ವಿಜಯಪುರ | ಜನಗಣತಿ-2027; ಮೊದಲ ಹಂತದ ಸ್ವಯಂ ಗಣತಿಗೆ ಚಾಲನೆ

Date:

ʼನಮ್ಮ ಜನಗಣತಿ, ನಮ್ಮ ಭವಿಷ್ಯʼ ಧ್ಯೇಯ ವಾಕ್ಯದಡಿ ದೇಶವ್ಯಾಪಿ ನಡೆಯಲಿರುವ ರಾಷ್ಟ್ರೀಯ ಜನಗಣತಿ-2027ರ ಮೊದಲ ಹಂತದ ಸ್ವಯಂ ಗಣತಿ ಕಾರ್ಯಕ್ಕೆ ವಿಜಯಪುರ ಜಿಲ್ಲೆಯ ಮಹಾನಗರ ಪಾಲಿಕೆಯ ಮೇಯರ್ ಮಡಿವಾಳಪ್ಪ ಕರಡಿ ಹಾಗೂ ಉಪಮೇಯರ್ ಸುಮಿತ್ರಾ ಜಾಧವ್ ಬುಧವಾರ ಚಾಲನೆ ನೀಡಿದರು.

- Advertisement -

ಮೇಯರ್ ಮಡಿವಾಳಪ್ಪ ಕರಡಿ ಅವರು ತಮ್ಮ ಸ್ವಯಂ ಗಣತಿ ಮಾಡುವುದರ ಮೂಲಕ ನಗರ ವ್ಯಾಪ್ತಿಯಲ್ಲಿ ಸ್ವಯಂ ಗಣತಿ ಕಾರ್ಯಕ್ಕೆ ಚಾಲನೆ ನೀಡಿ, ನಗರದ ಜನತೆ ಸ್ವಯಂ ಗಣತಿ ಮಾಡಿಕೊಳ್ಳಲು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರಾಷ್ಟ್ರೀಯ ಜನಗಣತಿ-2027ರ ಮೊದಲ ಹಂತದ ಎಚ್ ಎಲ್ ಒಗೆ ಸಂಬಂಧಿಸಿದಂತೆ ಏ.1ರಿಂದ 15 ರವರೆಗೆ ದತ್ತಾಂಶ ಆಧಾರಿತ ಸ್ವಯಂ ಗಣತಿ ಕಾರ್ಯವನ್ನು ನಗರದ ನಾಗರಿಕರು ತಮ್ಮ ಕುಟುಂಬದ ಸ್ವಯಂ ಗಣತಿ ಮಾಡಿಕೊಳ್ಳುವ ಮೂಲಕ ಜನಗಣತಿ ಕಾರ್ಯಕ್ಕೆ ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದರು.

ಇದನ್ನೂ ಓದಿ: ವಿಜಯಪುರ | ಹಿಂಗಾರು ಹಂಗಾಮು; ಏ.7ರವರೆಗೆ ಕಾಲುವೆಗೆ ನೀರು

Advertisements

ಇದೇ ವೇಳೆ ಉಪಮೇಯರ್ ಸುಮಿತ್ರಾ ಜಾಧವ್ ಅವರು ಕೂಡಾ ಸ್ವಯಂ ಗಣತಿ ಮಾಡಿಕೊಳ್ಳುವುದರ ಮೂಲಕ ಗಣತಿ ಕಾರ್ಯಕ್ಕೆ ಸಾಕ್ಷಿಯಾದರು.‌ ನಗರದ ಹೆಚ್ಚುವರಿ ಜನಗಣತಿ ಆಧಿಕಾರಿ ಶಿಲ್ಪಶ್ರೀ ಸಾಗರ, ಅಂಬಿಕಾ ಕಾಂಬಳೆ ಹಾಗೂ ಪಾಲಿಕೆ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ ಡಿಸಿಸಿ ಬ್ಯಾಂಕ್‌ಗೆ ದಾಖಲೆಯ ಪ್ರಗತಿ: ₹29.16 ಕೋಟಿ ನಿವ್ವಳ ಲಾಭ

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(ಡಿಸಿಸಿ) ಬ್ಯಾಂಕ್‌ 2025-26ನೇ ಸಾಲಿನಲ್ಲಿ ದಾಖಲೆ ಪ್ರಮಾಣದ...

ವಿಜಯಪುರ | ಪಾಟೀಲ–ನಾಡಗೌಡರ ವಾಕ್ಸಮರಕ್ಕೆ ಹೊಸ ತಿರುವು: ಆಪ್ತರ ನಡುವೆ ಹೆಚ್ಚಿದ ರಾಜಕೀಯ ಅಂತರ

ಪಾಟೀಲ–ನಾಡಗೌಡರ ನಡುವಿನ ವಾಕ್ಸಮರ ಕೇವಲ ಇಬ್ಬರು ನಾಯಕರ ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಸೀಮಿತವಾಗದೆ,...

ವಿಜಯಪುರ | ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟಿದ್ದರೆ ಸೆ.23ರೊಳಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ–2026(ಎಸ್‌ಐಆರ್) ಹಿನ್ನೆಲೆಯಲ್ಲಿ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ...

ವಿಜಯಪುರ | ಸೆ. 26, 27ರಂದು ರಾಜ್ಯಮಟ್ಟದ ಸೂರ್ಯ ನಮಸ್ಕಾರ ಕ್ರೀಡಾಕೂಟ

ನಿವೃತ್ತ ಶಿಕ್ಷಕ ದಿ.ದ್ಯಾಮನಗೌಡ ಅ.ಪಾಟೀಲ, ಉತ್ನಾಳ ಸ್ಮರಣಾರ್ಥ 2ನೇ ರಾಜ್ಯಮಟ್ಟದ ಸೂರ್ಯ...