ವಿಜಯಪುರ | ಆಲಿಕಲ್ಲು ಮಳೆಯಿಂದ ಬೆಳೆಹಾನಿ; ವರದಿ ಸಲ್ಲಿಸಲು ಡಿಸಿ ಸೂಚನೆ

Date:

ಇತ್ತೀಚಿಗೆ ಬೀಸಿದ ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಮಳೆಯಿಂದಾಗಿ ಉಂಟಾಗಿರುವ ಕೃಷಿ, ತೋಟಗಾರಿಕಾ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಕೈಗೊಂಡು ಮೂರು ದಿನದೊಳಗಾಗಿ ವರದಿ ಸಲ್ಲಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಬೆಳೆ ವಿಮಾ ಕಂಪನಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ತಂಡ ರಚಿಸಿ ಹಾನಿಗೊಳಗಾದ ಕ್ಷೇತ್ರಗಳಿಗೆ ಭೇಟಿ ನೀಡಿ ನಿಖರವಾದ ಸಮೀಕ್ಷೆ ಕೈಗೊಂಡು 3 ದಿನಗೊಳಗಾಗಿ ಜಂಟಿ ಸಮೀಕ್ಷೆ ನಡೆಸಿ ವರದಿಯನ್ನು ನೀಡಬೇಕು ಎಂದು ಸೂಚಿಸಿದರು.

ಇತ್ತೀಚಿನ ದಿನಗಳಲ್ಲಿ ಬಿದ್ದ ಮಳೆ, ಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ ಬೆಳೆ ಹಾನಿಗೊಳಗಾದ ರೈತರು ಬೆಳೆ ವಿಮೆ ಮಾಡಿಸಿದ್ದರೆ ಅಂತಹ ರೈತರು ಮುಂದಿನ 3 ದಿನಗೊಳಗಾಗಿ (ಮುಂದಿನ 72 ಗಂಟೆಗೂಳಗಾಗಿ) ಓರಿಯಂಟಲ್ ಜನರಲ್ ಇನ್ಸೂರನ್ಸ್ ಕಂಪನಿ Toll Free Number 1800 425 6678 ಗೆ ಕರೆ ಮಾಡಿ ವೈಯಕ್ತಿಕ ಸ್ಥಳ ನಿರ್ದಿಷ್ಟ ವಿಕೋಪಗಳ (ILLA) ಕುರಿತು ದೂರು ದಾಖಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

2025-26 ನೇ ಸಾಲಿನ RWBCIS ಯೋಜನೆಯಡಿ ದ್ರಾಕ್ಷಿ, ದಾಳಿಂಬೆ ಹಾಗೂ ಲಿಂಬೆ ಬೆಳೆಗಳಿಗೆ ಆಲಿಕಲ್ಲು ಮಳೆಯಿಂದಾಗಿ ಬೆಳೆಹಾನಿ ಸಂಭವಿಸಿದ್ದಲ್ಲಿ, ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾಗೂ ಮಾಹಿತಿಯನ್ನು 72 ಗಂಟೆಗಳೊಳಗಾಗಿ ಅಗ್ರಿಕಲ್ಪರ್ ಇನ್ಸುರನ್ಸ್ ಕಂಪನಿ ಆಪ್ ಇಂಡಿಯಾ ಲಿ. ರವರರಿಗೆ ತಲುಪಿಸಬೇಕೆಂದು ತಿಳಿಸಿದರು.

ಇದನ್ನೂ ಓದಿ: ವಿಜಯಪುರ | ಲಿಂಗ ಸಮಾನತೆಯೇ ಸಾಮಾಜಿಕ ಪ್ರಗತಿಗೆ ದಾರಿ: ಪ್ರೊ. ವಿಜಯ ಕೋರಿಶೆಟ್ಟಿ

ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ಎಲ್ಲಾ ಇಲಾಖಾ ಅಧಿಕಾರಿಗಳು 3 ದಿನಗಳೊಳಗಾಗಿ ಜಂಟಿ ಸಮೀಕ್ಷೆ ಕೈಗೊಂಡು ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸೆ. 26, 27ರಂದು ರಾಜ್ಯಮಟ್ಟದ ಸೂರ್ಯ ನಮಸ್ಕಾರ ಕ್ರೀಡಾಕೂಟ

ನಿವೃತ್ತ ಶಿಕ್ಷಕ ದಿ.ದ್ಯಾಮನಗೌಡ ಅ.ಪಾಟೀಲ, ಉತ್ನಾಳ ಸ್ಮರಣಾರ್ಥ 2ನೇ ರಾಜ್ಯಮಟ್ಟದ ಸೂರ್ಯ...

ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ವಿಳಂಬವಾಗದಂತೆ ಹೋರಾಟ ಸಮಿತಿ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಬಹುದಿನಗಳ ಬೇಡಿಕೆಯಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಯಾವುದೇ ವಿಳಂಬವಿಲ್ಲದೆ...

ವಿಜಯಪುರ | ಕುಟುಂಬ ರಾಜಕಾರಣದಿಂದ ಕಾರ್ಯಕರ್ತರಿಗೆ ಅವಕಾಶ ಇಲ್ಲದಂತಾಗುತ್ತಿದೆಯೇ?: ಪ್ರದೀಪ್ ಪಾಟೀಲ

ಎಂಎಲ್‌ಎ ಹಾಗೂ ಎಂಪಿಗಳು ತಮ್ಮ ಮಕ್ಕಳನ್ನು ಮುಂದಿನ ಶಾಸಕರು, ಸಂಸದರನ್ನಾಗಿ ಮಾಡುವ...