ವಿಜಯಪುರ |ಆಲಮಟ್ಟಿ ಜಲಾಶಯದ ನೀರಿನ ಹಂಚಿಕೆ ಲೆಕ್ಕಪತ್ರ ನೀಡಿ;ರೈತ ಸಂಘ ಆಗ್ರಹ

Date:

ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಿಂದ ವಿಜಯಪುರ ಹಾಗೂ ಬಾಗಲಕೋಟ ಅವಳಿ ಜಿಲ್ಲೆಯ ರೈತರ ಬೆಳೆಗಳಿಗೆ ಮತ್ತು 183 ಕೆರೆಗಳಿಗೆ ಹರಿಸಿದ ನೀರಿನ ಪ್ರಮಾಣ ಹಾಗೂ ನಾರಾಯಣಪುರ ಜಲಾಶಯಕ್ಕೆ ಹರಿಸಿದ ನೀರಿನ ಸಂಪೂರ್ಣ ಲೆಕ್ಕಪತ್ರವನ್ನು ಅಧಿಕೃತವಾಗಿ ಒದಗಿಸುವಂತೆ ಅಖಂಡ ಕರ್ನಾಟಕ ರೈತ ಸಂಘದ ಮುಖಂಡರು ಕೆಬಿಜೆಎನ್‌ಎಲ್ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

- Advertisement -

ಜಲಾಶಯದಲ್ಲಿ ಸಂಗ್ರಹವಾಗಿದ್ದ 123.081 ಟಿಎಂಸಿ ನೀರಿನಲ್ಲಿ ಬಳಕೆಯ ನಿರ್ಬಂಧದ 17 ಟಿಎಂಸಿ ಹೊರತುಪಡಿಸಿ ಉಳಿದ 105 ಟಿಎಂಸಿ ನೀರನ್ನು ಹೇಗೆ ಹಂಚಿಕೆ ಮಾಡಲಾಗಿದೆ ಎಂಬುದರ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ವಿಠ್ಠಲ ಬಿರಾದಾರ್ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಬಸವನಬಾಗೇವಾಡಿ ತಹಶೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರ್ ವೈ.ಎಸ್. ಸೋಮನಕಟ್ಟಿ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕೆಬಿಜೆಎನ್‌ಎಲ್ ಅಧಿಕಾರಿಗಳು ನೀಡಿದ ಮಾಹಿತಿ ಸಮರ್ಪಕವಾಗಿಲ್ಲ. ಅವಳಿ ಜಿಲ್ಲೆಯ ರೈತರಿಗೆ ಅನ್ಯಾಯವಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಇಲಾಖೆಯ ಅಧಿಕೃತ ಮೊಹರು ಸಹಿತ ಲಿಖಿತ ಲೆಕ್ಕಪತ್ರ ನೀಡದೆ ಕಂಪ್ಯೂಟರ್‌ನಲ್ಲಿ ಸಿದ್ಧಪಡಿಸಿದ ಮಾಹಿತಿಯನ್ನು ಮಾತ್ರ ಒದಗಿಸಿದ್ದಾರೆ ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.

ಮೂರು-ನಾಲ್ಕು ದಿನಗಳಲ್ಲಿ ನೈಜ ಹಾಗೂ ಅಧಿಕೃತ ಲೆಕ್ಕಪತ್ರ ಒದಗಿಸದಿದ್ದರೆ ಕೆಬಿಜೆಎನ್‌ಎಲ್ ಮುಖ್ಯ ಅಭಿಯಂತರರ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ವಣಕೇರಪ್ಪ ತೆಲಗಿ, ಹಣಮಂತ್ರಾಯ ಹಂದ್ರಾಳ, ಲಾಲಸಾಬ್ ಹಳ್ಳೂರ, ಗುರುಲಿಂಗಪ್ಪ ಪಡಸಲಗಿ, ಜಲಾಲ್‌ಸಾಬ್ ಮುಲ್ಲಾ, ಶಿವಪ್ಪ ಸುಂಟ್ಯಾಣ, ದಾವಲ್‌ಸಾಬ್ ನದಾಫ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೋಡಿ ಗ್ರಾಮದಲ್ಲಿ ಅನಧಿಕೃತ ಹೋಂ ಸ್ಟೇ ವಿರುದ್ಧ ಗ್ರಾಮಸ್ಥರ ಧರಣಿ

ಬ್ರಹ್ಮಾವರ ತಾಲೂಕಿನ ಸಾಸ್ತಾನ ಸಮೀಪದ ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ...

ಬೀದರ್‌ | ʼಬಸವ ಮಂಟಪ’ ಕೃತಿಗೆ ಮುಟ್ಟುಗೋಲು : ಸ್ವಾಗತಾರ್ಹ ನಿರ್ಧಾರ

ಲೇಖಕ ರವಿ ಹಂಜ್ ರಚಿಸಿರುವ ‘ಬಸವ ಮಂಟಪ’ ಕೃತಿಗೆ ಮುಟ್ಟುಗೋಲು ಹಾಕಿಕೊಳ್ಳಲು...

ಬೀದರ್‌ | ʼಬಸವ ಮಂಟಪʼ ಕೃತಿ ಮುಟ್ಟುಗೋಲು ನಿರ್ಧಾರ: ಸಂಭ್ರಮಾಚರಣೆ

ಬಸವಣ್ಣನವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿರುವ ಲೇಖಕ ರವಿ ಹಂಜ್ ವಿರುದ್ಧ...