ವಿಜಯಪುರ | ಮೇ.8ರಂದು ಬೃಹತ್ ರೈತ ಜನ ಜಾಗೃತಿ ಸಮಾವೇಶ; 15 ಸಾವಿರ ರೈತರು ಪಾಲ್ಗೊಳ್ಳುವ ನಿರೀಕ್ಷೆ

Date:

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಮೇ.8ರಂದು ವಿಜಯನಗರದ ದರಬಾರ್ ಮೈದಾನದಲ್ಲಿ ರಾಜ್ಯ ಮಟ್ಟದ 4ನೇ ಬೃಹತ್ ರೈತ ಜನ ಜಾಗೃತಿ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ತಿಳಿಸಿದರು.

- Advertisement -

ನಗರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಗಮನಕ್ಕೆ ತರಲು ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಬೃಹತ್ ಸಮಾವೇಶವು ಸುಕ್ಷೇತ್ರ ಮುಗಳಖೋಡ-ಜಿಡಗಾದ ಡಾ. ಮುರಘರಾಜೇಂದ್ರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಜರುಗಲಿದ್ದು, ಶಿರಶ್ಯಾಡದ ಅಭಿನವ ಮುರಘೇಂದ್ರ ಶಿವಾಚಾರ್ಯರು, ಬೆಳಗಾವಿಯ ಸುವರ್ಣತಾಯಿ ಹೊಸಮಠ ಸೇರಿದಂತೆ ಹಲವು ಮಠಾಧೀಶರು ಉಪಸ್ಥಿತರಿರಲಿದ್ದಾರೆ. ಸಂಘದ ರಾಜ್ಯಾಧ್ಯಕ್ಷ ಚುನಪ್ಪಾ ಪೂಜೇರಿ ಅಧ್ಯಕ್ಷತೆ ವಹಿಸಲಿದ್ದು, ಕೃಷಿ ವಿಜ್ಞಾನಿಗಳು ಹಾಗೂ ರೈತ ಚಿಂತಕರು ಕೃಷಿ ಕುರಿತು ವಿಚಾರ ಮಂಡಿಸಲಿದ್ದಾರೆ. ಇದೇ ವೇಳೆ ಕೃಷಿ ಸಾಧಕರಿಗೆ ವಿಶೇಷ ಸನ್ಮಾನ ಕೂಡ ಆಯೋಜಿಸಲಾಗಿದೆ.

“ರೈತರಿಗೆ ಎಲ್ಲಾ ಕ್ಷೇತ್ರಗಳಲ್ಲೂ ಅನ್ಯಾಯವಾಗುತ್ತಿದೆ. ಇದನ್ನು ತಡೆಯಲು ಜಾತಿ, ಧರ್ಮ ಮತ್ತು ಪಕ್ಷಾತೀತವಾಗಿ ರೈತರು ಒಂದಾಗಬೇಕು. ಗುರ್ಲಾಪುರ ಹೋರಾಟದ ಮಾದರಿಯಲ್ಲೇ ಈ ಸಮಾವೇಶದ ಮೂಲಕ ರೈತ ಶಕ್ತಿಯನ್ನು ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ತೋರಿಸಬೇಕಿದೆ. ಜಿಲ್ಲೆಯ 13 ತಾಲೂಕುಗಳ ಪ್ರತಿಯೊಂದು ಹಳ್ಳಿಯಿಂದ ರೈತರು, ಮಹಿಳೆಯರು ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು” ಎಂದು ಅವರು ಕರೆ ನೀಡಿದರು.

ಇದನ್ನೂ ಓದಿ: ವಿಜಯಪುರ | ಹಿಂಗಾರು ಹಂಗಾಮು; ಏ.7ರವರೆಗೆ ಕಾಲುವೆಗೆ ನೀರು

ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ಆಲಮಟ್ಟಿ ಜಲಾಶಯದ ಎತ್ತರವನ್ನು 524.256 ಮೀಟರ್‌ಗೆ ಏರಿಸಲು ಅಗತ್ಯವಿರುವ ಹಣ ಬಿಡುಗಡೆ ಹಾಗೂ ಪುನರ್ವಸತಿ ಕಾರ್ಯಗಳನ್ನು ಸರ್ಕಾರ ಕೂಡಲೇ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಬೇಡಿಕೆಗಾಗಿ ಬಾಗಲಕೋಟೆ, ಯಾದಗಿರಿ, ಕಲಬುರ್ಗಿ ಮತ್ತು ರಾಯಚೂರು ಜಿಲ್ಲೆಗಳ ಲಕ್ಷಾಂತರ ರೈತರನ್ನು ಒಗ್ಗೂಡಿಸಿ ಪಾದಯಾತ್ರೆ ಹಾಗೂ ಬೃಹತ್ ಹೋರಾಟಕ್ಕೆ ಈ ಸಮಾವೇಶದ ವೇದಿಕೆಯಲ್ಲಿ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಸಮಾವೇಶದ ಯಶಸ್ವಿಗಾಗಿ ಹಳ್ಳಿಗಳಲ್ಲಿ ವಾಹನಗಳ ಮೂಲಕ ಪ್ರಚಾರ, ಕರಪತ್ರ ವಿತರಣೆ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಜಾಗೃತಿ ಮೂಡಿಸಲು ನಿರ್ಧರಿಸಲಾಯಿತು. ಸಭೆಯಲ್ಲಿ ಮುಖಂಡರಾದ ಶಾಂತಗೌಡ ಪಾಟೀಲ, ಸೋಮು ಬಿರಾದಾರ, ಶ್ರೀಶೈಲ ವಾಲಿಕಾರ, ಸಾತಲಿಂಗಯ್ಯ ಸಾಲಿಮಠ, ಸುಜಾತಾ ಅವಟಿ, ಚೆನ್ನಮ್ಮ ಮೈತ್ರಿ ಸೇರಿದಂತೆ 13 ತಾಲೂಕುಗಳ ರೈತ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ ಡಿಸಿಸಿ ಬ್ಯಾಂಕ್‌ಗೆ ದಾಖಲೆಯ ಪ್ರಗತಿ: ₹29.16 ಕೋಟಿ ನಿವ್ವಳ ಲಾಭ

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(ಡಿಸಿಸಿ) ಬ್ಯಾಂಕ್‌ 2025-26ನೇ ಸಾಲಿನಲ್ಲಿ ದಾಖಲೆ ಪ್ರಮಾಣದ...

ವಿಜಯಪುರ | ಪಾಟೀಲ–ನಾಡಗೌಡರ ವಾಕ್ಸಮರಕ್ಕೆ ಹೊಸ ತಿರುವು: ಆಪ್ತರ ನಡುವೆ ಹೆಚ್ಚಿದ ರಾಜಕೀಯ ಅಂತರ

ಪಾಟೀಲ–ನಾಡಗೌಡರ ನಡುವಿನ ವಾಕ್ಸಮರ ಕೇವಲ ಇಬ್ಬರು ನಾಯಕರ ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಸೀಮಿತವಾಗದೆ,...

ವಿಜಯಪುರ | ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟಿದ್ದರೆ ಸೆ.23ರೊಳಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ–2026(ಎಸ್‌ಐಆರ್) ಹಿನ್ನೆಲೆಯಲ್ಲಿ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ...

ವಿಜಯಪುರ | ಸೆ. 26, 27ರಂದು ರಾಜ್ಯಮಟ್ಟದ ಸೂರ್ಯ ನಮಸ್ಕಾರ ಕ್ರೀಡಾಕೂಟ

ನಿವೃತ್ತ ಶಿಕ್ಷಕ ದಿ.ದ್ಯಾಮನಗೌಡ ಅ.ಪಾಟೀಲ, ಉತ್ನಾಳ ಸ್ಮರಣಾರ್ಥ 2ನೇ ರಾಜ್ಯಮಟ್ಟದ ಸೂರ್ಯ...