ವಿಜಯಪುರ | ಮದ್ಯಪಾನ ಸಮರ್ಥಿಸಿದ ಸಚಿವ ಹೆಚ್ ಕೆ ಪಾಟೀಲ್; AIDYO ಖಂಡನೆ

Date:

ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯಕ್ರಮದಲ್ಲಿ ಮದ್ಯಪಾನದ ಪರವಾಗಿ ಮಾತನಾಡಿದ ರಾಜ್ಯದ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರ ಹೇಳಿಕೆಯನ್ನು ಎಐಡಿವೈಒ (AIDYO) ವಿಜಯಪುರ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.

- Advertisement -

ಸಂಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದ ಸಚಿವರು, “ಮದ್ಯಪಾನ ನಿಷೇಧ ಅಪ್ರಸ್ತುತ, ರಾಜ್ಯಕ್ಕೆ ಇದರಿಂದ 40 ಸಾವಿರ ಕೋಟಿ ರೂಪಾಯಿ ಆದಾಯವಿದೆ. ಮದ್ಯಪಾನ ಮಾಡುವವರು 60-65 ವರ್ಷ ಬದುಕಬಹುದು” ಎಂದು ಹೇಳಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮದ್ಯಪಾನ ಮುಕ್ತ ಸಮಾಜದ ಬಗ್ಗೆ ಅರಿವು ಮೂಡಿಸಬೇಕಾದ ವೇದಿಕೆಯಲ್ಲೇ ಸಚಿವರು ಮದ್ಯಪಾನವನ್ನು ಸಮರ್ಥಿಸಿಕೊಂಡಿರುವುದು ವಿಪರ್ಯಾಸ ಎಂದು ಸಮಿತಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಎಐಡಿವೈಒ ಜಿಲ್ಲಾಧ್ಯಕ್ಷ ಶ್ರೀಕಾಂತ ಕೊಂಡಗೂಳಿ, “ಸಚಿವರ ಹೇಳಿಕೆ ಅತ್ಯಂತ ಬೇಜವಾಬ್ದಾರಿಯುತವಾಗಿದ್ದು, ನಗರ ಮತ್ತು ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ಹಾಗೂ ಯುವಜನತೆ ಮದ್ಯದ ವ್ಯಸನಕ್ಕೆ ಬಲಿಯಾಗಿ ಸಾವಿರಾರು ಕುಟುಂಬಗಳು ಬೀದಿಗೆ ಬರುತ್ತಿವೆ. ಇಂತಹ ವಾಸ್ತವದ ಅರಿವಿದ್ದರೂ ಸಚಿವರು ಆದಾಯದ ಲೆಕ್ಕಾಚಾರ ಹಾಕಿ ಜನರ ಜೀವನದ ಜೊತೆ ಆಟವಾಡುತ್ತಿದ್ದಾರೆ. ಮದ್ಯ ಸೇವಿಸಿ ದೀರ್ಘಕಾಲ ಬದುಕಬಹುದು ಎಂಬ ಸಚಿವರ ಮಾತು ಯುವ ಪೀಳಿಗೆಗೆ ತಪ್ಪು ಸಂದೇಶ ರವಾನಿಸುತ್ತದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಜಯಪುರ | ಹಿಂಗಾರು ಹಂಗಾಮು; ಏ.7ರವರೆಗೆ ಕಾಲುವೆಗೆ ನೀರು

ಸಚಿವರು ತಮ್ಮ ಈ ವಿವಾದಾತ್ಮಕ ಹೇಳಿಕೆಯನ್ನು ಕೂಡಲೇ ಬೇಷರತ್ತಾಗಿ ಹಿಂತೆಗೆದುಕೊಳ್ಳಬೇಕು. ಕೇವಲ 40 ಸಾವಿರ ಕೋಟಿ ರೂಪಾಯಿ ಆದಾಯಕ್ಕಾಗಿ ಜನರ ಆರೋಗ್ಯ ಮತ್ತು ಭವಿಷ್ಯವನ್ನು ಪಣಕ್ಕಿಡುವುದು ನಾಚಿಕೆಗೇಡಿನ ಸಂಗತಿ. ಸರ್ಕಾರ ಕೂಡಲೇ ಮದ್ಯಪಾನ ನಿಷೇಧದ ಬಗ್ಗೆ ಗಂಭೀರ ಕ್ರಮ ಕೈಗೊಳ್ಳಬೇಕು. ರಾಜ್ಯಾದ್ಯಂತ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಎಐಡಿವೈಒ ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ ಡಿಸಿಸಿ ಬ್ಯಾಂಕ್‌ಗೆ ದಾಖಲೆಯ ಪ್ರಗತಿ: ₹29.16 ಕೋಟಿ ನಿವ್ವಳ ಲಾಭ

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(ಡಿಸಿಸಿ) ಬ್ಯಾಂಕ್‌ 2025-26ನೇ ಸಾಲಿನಲ್ಲಿ ದಾಖಲೆ ಪ್ರಮಾಣದ...

ವಿಜಯಪುರ | ಪಾಟೀಲ–ನಾಡಗೌಡರ ವಾಕ್ಸಮರಕ್ಕೆ ಹೊಸ ತಿರುವು: ಆಪ್ತರ ನಡುವೆ ಹೆಚ್ಚಿದ ರಾಜಕೀಯ ಅಂತರ

ಪಾಟೀಲ–ನಾಡಗೌಡರ ನಡುವಿನ ವಾಕ್ಸಮರ ಕೇವಲ ಇಬ್ಬರು ನಾಯಕರ ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಸೀಮಿತವಾಗದೆ,...

ವಿಜಯಪುರ | ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟಿದ್ದರೆ ಸೆ.23ರೊಳಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ–2026(ಎಸ್‌ಐಆರ್) ಹಿನ್ನೆಲೆಯಲ್ಲಿ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ...

ವಿಜಯಪುರ | ಸೆ. 26, 27ರಂದು ರಾಜ್ಯಮಟ್ಟದ ಸೂರ್ಯ ನಮಸ್ಕಾರ ಕ್ರೀಡಾಕೂಟ

ನಿವೃತ್ತ ಶಿಕ್ಷಕ ದಿ.ದ್ಯಾಮನಗೌಡ ಅ.ಪಾಟೀಲ, ಉತ್ನಾಳ ಸ್ಮರಣಾರ್ಥ 2ನೇ ರಾಜ್ಯಮಟ್ಟದ ಸೂರ್ಯ...