ವಿಜಯಪುರ | ದ್ವಿತೀಯ ಪಿಯು ಪರೀಕ್ಷೆ ಆರಂಭ; 64 ಕೇಂದ್ರಗಳಿಗೆ ಡಿಸಿ ಆನಂದ ಕೆ ಭೇಟಿ, ಪರಿಶೀಲನೆ

Date:

ವಿಜಯಪುರ ಜಿಲ್ಲೆಯ 64 ಪರೀಕ್ಷಾ ಕೇಂದ್ರಗಳಲ್ಲಿ ಇಂದಿನಿಂದ (ಫೆ.28) ದ್ವಿತೀಯ ಪಿಯುಸಿ-1ರ ಪರೀಕ್ಷೆಗಳು ಆರಂಭಗೊಂಡಿವೆ. ಶನಿವಾರ ಕನ್ನಡ ಹಾಗೂ ಅರೆಬಿಕ್ ವಿಷಯಗಳ ಪರೀಕ್ಷೆ ಶಾಂತಿಯುತವಾಗಿ ಜರುಗಿತು.

- Advertisement -

ಪರೀಕ್ಷೆಗಳ ಸುಸೂತ್ರ ಹಾಗೂ ಸುಗಮ ನಿರ್ವಹಣೆಗೆ ಕೈಗೊಳ್ಳಲಾದ ವ್ಯವಸ್ಥೆಗಳ ಪರಿಶೀಲನೆಗಾಗಿ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ನಗರದ ವಿಬಿ ದರಬಾರ ಕಾಲೇಜು, ಎಸ್.ಎಸ್. ಪದವಿಪೂರ್ವ ಕಾಲೇಜು ಹಾಗೂ ಖೇಡ ಕಾಲೇಜಿನ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದರು. ಈ ವೇಳೆ ಅವರು ಪರೀಕ್ಷಾ ಕೊಠಡಿಗಳು, ಭದ್ರತಾ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಒದಗಿಸಲಾದ ಸೌಲಭ್ಯಗಳನ್ನು ಪರಿಶೀಲಿಸಿ, ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗದೇ ಅತ್ಯಂತ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವ ನಿಟ್ಟಿನಲ್ಲಿ ಅಗತ್ಯ ಗಾಳಿ ಬೆಳಕು ಕುಡಿಯುವ ನೀರು ಒದಗಿಸಬೇಕು. ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮಹತ್ವದ ಮೈಲಿಗಲ್ಲಾಗಿರುವುದರಿಂದ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಬಾರದ ರೀತಿಯಲ್ಲಿ ಎಚ್ಚರಿಕೆ ವಹಿಸಬೇಕು. ಯಾವುದೇ ದೂರಿಗೆ ಆಸ್ಪದೆ ನೀಡದೇ ಪರೀಕ್ಷಾ ನಿಯಮಗಳನ್ನುನಸರಿಸಿ. ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿ ತಮಗೆ ವಹಿಸಿದ ಪರೀಕ್ಷಾ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯಿಂದ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.

WhatsApp Image 2026 02 28 at 4.34.53 PM

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿಗಳ ಮಾಹಿತಿ, ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಆಸನ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ಮೂಲಭೂತ ಸೌಲಭ್ಯ, ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳಿಗೆ ಪೋಲಿಸ್ ಭದ್ರತಾ ಹಾಗೂ ವೈದ್ಯಕೀಯ ವ್ಯವಸ್ಥೆ ಕಲ್ಪಿಸಿರುವ ಕುರಿತು ಮಾಹಿತಿ ಪಡೆದುಕೊಂಡರು.

ಎಲ್ಲಾ ಕೇಂದ್ರಗಳಿಗೆ ಭದ್ರತೆ ಒದಗಿಸುವುದು, ವಿದ್ಯಾರ್ಥಿಗಳು ಭಯ ಮುಕ್ತ ಮತ್ತು ಪ್ರಶಾಂತ ವಾತಾವರಣದಲ್ಲಿ ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ವ್ಯವಸ್ಥೆ ಮಾಡಬೇಕು. ಇದಕ್ಕೆ ಪೂರಕವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಅಧಿಕಾರಿಗಳು ಹಾಗೂ ವೆಬ್ ಕಾಸ್ಟಿಂಗ್ ಕೇಂದ್ರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ: ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿ ಸಮಗ್ರ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

ಇದೇ ವೇಳೆ ಪ್ರಥಮ ಚಿಕಿತ್ಸಾ ವ್ಯವಸ್ಥೆಯ ಕಿಟ್ ಗಳನ್ನು ಪರಿಶೀಲಿಸಿದರು. ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಆಸನ ವ್ಯವಸ್ಥೆ, ಪರೀಕ್ಷಾ ಕೊಠಡಿ ಮೇಲ್ವಿಚಾರಕರ ನೇಮಕ, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ, ಗಾಳಿ ಹಾಗೂ ಪ್ರಥಮ ಚಿಕಿತ್ಸಾ ವ್ಯವಸ್ಥೆಗಳು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು. ಇನ್ನುಳಿದಂತೆ ಎಲ್ಲ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಅಭಿರಕ್ಷಕರು. ಸ್ಥಾನಿಕ ಜಾಗೃತ ದಳದವರು ಹಾಗೂ ಮೊಬೈಲ್ ಸ್ವಾಧೀನಾಧಿಕಾರಿಗಳು ನಿಯಮಾನುಸಾರ ಕರ್ತವ್ಯ ನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಅನ್ಯ ಹಾಗೂ ಬಾಹ್ಯ ವ್ಯಕ್ತಿಗಳು ಇಲ್ಲದೇ ಇರುವುದನ್ನೂ ಸಹ ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಸಮಸ್ಯೆಗಳು ಉಂಟಾಗದಂತೆ ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ಶಿಸ್ತಿನಿಂದ ನಡೆಸುವುದು, ವಿದ್ಯಾರ್ಥಿಗಳು ಕುಳಿತುಕೊಳ್ಳುವ ಆಸನಗಳ ಮಧ್ಯದಲ್ಲಿ ಹೆಚ್ಚಿನ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.

ಈ ಸಂದರ್ಭ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಕೆ.ಹೊಸಮನಿ ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...