ವಿಜಯಪುರ | ಏ.20ರ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಬಾಲ್ಯ ವಿವಾಹ ಮಾಡಿದರೆ ಜೈಲು; ಜಿಲ್ಲಾಡಳಿತ ಖಡಕ್‌ ಎಚ್ಚರಿಕೆ

Date:

ಅಕ್ಷಯ ತೃತೀಯ ಪ್ರಯುಕ್ತ ಏ.20 ರಂದು ವಿಜಯಪುರ ಜಿಲ್ಲೆಯಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಹಾಗೂ ವೈಯಕ್ತಿಕ ವಿವಾಹಗಳಲ್ಲಿ ಬಾಲ್ಯ ವಿವಾಹ ಜರುಗಿಸಿದಲ್ಲಿ, ಅದು ಬಾಲ್ಯವಿವಾಹ ನಿಷೇಧ ಕಾಯ್ದೆ-2006ರನ್ವಯ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಬಾಲ್ಯ ವಿವಾಹದಲ್ಲಿ ಭಾಗಿಯಾಗುವ ಎಲ್ಲರನ್ನೂ ಶಿಕ್ಷೆಗೊಳಪಡಿಸಲಾಗುವುದು ಎಂದು ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

- Advertisement -

ಜಿಲ್ಲೆಯ ದೇವಸ್ಥಾನಗಳು, ಕಲ್ಯಾಣ ಮಂಟಪಗಳು ಹಾಗೂ ಇತರ ಧಾರ್ಮಿಕ ಸ್ಥಳಗಳಲ್ಲಿ ಬಾಲ್ಯವಿವಾಹ ನಿಷೇಧ ಎಂಬ ಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಬಾಲ್ಯ ವಿವಾಹವನ್ನು ನಡೆಸುವ, ನಿರ್ದೇಶಿಸುವ ಅಥವಾ ಪ್ರಚೋದಿಸುವ ಯಾವುದೇ ವ್ಯಕ್ತಿ ಕಾನೂನು ಪ್ರಕಾರ ಸಮಾನವಾಗಿ ಹೊಣೆಗಾರರಾಗುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ವಿವಾಹ ಸಮಾರಂಭವನ್ನು ನಡೆಸುವ ಪುರೋಹಿತರು, ಅದನ್ನು ಏರ್ಪಡಿಸುವ ಸಂಬಂಧಿಕರು. ಸುಗಮಗೊಳಿಸುವ ಆಯೋಜಕರು ಸೇರಿದಂತೆ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲರೂ ಬಾಲ್ಯವಿವಾಹ ನಿಷೇಧ ಕಾಯ್ದೆಯ ಚೌಕಟ್ಟಿನಲ್ಲಿ ಶಿಕ್ಷೆಗೆ ಒಳಗಾಗುತ್ತಾರೆ. ಈ ಸಂಬಂಧ ಕ್ರಿಮಿನಲ್ ಪಿಟಿಷನ್ ಸಂಖ್ಯೆ 1605/2026ರಲ್ಲಿ ಗೌರವಾನ್ವಿತ ಉಚ್ಚ ನ್ಯಾಯಾಲಯ, ಬೆಂಗಳೂರು ಸ್ಪಷ್ಟ ಆದೇಶ ಹೊರಡಿಸಿದೆ. ಜಿಲ್ಲೆಯಾದ್ಯಂತ ವಿವಿಧ ಇಲಾಖೆಗಳಲ್ಲಿನ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ತೀವ್ರ ನಿಗಾ ವಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ವಿಜಯಪುರ | ಏ.10ರಿಂದ ರಾಜ್ಯಮಟ್ಟದ ಬೃಹತ್ ಪುಸ್ತಕ ಮೇಳ

ಬಾಲ್ಯ ವಿವಾಹ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ದೊರೆತಲ್ಲಿ, ತಕ್ಷಣವೇ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ ತುರ್ತು ಸೇವೆ 112, ಹತ್ತಿರದ ಪೊಲೀಸ್ ಠಾಣೆ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ತಿಳಿಸುವಂತೆ ಮನವಿ ಮಾಡಲಾಗಿದೆ. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುತ್ತದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಭಾರತೀಯ ತತ್ವಶಾಸ್ತ್ರಕ್ಕೆ ಮಹತ್ವದ ಕೊಡುಗೆ: ಪ್ರೊ. ಪಿ.ಜಿ. ತಡಸ

ಮಧ್ವಾಚಾರ್ಯರು ದ್ವೈತ ತತ್ವವನ್ನು ದೇಶಾದ್ಯಂತ ಪಸರಿಸುವ ಮೂಲಕ ಭಾರತೀಯ ತತ್ವಶಾಸ್ತ್ರ ಹಾಗೂ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ ಆಕಾಂಕ್ಷಿಗಳ ಅಬ್ಬರ!

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...