ಸಮಾಜದ ಪ್ರಗತಿಗೆ ಅಡ್ಡಿಯಾಗಿರುವ ಲಿಂಗ ಅಸಮಾನತೆಯನ್ನು ನಿವಾರಿಸಲು ಮನೋಭಾವದಲ್ಲಿ ಬದಲಾವಣೆ ಅಗತ್ಯವಾಗಿದೆ. ಲಿಂಗ ಸಮಾನತೆಯೇ ಸಾಮಾಜಿಕ ಪ್ರತಿಗೆ ದಾರಿ ಎಂದು ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಬಿ ಕೋರಿಶೆಟ್ಟಿ ಹೇಳಿದರು.
ವಿವಿಯಲ್ಲಿ ಇತ್ತೀಚಿಗೆ ಹಮ್ಮಿಕೊಂಡಿದ್ದ ದೇವರ ದಾಸಿಮಯ್ಯನವರ ಜಯಂತಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ʼಆತ್ಮಕ್ಕೆ ಲಿಂಗಭೇದವಿಲ್ಲʼ ಮನುಜರಿಗೇಕೆ?. ಮಹಿಳೆಯರು ಶಿಕ್ಷಣ, ಆತ್ಮವಿಶ್ವಾಸ ಹಾಗೂ ಆರ್ಥಿಕ ಸ್ವಾವಲಂಬನೆ ಮೂಲಕ ಸಬಲೀಕರಿಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಆದ್ಯ ಕವಿ ದೇವರ ದಾಸಿಮಯ್ಯನವರ ವಚನಗಳನ್ನು ವಿವರಿಸಿ, ಅವುಗಳ ಅರ್ಥವನ್ನು ವಿವರಿಸಿದರು.
ಇದನ್ನೂ ಓದಿ: ವಿಜಯಪುರ | ಉಚಿತ ವೃತ್ತಿಪರ ಕೋರ್ಸ್‌ಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ
ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್.ಲಕ್ಕಣ್ಣವರ್, ವಿಶ್ವವಿದ್ಯಾನಿಲಯದ ಎಲ್ಲಾ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿನಿಯರು, ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತಿತರಿದ್ದರು.




