ವಿಜಯಪುರ |ಬೆರಗು ಪ್ರಕಾಶನದ 2026ನೇ ಸಾಲಿನ ಪ್ರಶಸ್ತಿ ಪ್ರಕಟ: ನಾಲ್ವರು ಸಾಧಕರಿಗೆ ಗೌರವ

Date:

ಸಾಹಿತ್ಯ, ವಿಮರ್ಶೆ, ಕಥಾಸಾಹಿತ್ಯ ಹಾಗೂ ಪ್ರಕಾಶನ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿದ ಸಾಧಕರನ್ನು ಗುರುತಿಸಿ ಗೌರವಿಸುವ ನಿಟ್ಟಿನಲ್ಲಿ ಸಿಂದಗಿಯ ಬೆರಗು ಪ್ರಕಾಶನ ಸಂಸ್ಥೆಯು 2026ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ.

- Advertisement -

ವಿವಿಧ ವಿಭಾಗಗಳ ಪ್ರಶಸ್ತಿಗಳಿಗೆ ನಾಲ್ವರು ಸಾಧಕರು ಹಾಗೂ ಒಂದು ಪ್ರಕಾಶನ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದೆ.ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿಗೆ ಪ್ರೊ. ಚಂದ್ರಶೇಖರ ವಸ್ತ್ರದ ಅವರು ಭಾಜನರಾಗಿದ್ದಾರೆ. ಈ ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಬೆಂಗಳೂರಿನ ಡಾ. ಬಸವರಾಜ ಸಾದರ ಅವರ ‘ಅರ್ಥಾನ್ವೇಷಣೆ’ ವಿಮರ್ಶಾ ಸಂಕಲನದ ಹಸ್ತಪ್ರತಿಯು ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ ಪ್ರಶಸ್ತಿಗೆ ಆಯ್ಕೆಯಾಗಿದೆ. ₹10 ಸಾವಿರ ನಗದು ಹಾಗೂ ಫಲಕ ಒಳಗೊಂಡಿರುವ ಈ ಪ್ರಶಸ್ತಿಯ ವಿಶೇಷವೆಂದರೆ, ಆಯ್ಕೆಯಾದ ಹಸ್ತಪ್ರತಿಯನ್ನು ಬೆರಗು ಪ್ರಕಾಶನ ಸಂಸ್ಥೆಯೇ ಪುಸ್ತಕ ರೂಪದಲ್ಲಿ ಪ್ರಕಟಿಸಲಿದೆ.

ದಿ.ಯಮುನಾಬಾಯಿ ರಾಜಣ್ಣ ಭೋವಿ ಅವರ ಸ್ಮರಣಾರ್ಥ ನೀಡುವ ಬೆರಗು ಪುಸ್ತಕ ಪ್ರಶಸ್ತಿಗೆ ಡಾ. ರಾಜಶೇಖರ ಹಳೆಮನೆ ಅವರ ‘ಮಾಯೆಯೆಂಬುದು ಮಾಯೆಯಲ್ಲ’ ಕಥಾಸಂಕಲನ ಆಯ್ಕೆಯಾಗಿದೆ. ಪ್ರಶಸ್ತಿಯು ₹5 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ.ಇನ್ನು ದಿ. ಎಂ.ಸಿ. ಮನಗೂಳಿ ಅವರ ಹೆಸರಿನಲ್ಲಿ ನೀಡಲಾಗುವ ಅತ್ಯುತ್ತಮ ಪ್ರಕಾಶನ ಪ್ರಶಸ್ತಿಗೆ ಕಲಬುರಗಿಯ ಸಿದ್ಧಲಿಂಗೇಶ್ವರ ಪ್ರಕಾಶನ ಸಂಸ್ಥೆ ಆಯ್ಕೆಯಾಗಿದೆ.

ಈ ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.ಸಾಹಿತ್ಯ ಕ್ಷೇತ್ರದ ವಿವಿಧ ಪ್ರಕಾರಗಳ ಕೃತಿಗಳು ಹಾಗೂ ಪ್ರಕಾಶನದ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಗಳನ್ನು ಆಯ್ಕೆ ಮಾಡಲಾಗಿದೆ. ವಾಸುದೇವ ನಾಡಿಗ್ ಹಾಗೂ ಸಾಹಿತಿ ಶಂಕರ ಬೈಚಬಾಳ್ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದರು ಎಂದು ಬೆರಗು ಪ್ರಕಾಶನ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಹಾಲುಮತ ಸಮಾಜದ ಭಂಡಾರದಲ್ಲಿ ಶಕ್ತಿ, ಭಕ್ತಿ ಇದೆ: ಎಂ.ಬಿ.ಪಾಟೀಲ

ಹಾಲುಮತ ಸಮಾಜ ಸ್ವಚ್ಛ ಹಾಗೂ ಶ್ರೇಷ್ಠ ಸಮುದಾಯವಾಗಿದ್ದು, ಅದರ ಭಂಡಾರದಲ್ಲಿ ಶಕ್ತಿ...

ಉತ್ತರ ಪ್ರದೇಶ SIR | ಮತಪಟ್ಟಿಯಿಂದ 1.27 ಕೋಟಿ ಹೆಸರುಗಳು ಡಿಲೀಟ್‌; ಹಲವರ ಮರುಸೇರ್ಪಡೆಗೆ ಬಿಜೆಪಿ ತಂತ್ರ

ಉತ್ತರ ಪ್ರದೇಶದಲ್ಲಿ ನಡೆದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬರೋಬ್ಬರಿ 1.27 ಕೋಟಿ ಮತದಾರರ...

ಭಾರತದ ಸರಕುಗಳಿಗೆ ಅಮೆರಿಕ ಮಾರುಕಟ್ಟೆಯಲ್ಲಿ ಆದ್ಯತೆ; ಸುಂಕ ಕಡಿತದ ಒಪ್ಪಂದಕ್ಕೆ ಒಪ್ಪಿಗೆ

ಅಮೆರಿಕದ ಮಾರುಕಟ್ಟೆಯಲ್ಲಿ ಭಾರತದ ಸರಕುಗಳಿಗೆ ಆದ್ಯತೆ ನೀಡಿ, ಬೇರೆ ರಾಷ್ಟ್ರಗಳ ಸರಕುಗಳಿಗೆ...

ಬೀದರ್‌ | ಬ್ರಿಟಿಷರ ಶೋಷಣೆ ವಿರುದ್ಧ ಹೋರಾಡಿದ ಬಿರ್ಸಾ ಮುಂಡಾ: ಸುರೇಖಾ

ಬಿರ್ಸಾ ಮುಂಡಾ ಅವರು ಕೇವಲ ಸ್ವಾತಂತ್ರ್ಯ ಹೋರಾಟಗಾರರಾಗಿರಲಿಲ್ಲ. ಅವರು ಸಾಮಾಜಿಕ ಪರಿವರ್ತನೆಯ...