ವಿಜಯಪುರ | ಫೆ.28ರಿಂದ ದ್ವಿತೀಯ ಪಿಯು ಪರೀಕ್ಷೆ; ವ್ಯವಸ್ಥಿತವಾಗಿ ನಡೆಸಲು ಸಿಇಒ ಸೂಚನೆ

Date:

ವಿಜಯಪುರ ಜಿಲ್ಲೆಯ ಹದಿಮೂರು ತಾಲೂಕಗಳಲ್ಲಿ ಒಟ್ಟು 64 ಪರೀಕ್ಷಾ ಕೇಂದ್ರಗಳಲ್ಲಿ ಫೆ.28ರಿಂದ ಮಾ.17ರವರೆಗೆ ದ್ವಿತೀಯ ಪಿಯು ಪರೀಕ್ಷೆ-1 ನಡೆಯಲಿದ್ದು, ವ್ಯವಸ್ಥಿತವಾಗಿ ನಡೆಸಬೇಕೆಂದು ಜಿಪಂ ಸಿಇಒ ರಿಷಿ ಆನಂದ್ ಹೇಳಿದರು.

- Advertisement -

ನಗರದ ಗಾಂಧಿ ವೃತ್ತದ ಬಳಿಯ ಸರಕಾರಿ ಪಿಯು ಕಾಲೇಜಿನ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಈ ಬಾರಿ 32,178 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಯಾವುದೇ ಸಮಸ್ಯೆ ಬಾರದ ರೀತಿಯಲ್ಲಿ ಪರೀಕ್ಷೆ ನಿಯೋಜಿಸಿ ಅಧಿಕಾರಿಗಳು ಮುಂಜಾಗ್ರತೆಯಿಂದ ಪರೀಕ್ಷಾ ನಿಯಮಾನ್ವಯ ಕಾರ್ಯನಿರ್ವಹಿಸಬೇಕು ಎಂದರು.

ಪರೀಕ್ಷೆಗೆ ಸಂಬಂಧಿಸಿದ ಸಾಮಗ್ರಿಗಳನ್ನು 27 ಮಾರ್ಗಾಧಿಕಾರಿಗಳ ತಂಡಕ್ಕೆ ಹಸ್ತಾಂತರಿಸಲು ಅಪರ ಜಿಲ್ಲಾಧಿಕಾರಿಗಳು, ಉಪನಿರ್ದೇಶಕರು ಮತ್ತು ಡಿಡಿಪಿಯು ಅವರನ್ನು ಒಳಗೊಂಡ ಸಮಿತಿ ನೇಮಕ ಮಾಡಲಾಗಿದೆ. ಒಟ್ಟು 27 ಪರೀಕ್ಷಾ ಕೇಂದ್ರದ ಮಾರ್ಗಗಳಿದ್ದು, ಇದಕ್ಕಾಗಿ ತಹಶೀಲ್ದಾರರು, ಗ್ರೇಡ್ -2 ತಹಶೀಲ್ದಾರರು, ಬಿಇಒಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು ಹಾಗೂ ಸರಕಾರಿ/ ಅನುದಾನಿತ ಪಿಯು ಕಾಲೇಜುಗಳ ಪ್ರಾಚಾರ್ಯರು ಮತ್ತು ಉಪನ್ಯಾಸಕರನ್ನು ಈ ಸದಸ್ಯ ಸಮಿತಿಯ ಸದಸ್ಯರನ್ನಾಗಿ ಜಿಲ್ಲಾಧಿಕಾರಿಗಳು ನೇಮಕ ಮಾಡಿದ್ದಾರೆ. ಈ ಸಮಿತಿ ತಂಡಕ್ಕೆ ತಲಾ ಒಬ್ಬ ಸಶಸ್ತ್ರ ಪೊಲೀಸ್ ಸಿಬ್ಬಂದಿ ಹಾಗೂ ಜಿಲ್ಲೆಯ 64 ಪರೀಕ್ಷೆ ಕೇಂದ್ರಗಳಿಗೆ ಸೂಕ್ತ ಬಂದೋ ಬಸ್ತಿಗಾಗಿ ಪೊಲೀಸ್ ಸಿಬ್ಬಂದಿ ಮತ್ತು ಪರೀಕ್ಷೆ ಮುಗಿಸಿದ ನಂತರ ಉತ್ತರ ಪತ್ರಿಕೆ ಬಂಡಲ್ ಗಳನ್ನು ಪರೀಕ್ಷಾ ಕೇಂದ್ರದಿಂದ ಅಂಚೆ ಕಚೇರಿಗೆ ಸಾಗಿಸುವ ಪೊಲೀಸ್ ಸಿಬ್ಬಂದಿ ನೇಮಕ ಮಾಡಲು ಎಸ್ಪಿ ಅವರಿಗೆ ತಿಳಿಸಲಾಗಿದೆ ಎಂದರು.

ಇದನ್ನೂ ಓದಿ: ವಿಜಯಪುರ | ಮಹಿಳಾ ವಿವಿಯಲ್ಲಿ ರಾಜ್ಯಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

ಕೇಂದ್ರ ಮುಖ್ಯಸ್ಥರು ಪರೀಕ್ಷೆ ನಡೆಯುವ ಮುಂಚೆ ನಿಯೋಜನೆಗೊಂಡ ಅಧಿಕಾರಿ ಹಾಗೂ ಸಿಬ್ಬಂದಿ ಜೊತೆಗೆ ಸಭೆ ನಡೆಸಿ, ಕೊಠಡಿಗಳು ಸುವ್ಯವಸ್ಥಿತವಾಗಿರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ದಿನದಂದು ಶುದ್ಧ ಕುಡಿಯುವ ನೀರು, ಶೌಚಾಲಯ, ಸಮರ್ಪಕ ಬಳಕೆ ಹಾಗೂ ವಿದ್ಯುತ್ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತಲಿನ ಎರಡು ನೂರು ಮೀಟರ್ ಪ್ರದೇಶದಲ್ಲಿ ನಿಷೇಧ ಜಾರಿ, ಪರೀಕ್ಷಾ ಕೇಂದ್ರಗಳಿಗೆ ಸಿಸಿ ಕ್ಯಾಮೆರಾ ಅಳವಡಿಕೆ, ವೆಬ್ ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲು ನಿಗಾವಹಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸರ್ಕಾರಿ ಆಸ್ಪತ್ರೆಗಳನ್ನು ದತ್ತು ನೀಡುವ ಕ್ರಮಕ್ಕೆ ಎಸ್‌ಯುಸಿಐ ಬಿ ಭಗವಾನ್ ರೆಡ್ಡಿ ಖಂಡನೆ

ರಾಜ್ಯದ ಸರ್ಕಾರಿ ತಾಲೂಕು ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳನ್ನು ಸರ್ಕಾರಿ ಅಥವಾ...

ವಿಜಯಪುರ ಡಿಸಿಸಿ ಬ್ಯಾಂಕ್‌ಗೆ ದಾಖಲೆಯ ಪ್ರಗತಿ: ₹29.16 ಕೋಟಿ ನಿವ್ವಳ ಲಾಭ

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(ಡಿಸಿಸಿ) ಬ್ಯಾಂಕ್‌ 2025-26ನೇ ಸಾಲಿನಲ್ಲಿ ದಾಖಲೆ ಪ್ರಮಾಣದ...

ವಿಜಯಪುರ | ಪಾಟೀಲ–ನಾಡಗೌಡರ ವಾಕ್ಸಮರಕ್ಕೆ ಹೊಸ ತಿರುವು: ಆಪ್ತರ ನಡುವೆ ಹೆಚ್ಚಿದ ರಾಜಕೀಯ ಅಂತರ

ಪಾಟೀಲ–ನಾಡಗೌಡರ ನಡುವಿನ ವಾಕ್ಸಮರ ಕೇವಲ ಇಬ್ಬರು ನಾಯಕರ ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಸೀಮಿತವಾಗದೆ,...

ವಿಜಯಪುರ | ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟಿದ್ದರೆ ಸೆ.23ರೊಳಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ–2026(ಎಸ್‌ಐಆರ್) ಹಿನ್ನೆಲೆಯಲ್ಲಿ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ...