ವಿಜಯಪುರ | ಪಿಯು ಫಲಿತಾಂಶ ಸುಧಾರಣೆಗೆ ಮಾರ್ಗಸೂಚಿ ಪಾಲಿಸಿ: ಜಿಪಂ ಸಿಇಒ ರಿಷಿ ಆನಂದ್

Date:

ದ್ವಿತೀಯ ಪಿಯು ಫಲಿತಾಂಶ ಸುಧಾರಣೆಗಾಗಿ ಇಲಾಖೆ ಹಾಗೂ ಸರಕಾರದ ಎಲ್ಲಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಶೇ.100 ರಷ್ಟು ಫಲಿತಾಂಶ ಗುರಿಗೆ ಎಲ್ಲರೂ ಶ್ರಮಿಸಬೇಕು ಎಂದು ವಿಜಯಪುರ ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ್ ಹೇಳಿದರು.

- Advertisement -

ನಗರದ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆ -1ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

“ಎಲ್ಲಾ ಕಾಲೇಜುಗಳ ಪ್ರಾಚಾರ್ಯರು ಹೆಚ್ಚಿನ ಶ್ರಮ ವಹಿಸಬೇಕು. ಫಲಿತಾಂಶ ಕಡಿಮೆಯಾದಲ್ಲಿ ಅಂತಹ ಕಾಲೇಜಿನ ಪ್ರಾಚಾರ್ಯರು ಮತ್ತು ಉಪನ್ಯಾಸಕರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಮುಂದಿನ 20 ದಿನಗಳ ಅವಧಿಯ ಸದ್ಬಳಕೆ ಮಾಡಿಕೊಂಡು ಕಾರ್ಯಪ್ರವೃತ್ತರಾಗಬೇಕು. ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಪುನರ್ ಮನನ, ಮಾದರಿ ಪ್ರಶ್ನೆ ಪತ್ರಿಕೆಗಳ ಅಭ್ಯಾಸ ಸೇರಿ ಇತರೆ ಚಟುವಟಿಕೆ ಆಯೋಜಿಸಬೇಕು. ಜೊತೆಗೆ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ, ಯುಪಿಎಸ್, ಸ್ಟೋರೇಜ್ ಡಿವೈಸ್, ಕೊಠಡಿಗಳು, ಆಸನಗಳು, ಕುಡಿಯುವ ನೀರು, ಶೌಚಾಲಯ ಸೇರಿ ಮೂಲ ಸೌಲಭ್ಯಗಳ ಸಿದ್ಧತೆ ಮಾಡಿಕೊಳ್ಳಬೇಕು” ಎಂದು ಸೂಚಿಸಿದರು.

ಕಡಿಮೆ ಫಲಿತಾಂಶ ಸಾಧಿಸಿರುವ ಪ್ರಾಚಾರ್ಯರ ಜೊತೆ ವಿಶೇಷ ಚರ್ಚೆ ನಡೆಸಿದ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, “ಈ ಬಾರಿ ನಿರೀಕ್ಷಿತ ಪ್ರಮಾಣ ಗುರಿ ಸಾಧಿಸಬೇಕು. ಕಡಿಮೆ ಫಲಿತಾಂಶ ಇರುವ ಕಾಲೇಜುಗಳಲ್ಲಿ ಇಚ್ಛಾಸಕ್ತಿ ವಹಿಸಿ ಸುಧಾರಣೆ ಮಾಡಬೇಕು. ಫಲಿತಾಂಶ ಒಂದೇ ರೀತಿಯಾಗಿರಬೇಕು. ಮಕ್ಕಳಲ್ಲಿರುವ ಪರೀಕ್ಷೆಯ ಭಯ ಹೋಗಲಾಡಿಸಿ, ಬದಲಾವಣೆ ಮಾಡಿ, ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಬೇಕು. ನುರಿತ ವಿಷಯ ತಜ್ಞರಿಂದ ವಿಶೇಷ ತರಗತಿಗಳನ್ನು ನಡೆಸಬೇಕು” ಎಂದರು.

ಇದನ್ನೂ ಓದಿ: ವಿಜಯಪುರ | ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಅಗ್ನಿ ಅವಘಡ: 20ಕ್ಕೂ ಅಧಿಕ ಐಷಾರಾಮಿ ಕಾರುಗಳು ಭಸ್ಮ

ಸಭೆಯಲ್ಲಿ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ಪಿಯು ಕಾಲೇಜುಗಳ ಪ್ರಾಚಾರ್ಯರು ಇದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪಾಟೀಲ–ನಾಡಗೌಡರ ವಾಕ್ಸಮರಕ್ಕೆ ಹೊಸ ತಿರುವು: ಆಪ್ತರ ನಡುವೆ ಹೆಚ್ಚಿದ ರಾಜಕೀಯ ಅಂತರ

ಪಾಟೀಲ–ನಾಡಗೌಡರ ನಡುವಿನ ವಾಕ್ಸಮರ ಕೇವಲ ಇಬ್ಬರು ನಾಯಕರ ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಸೀಮಿತವಾಗದೆ,...

ವಿಜಯಪುರ | ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟಿದ್ದರೆ ಸೆ.23ರೊಳಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ–2026(ಎಸ್‌ಐಆರ್) ಹಿನ್ನೆಲೆಯಲ್ಲಿ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ...

ವಿಜಯಪುರ | ಸೆ. 26, 27ರಂದು ರಾಜ್ಯಮಟ್ಟದ ಸೂರ್ಯ ನಮಸ್ಕಾರ ಕ್ರೀಡಾಕೂಟ

ನಿವೃತ್ತ ಶಿಕ್ಷಕ ದಿ.ದ್ಯಾಮನಗೌಡ ಅ.ಪಾಟೀಲ, ಉತ್ನಾಳ ಸ್ಮರಣಾರ್ಥ 2ನೇ ರಾಜ್ಯಮಟ್ಟದ ಸೂರ್ಯ...

ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ವಿಳಂಬವಾಗದಂತೆ ಹೋರಾಟ ಸಮಿತಿ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಬಹುದಿನಗಳ ಬೇಡಿಕೆಯಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಯಾವುದೇ ವಿಳಂಬವಿಲ್ಲದೆ...