ವಿಜಯಪುರ | ಎನ್‌ಆರ್‌ಎಲ್‌ಎಂ ಮೂಲಕ ಗ್ರಾಮೀಣ ಮಹಿಳಾ ಸಬಲೀಕರಣ: ಸಿಇಒ ರಿಷಿ ಆನಂದ್

Date:

ಗ್ರಾಮೀಣ ಮಹಿಳೆಯರ ಸಬಲೀಕರಣದ ಉದ್ದೇಶದಿಂದ ಸರ್ಕಾರ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆ (ಎನ್‌ಆರ್‌ಎಲ್‌ಎಂ) ಜಾರಿಗೆ ತಂದಿದೆ. ಈ ಯೋಜನೆಯನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿಜಯಪುರ ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ್ ಹೇಳಿದರು.

- Advertisement -

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಬ್ಯಾಂಕರ್ಸ್ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

“ನಮ್ಮ ದೇಶದಲ್ಲಿ ಶೇ.70 ರಷ್ಟು ಜನರು ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿದ್ದು, ಗ್ರಾಮಾಭಿವೃದ್ಧಿ ಅವಶ್ಯಕತೆಯಿದೆ. ಯೋಜನೆಯಡಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ ರಚಿಸಿ, ಅವುಗಳನ್ನು ಸಾಂಸ್ಥಿಕ ಮತ್ತು ಆರ್ಥಿಕವಾಗಿ ಬಲವರ್ಧನೆ ಮಾಡುವುದರ ಜತೆಗೆ ಸಮುದಾಯ ಬಂಡವಾಳ ನಿಧಿ, ಸುತ್ತು ನಿಧಿ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ತನ್ಮೂಲಕ ಗ್ರಾಮೀಣ ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಸ್ವ-ಸಹಾಯ ಸಂಘಗಳ ಬಲವರ್ಧನೆಗೆ ಬ್ಯಾಂಕ್ ಖಾತೆ ತೆರೆಯುವುದು ಹಾಗೂ ಅವರಿಗೆ ಸಾಲ ಸೌಲಭ್ಯ ಒದಗಿಸುವುದರ ಜೊತೆಗೆ ಮಹಿಳೆಯರ ಜೀವನೋಪಾಯಕ್ಕೆ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಕರಿಸಬೇಕು. ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು” ಎಂದು ತಿಳಿಸಿದರು.

ಇದನ್ನೂ ಓದಿ: ವಿಜಯಪುರ | ಕೊಳಚೆ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಗೌಡಪ್ಪ ಬಡಿಗೇರ ಮನವಿ

ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ನವಲ್ ಕಿಶೋರ್ ಸಿಂಗ್, ಬ್ಯಾಂಕ್ ವ್ಯವಸ್ಥಾಪಕರು, ಶಾಖೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ಜಿಲ್ಲಾ ವ್ಯವಸ್ಥಾಪಕರು, ತಾಲೂಕು ಮಟ್ಟದ ಸಿಬ್ಬಂದಿಗಳು, ಲೀಡ್ ಬ್ಯಾಂಕಿನ ಸಿಬ್ಬಂದಿ, ಜಿಲ್ಲಾ ಮಟ್ಟದ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು ಸಾಕಣೆದಾರರಿಗೂ ಸಂಕಷ್ಟ

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ...

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...