ವಿಜಯಪುರ | SSLC ಪರೀಕ್ಷೆ: ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಜಿಪಂ ಸಿಇಒ ಭೇಟಿ, ಪರಿಶೀಲನೆ

Date:

ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ SSLC ಪರೀಕ್ಷಾ ಕೇಂದ್ರಗಳಿಗೆ ಹಾಗೂ ಜಿಲ್ಲಾ ಪಂಚಾಯತಿಯ ಮಿನಿ ಸಭಾಭವನದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಯಾವುದೇ ಸಿಸಿಟಿವಿ ಸ್ಥಗಿತಗೊಳ್ಳದಂತೆ ನಿಗಾ ವಹಿಸಬೇಕು ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇಲಾಖೆಯ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪಗಳು ಉಂಟಾಗದಂತೆ ಕಟ್ಟು-ನಿಟ್ಟಾಗಿ ನಡೆಸುವುದು. ಇದಕ್ಕೆ ಪೂರಕವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಶಾಲಾ ಶಿಕ್ಷಣ ಅಧಿಕಾರಿಗಳು ಹಾಗೂ ವೆಬ್ ಕಾಸ್ಟಿಂಗ್ ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಳಿಕ ವಿಜಯಪುರ ನಗರದ ಹೇಮರೆಡ್ಡಿ ಮಲ್ಲಮ್ಮ ಪ್ರೌಢ ಶಾಲೆ, ಪಿಡಿಜೆ ಪ್ರೌಢಶಾಲೆ, ಬಾಲಕರ ಮತ್ತು ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿದರು. ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಆಸನ ವ್ಯವಸ್ಥೆ, ಪರೀಕ್ಷಾ ಕೊಠಡಿ ಮೇಲ್ವಿಚಾರಕರ ನೇಮಕ, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ವ್ಯವಸ್ಥೆ, ಗಾಳಿ ಹಾಗೂ ಪ್ರಥಮ ಚಿಕಿತ್ಸಾ ವ್ಯವಸ್ಥೆಗಳು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು. ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೇ ಭಯ ಮುಕ್ತರಾಗಿ ಧೈರ್ಯದಿಂದ ಪರೀಕ್ಷೆ ಬರೆಯುವಂತೆ ಕ್ರಮವಹಿಸಬೇಕು ಎಂದರು.

ಇದನ್ನೂ ಓದಿ: ವಿಜಯಪುರ | ಪವಿತ್ರ ರಂಜಾನ್‌: ಬೆಲೆ ಏರಿಕೆ ಬಿಸಿ ಮಧ್ಯೆಯೂ ಕಳೆಗಟ್ಟಿದ ಮಾರುಕಟ್ಟೆಗಳು

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯ ಯೋಜನಾಧಿಕಾರಿ ಸಿ. ಬಿ. ಕುಂಬಾರ, ಎಸ್‌ಎಸ್‌ಎಲ್‌ಸಿ ಜಿಲ್ಲಾ ನೋಡಲ್ ಅಧಿಕಾರಿ ಟಿ. ಎಸ್. ಕೊಲ್ದಾರ, ವೆಬ್ ಕಾಸ್ಟಿಂಗ್ ಕೇಂದ್ರದ ಮುಖ್ಯಸ್ಥರಾದ ರೇಣುಕಾ ಕಲಬುರ್ಗಿ, ಜಿಲ್ಲೆಯ ಎಲ್ಲಾ ವಲಯಗಳ ಮುಖ್ಯಸ್ಥರು ಹಾಗೂ ಪರೀಕ್ಷಾ ವೆಬ್ ಕಾಸ್ಟಿಂಗ್ ವೀಕ್ಷಕರು, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಪೋಲಿಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಹಾಗೂ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ ಡಿಸಿಸಿ ಬ್ಯಾಂಕ್‌ಗೆ ದಾಖಲೆಯ ಪ್ರಗತಿ: ₹29.16 ಕೋಟಿ ನಿವ್ವಳ ಲಾಭ

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(ಡಿಸಿಸಿ) ಬ್ಯಾಂಕ್‌ 2025-26ನೇ ಸಾಲಿನಲ್ಲಿ ದಾಖಲೆ ಪ್ರಮಾಣದ...

ವಿಜಯಪುರ | ಪಾಟೀಲ–ನಾಡಗೌಡರ ವಾಕ್ಸಮರಕ್ಕೆ ಹೊಸ ತಿರುವು: ಆಪ್ತರ ನಡುವೆ ಹೆಚ್ಚಿದ ರಾಜಕೀಯ ಅಂತರ

ಪಾಟೀಲ–ನಾಡಗೌಡರ ನಡುವಿನ ವಾಕ್ಸಮರ ಕೇವಲ ಇಬ್ಬರು ನಾಯಕರ ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಸೀಮಿತವಾಗದೆ,...

ವಿಜಯಪುರ | ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟಿದ್ದರೆ ಸೆ.23ರೊಳಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ–2026(ಎಸ್‌ಐಆರ್) ಹಿನ್ನೆಲೆಯಲ್ಲಿ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ...

ವಿಜಯಪುರ | ಸೆ. 26, 27ರಂದು ರಾಜ್ಯಮಟ್ಟದ ಸೂರ್ಯ ನಮಸ್ಕಾರ ಕ್ರೀಡಾಕೂಟ

ನಿವೃತ್ತ ಶಿಕ್ಷಕ ದಿ.ದ್ಯಾಮನಗೌಡ ಅ.ಪಾಟೀಲ, ಉತ್ನಾಳ ಸ್ಮರಣಾರ್ಥ 2ನೇ ರಾಜ್ಯಮಟ್ಟದ ಸೂರ್ಯ...