ವಿಜಯಪುರ | ಏ.10ರಿಂದ ರಾಜ್ಯಮಟ್ಟದ ಬೃಹತ್ ಪುಸ್ತಕ ಮೇಳ

Date:

ಪ್ರಗತಿಪರ ಸಂಘಟನೆಗಳು, ಮೇ ಸಾಹಿತ್ಯ ಮೇಳ ವಿಜಯಪುರ ಬಳಗ ಹಾಗೂ ದಲಿತ ಸಂಘಟನೆಗಳ ಸಹಯೋಗದಲ್ಲಿ ಬುದ್ಧ, ಬಸವ, ಬಾಬಾ ಸಾಹೇಬ್ ಅಂಬೇಡ್ಕರ ಹೆಸರಿನಲ್ಲಿ ಏ.10ರಿಂದ 15ರವರೆಗೆ ರಾಜ್ಯಮಟ್ಟದ ಬೃಹತ್ ಪುಸ್ತಕ ಮೇಳ ಆಯೋಜಿಸಲಾಗಿದೆ ಎಂದು ಲಡಾಯಿ ಪ್ರಕಾಶನದ ಬಸವರಾಜ ಸೂಳಿಬಾವಿ ಹೇಳಿದರು.

- Advertisement -

ವಿಜಯಪುರ ಜಲ ನಗರದ ಬುದ್ಧ ವಿಹಾರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “5 ದಿನಗಳ ಕಾಲ ದರ್ಬಾರ ಪ್ರೌಢಶಾಲೆ ಮೈದಾನದಲ್ಲಿ ಈ ಮೇಳ ನಡೆಯಲಿದೆ. ಕಳೆದ ಒಂದು ತಿಂಗಳಿನಿಂದ ಸಿದ್ಧತೆ ಕೈಗೊಳ್ಳಲಾಗಿದ್ದು, ಇದೀಗ ಅಂತಿಮ ಘಟ್ಟ ತಲುಪಿದೆ. ರಾಜ್ಯದಲ್ಲೇ ಇದೊಂದು ವಿನೂತನ ಪ್ರಯೋಗ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಏ.10 ರಂದು ಮಧ್ಯಾಹ್ನ 12ಕ್ಕೆ ಡಿಎಸ್ಎಸ್ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ ಪುಸ್ತಕ ಮೇಳಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಬೆಳಗಾವಿ ಪ್ರಾದೇಶಿಕ ಆಯುಕ್ತೆ ಕೆಎಂ ಜಾನಕಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಂಬೈನ ಖ್ಯಾತ ಲೇಖಕ ಜೀವಿ ಪವಾರ ದೀಕ್ಷೂಚಿ ಭಾಷಣ ಮಂಡಿಸಲಿದ್ದಾರೆ ಎಂದು ತಿಳಿಸಿದರು. ಅದೇ ದಿನ ಮಧ್ಯಾಹ್ನ 3ಕ್ಕೆ ʼಸಾಮಾಜಿಕ ಬದ್ಧತೆ ಪತ್ರಕರ್ತನಾಗಿ ಅನುಭವಗಳುʼ ಎಂಬ ವಿಚಾರಗೋಷ್ಠಿ ನಡೆಯಲಿದ್ದು, ಹಿರಿಯ ಪತ್ರಕರ್ತರಾದ ಬಿಎಮ್ ಹನೀಫ್, ಚಂದ್ರಕಾಂತ್ ವಡ್ಡು ವಿಚಾರ ಮಂಡಿಸಲಿದ್ದು, ಹಿರಿಯ ಪತ್ರಕರ್ತ ರಫಿ ಭಂಡಾರಿ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಜೆ 5ಕ್ಕೆ ʼನನ್ನ ನೆಚ್ಚಿನ ಪುಸ್ತಕ- ವಿದ್ಯಾರ್ಥಿಗಳ ಮಾತುʼ ಎಂಬ ಸಂವಾದ, ನಂತರ ಸಂಜೆ 6ಕ್ಕೆ ಕವಿಗೋಷ್ಠಿ, ಸಂಜೆ 7ಕ್ಕೆ ಬಂಜಾರ ನೃತ್ಯ ನಡೆಯಲಿದೆ. ಅದೇ ದಿನ ರಾತ್ರಿ 8ಕ್ಕೆ ಗಣೇಶ ಕಾಂಬಳೆ ರಮೇಶ ನಾಯಕ ಅವರಿಂದ ʼಪವಾಡ ಬಯಲುʼ ಕಾರ್ಯಕ್ರಮ ನಡೆಯಲಿದೆ.

ʼಏ.11 ರಂದು ಶಿಕ್ಷಕ ದಂಪತಿ ಮೆರವಣಿಗೆʼ ಎಂಬ ವಿನೂತನ ಕಾರ್ಯಕ್ರಮ ನಡೆಯಲಿದ್ದು, ಸಾವಿತ್ರಿಬಾಯಿ ಫುಲೆ ಮಾರ್ಗದಿಂದ ಪುಸ್ತಕ ಮೇಳದ ಸ್ಥಳದ ವರೆಗೆ ಈ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಖ್ಯಾತ ಚಿಂತಕಿ ಡಾ. ಮೀನಾಕ್ಷಿ ಬಾಳಿ ದಿಕ್ಸೂಚಿ ಭಾಷಣ ಮಂಡಿಸಲಿದ್ದಾರೆ. ಸಂಜೆ 4ಕ್ಕೆ ಲೇಖಕರೊಂದಿಗೆ ಸಂವಾದ ನಡೆಯಲಿದೆ. ಸಂಜೆ 6ಕ್ಕೆ ಕವಿಗೋಷ್ಠಿ ನಡೆಯಲಿದೆ.

ಏ.12 ರಂದು ಬಸವಾದಿ ಶರಣರ ವಚನಗಳ ಪವಿತ್ರ ಕಟ್ಟುಗಳ ಮೆರವಣಿಗೆ ನಡೆಯಲಿದೆ, ನಂತರ ನಡೆಯಲಿರುವ ಉಪನ್ಯಾಸ ಕಾರ್ಯಕ್ರಮದಲ್ಲಿ ಖ್ಯಾತ ಚಿಂತಕಿ ಡಾ. ಎಚ್ ಎಸ್ ಅನುಪಮಾ ವಿಶೇಷ ಉಪನ್ಯಾಸ ನೀಡಲಿದ್ದಾರೆ. ನಂತರ ಮುದ್ರಣ ಗುಮ್ಮಟ ಎಂಬ ಪುಸ್ತಕ ಬಿಡುಗಡೆ ಹಾಗೂ ಪ್ರಶಸ್ತಿ ಪ್ರಧಾನ, ಛಾಯಾಚಿತ್ರಗಳ ಪ್ರದರ್ಶನ ನಡೆಯಲಿದೆ.ಏ.13 ರಂದು ಕಾರಖಾನೀಸರ ಸ್ಮರಣೆ ನಡೆಯಲಿದ್ದು, ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಉಪನ್ಯಾಸ ಮಂಡಿಸಲಿದ್ದಾರೆ.

ಇದನ್ನೂ ಓದಿ: ವಿಜಯಪುರ | ಕಾಲುವೆ ಕ್ಲೋಸರ್ ಕಾಮಗಾರಿ ಸಕಾಲಕ್ಕೆ ನಡೆಸಲು ರೈತ ಸಂಘ ಆಗ್ರಹ

ಏ.14 ರಂದು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತೋತ್ಸವ ನಡೆಯಲಿದ್ದು, ಖ್ಯಾತ ಚಿಂತಕ ಶಿವ ಸುಂದರ ಪ್ರಧಾನ ಭಾಷಣ ಮಂಡಿಸಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಅನಿಲ ಹೊಸಮನಿ, ಚೆನ್ನು ಕಟ್ಟಿಮನಿ, ರಾಜಶೇಕರ ಯಡಹಳ್ಳಿ, ಡಾ. ದೊಡ್ಡಣ್ಣ ಭಜಂತ್ರಿ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸರ್ಕಾರಿ ಆಸ್ಪತ್ರೆಗಳನ್ನು ದತ್ತು ನೀಡುವ ಕ್ರಮಕ್ಕೆ ಎಸ್‌ಯುಸಿಐ ಬಿ ಭಗವಾನ್ ರೆಡ್ಡಿ ಖಂಡನೆ

ರಾಜ್ಯದ ಸರ್ಕಾರಿ ತಾಲೂಕು ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳನ್ನು ಸರ್ಕಾರಿ ಅಥವಾ...

ವಿಜಯಪುರ ಡಿಸಿಸಿ ಬ್ಯಾಂಕ್‌ಗೆ ದಾಖಲೆಯ ಪ್ರಗತಿ: ₹29.16 ಕೋಟಿ ನಿವ್ವಳ ಲಾಭ

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(ಡಿಸಿಸಿ) ಬ್ಯಾಂಕ್‌ 2025-26ನೇ ಸಾಲಿನಲ್ಲಿ ದಾಖಲೆ ಪ್ರಮಾಣದ...

ವಿಜಯಪುರ | ಪಾಟೀಲ–ನಾಡಗೌಡರ ವಾಕ್ಸಮರಕ್ಕೆ ಹೊಸ ತಿರುವು: ಆಪ್ತರ ನಡುವೆ ಹೆಚ್ಚಿದ ರಾಜಕೀಯ ಅಂತರ

ಪಾಟೀಲ–ನಾಡಗೌಡರ ನಡುವಿನ ವಾಕ್ಸಮರ ಕೇವಲ ಇಬ್ಬರು ನಾಯಕರ ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಸೀಮಿತವಾಗದೆ,...

ವಿಜಯಪುರ | ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟಿದ್ದರೆ ಸೆ.23ರೊಳಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ–2026(ಎಸ್‌ಐಆರ್) ಹಿನ್ನೆಲೆಯಲ್ಲಿ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ...