ವಿಜಯಪುರ | ದೇಶದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅನನ್ಯ: ಎಸ್‌ಪಿ ಲಕ್ಷ್ಮಣ ನಿಂಬರಗಿ

Date:

ದೇಶ ಕಾಯುವ ಸೈನಿಕರು, ಅನ್ನ ನೀಡುವ ರೈತರು ದೇಶಕ್ಕೆ ಎಷ್ಟು ಮುಖ್ಯವೋ ಅದೇ ರೀತಿ ದೇಶದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅನನ್ಯವಾದುದು. ಜೈ ಜವಾನ್‌ ಜೈ ಕಿಸಾನ್‌ ಎನ್ನುವಂತೆ ʼಜೈ ಶಿಕ್ಷಕʼ ಎನ್ನೋಣ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು.

- Advertisement -

ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಪಾಲಕರನ್ನು ಹೊರತುಪಡಿಸಿದರೆ ಮಕ್ಕಳು ಶಿಕ್ಷಕರ ಹತ್ತಿರವೇ ಹೆಚ್ಚು ಬೆಳೆಯುತ್ತವೆ. ಹೀಗಾಗಿ ಭಾವಿ ಶಿಕ್ಷಕರಾಗಿ ಹೊರಹೊಮ್ಮುವ ಬಿ.ಎಡ್. ವಿದ್ಯಾರ್ಥಿಗಳು ಮಗುವಿನ ಸರ್ವತೋಮುಖ ಬೆಳವಣಿಗೆಗಾಗಿ ನಿರಂತರ ಶ್ರಮಿಸಬೇಕು. ರಾಜ್ಯದಲ್ಲಿ ಶಿಕ್ಷಣವು ಅತ್ಯುನ್ನತ ಸ್ಥಾನದಲ್ಲಿರಲು ಬಿಎಲ್‌ಡಿಇ ಸಂಸ್ಥೆಯೂ ಮಹತ್ವದ ಕೊಡುಗೆ ನೀಡಿದೆ ಎಂದು ಹೇಳಿದರು.

ಬಿಎಲ್‌ಡಿಇ ಸಂಸ್ಥೆಯ ಆಡಳಿತಾಧಿಕಾರಿ ಐ ಎಸ್ ಕಾಳಪ್ಪನವರ ಮಾತನಾಡಿ, “ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರವಾಗಿದ್ದು, ಬಯಸಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಉತ್ತಮ ಶಿಸ್ತು, ಆರೋಗ್ಯ, ಪ್ರಯತ್ನ ಮತ್ತು ಕರ್ತವ್ಯಶೀಲ ಗುಣಗಳನ್ನು ಅಳವಡಿಸಿಕೊಂಡು ಆದರ್ಶ ಶಿಕ್ಷಕರಾಗಿ ಬೆಳೆಯಬೇಕು” ಎಂದರು.

ಆಡಳಿತಾಧಿಕಾರಿ ಪ್ರೊ. ವಿ ಎಸ್ ಬಗಲಿ ಮಾತನಾಡಿ, “ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯವು ಶಿಕ್ಷಕರನ್ನು ತಯಾರಿಸುವ ಒಂದು ಅತ್ಯುತ್ತಮ ಕಾರ್ಖಾನೆಯಾಗಿದ್ದು, ಇಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಉತ್ತಮ ಕೌಶಲ್ಯಭರಿತ ಶಿಕ್ಷಕರಾಗಿ ಹೊರಹೊಮ್ಮಬೇಕು” ಎಂದು ಹೇಳಿದರು.

ಕಾಲೇಜಿನ ಪ್ರಾಚಾರ್ಯೆ ಡಾ. ಭಾರತಿ ವೈ ಖಾಸನೀಸ ಅವರು ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಪ್ರವೀಣ ಹೊಸಮನಿ, ಐಶ್ವರ್ಯ ಜೋಶಿ ಮತ್ತು ಸಂಗಡಿಗರು ಸಂಸ್ಥಾಪನಾ ಗೀತೆ ಹಾಡಿದರು.

ಇದನ್ನೂ ಓದಿ: ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ಈ ಸಂದರ್ಭದಲ್ಲಿ ಡಾ. ಎಂ ಎಸ್ ಹಿರೇಮಠ, ಡಾ. ಜ್ಯೋತಿ ಪಟ್ಟಣಶೆಟ್ಟಿ, ಡಾ. ಬಿ ಎಸ್ ಹಿರೇಮಠ, ಎಸ್ ಎಸ್ ಪಾಟೀಲ, ಡಾ. ಎಸ್ ಪಿ ಶೇಗುಣಸಿ, ಎಂ ಪಿ ಕುಪ್ಪಿ, ಸುರೇಶ ಬಗಲಿ, ಸುಜಾತಾ ದೇಸಾಯಿ, ಎ ಎಸ್ ಬರಡ್ಡಿ, ವಿದ್ಯಾ ಭಮಗೊಂಡ, ಸಹಾಯಕ ಪ್ರಾಧ್ಯಾಪಕ ಪಿ.ಡಿ.ಮುಲ್ತಾನಿ, ಎಸ್. ಎಸ್. ಪಾಟೀಲ, ಮಹಾವಿದ್ಯಾಲಯದ ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಮತ್ತು ಸಹಪ್ರಾಧ್ಯಾಪಕ ಡಾ. ಎಂ. ಬಿ. ಕೋರಿ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ ಡಿಸಿಸಿ ಬ್ಯಾಂಕ್‌ಗೆ ದಾಖಲೆಯ ಪ್ರಗತಿ: ₹29.16 ಕೋಟಿ ನಿವ್ವಳ ಲಾಭ

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(ಡಿಸಿಸಿ) ಬ್ಯಾಂಕ್‌ 2025-26ನೇ ಸಾಲಿನಲ್ಲಿ ದಾಖಲೆ ಪ್ರಮಾಣದ...

ವಿಜಯಪುರ | ಪಾಟೀಲ–ನಾಡಗೌಡರ ವಾಕ್ಸಮರಕ್ಕೆ ಹೊಸ ತಿರುವು: ಆಪ್ತರ ನಡುವೆ ಹೆಚ್ಚಿದ ರಾಜಕೀಯ ಅಂತರ

ಪಾಟೀಲ–ನಾಡಗೌಡರ ನಡುವಿನ ವಾಕ್ಸಮರ ಕೇವಲ ಇಬ್ಬರು ನಾಯಕರ ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಸೀಮಿತವಾಗದೆ,...

ವಿಜಯಪುರ | ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟಿದ್ದರೆ ಸೆ.23ರೊಳಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ–2026(ಎಸ್‌ಐಆರ್) ಹಿನ್ನೆಲೆಯಲ್ಲಿ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ...

ವಿಜಯಪುರ | ಸೆ. 26, 27ರಂದು ರಾಜ್ಯಮಟ್ಟದ ಸೂರ್ಯ ನಮಸ್ಕಾರ ಕ್ರೀಡಾಕೂಟ

ನಿವೃತ್ತ ಶಿಕ್ಷಕ ದಿ.ದ್ಯಾಮನಗೌಡ ಅ.ಪಾಟೀಲ, ಉತ್ನಾಳ ಸ್ಮರಣಾರ್ಥ 2ನೇ ರಾಜ್ಯಮಟ್ಟದ ಸೂರ್ಯ...