋಸ್ಟರ್‌ನ್ನು ಪೌರ ಕಾರ್ಮಿಕರ ಹಸ್ತದಿಂದ ಬಿಡುಗಡೆ ಮಾಡಲಾಯಿತು.

ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಾದ ಲಕ್ಷ್ಮಿ ಹಿಟನಳ್ಳಿ, ಮಹಾದೇವಿ ಹಾದಿಮನಿ, ದಯಾನಂದ ಅಲಿಯಬಾದ ರವರು ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ಲಕ್ಷ್ಮಣ ಹಂದ್ರಾಳ, ಮಹಾದೇವ ಚಲವಾದಿ, ಬಾಲಾಜಿ ಕಾಂಬಳೆ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಜನನ–ಮರಣ ನೋಂದಣಿಯಲ್ಲಿ ಲೋಪಕ್ಕೆ ಅವಕಾಶ ಬೇಡ: ಡಿಸಿ ಆನಂದ ಕೆ. ಸೂಚನೆ

ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ, ಘಟನೆ...

ವಿಜಯಪುರ |ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ;ಡಿಸಿ ಆನಂದ ಕೆ

ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು....

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ Gen Z ಪೀಳಿಗೆ ತನ್ನ ಶಕ್ತಿ ಪ್ರದರ್ಶಿಸಬೇಕು: ಪ್ರದೀಪ್ ಪಾಟೀಲ್

ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ...