ವಿಜಯಪುರ | ಸಾರ್ವಜನಿಕ ಶೌಚಾಲಯಗಳಲ್ಲಿ ಅತಿಯಾದ ಶುಲ್ಕ ವಸೂಲಿ; ಕರವೇ ಖಂಡನೆ

Date:

ವಿಜಯಪುರ ಜಿಲ್ಲೆಯ ಹಲವು ಬಸ್ ನಿಲ್ದಾಣಗಳಲ್ಲಿರುವ ಸಾರ್ವಜನಿಕ ಶೌಚಾಲಯಗಳಲ್ಲಿ ಪ್ರಯಾಣಿಕರಿಂದ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಖಂಡಿಸಿದ್ದಾರೆ. ಕೂಡಲೇ ಶುಲ್ಕ ವಸೂಲಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

- Advertisement -

ಸಂಘಟನೆಯ ರಾಜ್ಯ ಉಪಾಧ್ಯಕ್ಷ ಬಸವರಾಜ ತಾಳಿಕೋಟಿ ಮಾತನಾಡಿ, “ವಿಜಯಪುರ ಜಿಲ್ಲಾ ಮತ್ತು ತಾಲೂಕು ಬಸ್ ನಿಲ್ದಾಣಗಳಲ್ಲಿನ ಸಾರ್ವಜನಿಕರ ಶೌಚಾಲಯ ಮತ್ತು ಮೂತ್ರಾಲಯಗಳನ್ನು ಉಪಯೋಗಿಸುವ ಸಾರ್ವಜನಿಕರಿಂದ ಹೆಚ್ಚಿನ ಹಣ ಪಡೆಯಲಾಗುತ್ತಿದೆ. ಸಂಸ್ಥೆ ನಿಯಮಗಳ ಪ್ರಕಾರ ಶೌಚಕ್ಕೆ ₹2 ದರವಿದ್ದು, ಮೂತ್ರವಿಸರ್ಜನೆ ಉಚಿತವಾಗಿದೆ. ಆದರೆ ಗುತ್ತಿಗೆ ಪಡೆದವರು ಮನಬಂದಂತೆ ಹಣ ಪಡೆಯುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಮೇಲಧಿಕಾರಿಗಳು ವಿಷಯವನ್ನು ಈ ಗಂಭೀರವಾಗಿ ಪರಿಗಣಿಸಿ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆ ತಡೆಗಟ್ಟಬೇಕು. ಸರ್ಕಾರದ ನಿಯಮಾವಳಿಗಳ ದರವನ್ನು ಕಡ್ಡಾಯವಾಗಿ ದೊಡ್ಡ ಅಕ್ಷರಗಳಲ್ಲಿ ಅಳವಡಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ವಿಜಯಪುರ | ಮಹಿಳಾ ವಿವಿಯಲ್ಲಿ ರಾಜ್ಯಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

ಸಂಜೀವಕುಮಾರ ಕೆ, ಯಲ್ಲಾಲಿಂಗ ಉಮರಾಣಿ, ಶಶಿಕಾಂತ ಹಚಡದ, ಪರಶುರಾಮ ಸಾತಿಹಾಳ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಸೃಷ್ಟಿಸಲು ಯತ್ನಾಳ್ ಯತ್ನ: ಎಂ.ಬಿ ಪಾಟೀಲ್ ಕಿಡಿ

ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್...

ವಿಜಯಪುರ | ಸರ್ಕಾರಿ ಆಸ್ಪತ್ರೆಗಳನ್ನು ದತ್ತು ನೀಡುವ ಕ್ರಮಕ್ಕೆ ಎಸ್‌ಯುಸಿಐ ಬಿ ಭಗವಾನ್ ರೆಡ್ಡಿ ಖಂಡನೆ

ರಾಜ್ಯದ ಸರ್ಕಾರಿ ತಾಲೂಕು ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳನ್ನು ಸರ್ಕಾರಿ ಅಥವಾ...

ವಿಜಯಪುರ ಡಿಸಿಸಿ ಬ್ಯಾಂಕ್‌ಗೆ ದಾಖಲೆಯ ಪ್ರಗತಿ: ₹29.16 ಕೋಟಿ ನಿವ್ವಳ ಲಾಭ

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(ಡಿಸಿಸಿ) ಬ್ಯಾಂಕ್‌ 2025-26ನೇ ಸಾಲಿನಲ್ಲಿ ದಾಖಲೆ ಪ್ರಮಾಣದ...

ವಿಜಯಪುರ | ಪಾಟೀಲ–ನಾಡಗೌಡರ ವಾಕ್ಸಮರಕ್ಕೆ ಹೊಸ ತಿರುವು: ಆಪ್ತರ ನಡುವೆ ಹೆಚ್ಚಿದ ರಾಜಕೀಯ ಅಂತರ

ಪಾಟೀಲ–ನಾಡಗೌಡರ ನಡುವಿನ ವಾಕ್ಸಮರ ಕೇವಲ ಇಬ್ಬರು ನಾಯಕರ ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಸೀಮಿತವಾಗದೆ,...