ಭಾರತ ಜನಗಣತಿ-2027ರ ಕಾರ್ಯಕ್ಕೆ ನಿಯೋಜಿಸುವ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿದ ಬಳಿಕವೇ ನಿಯೋಜಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅಧಿಕಾರಿಗಳಿಗೆ ಸೂಚಿಸಿದರು. ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾರತ ಜನಗಣತಿ 2027ರ ಜನಗಣತಿ ಕುರಿತು ಪೂರ್ವಭಾವಿ ಸಿದ್ಧತೆ ಹಾಗೂ ತರಬೇತುದಾರರೊಂದಿಗೆ ವಿಡಿಯೋ ಸಂವಾದ ಮೂಲಕ ಮಾತನಾಡಿದ ಅವರು, “ಗಣತಿ ಕಾರ್ಯಕ್ಕೆ ನಿಯೋಜಿಸಿದ ಸಿಬ್ಬಂದಿಗಳು ಕಾಲ ಕಾಲಕ್ಕೆ ನೀಡುವ ತರಬೇತಿಯ ಪ್ರಯೋಜನೆ ಪಡೆದುಕೊಂಡು ಗಣತಿ ಕಾರ್ಯವನ್ನು ಯಾವುದೇ ಲೋಪ ದೋಷಗಳಾಗದಂತೆ ಕಾರ್ಯ ನಿರ್ವಹಿಸಬೇಕು. ಮೊದಲನೆ ಹಂತವಾಗಿ ಏಪ್ರಿಲ್ 1ರಿಂದ 15ರ ವರೆಗೆ ಸ್ವಯಂ ಗಣತಿ ಕಾರ್ಯ ನಡೆಯಲಿದ್ದು, ಏಪ್ರಿಲ್ 16ರಿಂದ ಮೇ 15ರ ವರೆಗೆ ಮನೆ ಪಟ್ಟಿ ಕ್ಷೇತ್ರ ಕಾರ್ಯ ಕೈಗೊಳ್ಳಲಾಗುವುದು. ಫೆಬ್ರವರಿ 2027ರಿಂದ ಜನಗಣತಿ ಕಾರ್ಯ ನಡೆಯಲಿದೆ” ಎಂದರು.
ಜಿಲ್ಲೆಯ ಎಲ್ಲ ನಗರ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬಾಡಿಗೆಗೆ ಇರುವ ಕುಟುಂಬಗಳು ಒಳಗೊಂಡಂತೆ ಎಲ್ಲ ಮನೆಗಳು, ತೋಟದ ವಾಸ, ಸ್ಲಂ ಎಲ್ಲ ಕುಟುಂಬಗಳ ಮನೆ ಪಟ್ಟಿ ಕಾರ್ಯ ಕೈಗೊಳ್ಳಬೇಕು. ಜನಗಣತಿಯಿಂದ ಯಾವುದೇ ಕುಟುಂಬ ಕೈಬಿಟ್ಟು ಹೋಗದಂತೆ ಅತಿ ಎಚ್ಚರಿಕೆಯಿಂದ ಜನಗಣತಿ ಕಾರ್ಯ ನಿರ್ವಹಿಸಬೇಕು. 50 ಗಣತಿದಾರರ ಸಿಬ್ಬಂದಿಗಳಿಗೆ ಗುಂಪು ಮಾಡಿ ತರಬೇತಿ ನೀಡಬೇಕು. ತರಬೇತಿಗೆ ನಿಯೋಜಿಸುವ ಸಿಬ್ಬಂದಿಗಳಿಗೆ 2 ರಿಂದ 3 ಬಾರಿಗೆ ತರಬೇತಿ ನೀಡಿ ಪೂರ್ಣ ಪ್ರಮಾಣದ ತಿಳುವಳಿಕೆ ಹೊಂದುವಂತೆ ತರಬೇತಿ ನೀಡಬೇಕು. ಈ ಕಾರ್ಯದಲ್ಲಿ ಮುಖ್ಯವಾಗಿ ಒಂದು ವಾರ್ಡಿನಲ್ಲಿ ಮತ್ತೊಂದು ವಾರ್ಡ್ ವಿಲೀನವಾಗದಂತೆ ಬ್ಲಾಕುಗಳನ್ನು ರಚಿಸಿ ಅಂತಿಮಗೊಳಿಸಬೇಕು. ಒಂದು ವೇಳೆ ಅಂತಿಮಗೊಳಿಸದೆ ಮುಂದಿನ ಪ್ರಕ್ರಿಯೆಗೆ ಹೋಗಲು ಬರುವುದಿಲ್ಲ. ಆದುದರಿಂದ ಅಂತಿಮಗೊಳಿಸುವ ಮುಂಚೆ ಕೂಲಂಕಷವಾಗಿ ಪರಿಶೀಲಿಸಬೇಕು. ಜಿಲ್ಲೆಯ ಎಲ್ಲ ನಗರ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿಗಳಿಗೆ ವರ್ಕಿಂಗ್ ಮ್ಯಾಪ್ ಸರಬರಾಜು ಮಾಡಬೇಕು. ತಹಶೀಲ್ದಾರರು ಹಾಗೂ ಮುಖ್ಯಾಧಿಕಾರಿಗಳು ಶೀಘ್ರವಾಗಿ ತರಬೇತಿಯನ್ನು ನೀಡಬೇಕು. ಮನೆ ಪಟ್ಟಿ ಕ್ಷೇತ್ರ ಕಾರ್ಯ ಒಂದು ತಿಂಗಳ ಕಾಲ ನಡೆಯಲಿದ್ದು ಯಾರು ನಿರ್ಲಕ್ಷ್ಯ ಮಾಡದೆ ಈ ಕಾರ್ಯವನ್ನು ಪೂರ್ಣಗೊಳಿಸಿ” ಎಂದು ಕಟ್ಟು ನಿಟ್ಟಾಗಿ ಸೂಚಿಸಿದರು.
ಇದನ್ನೂ ಓದಿ: ಮಾನವನ ನಂಬರ್ 1 ಶತ್ರು ಸೊಳ್ಳೆ! ಈ ಪುಟ್ಟ ಅರಿಯನ್ನು ಗೆಲ್ಲುವ ಪರಿ ಗೊತ್ತೇ?
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ, ಇಂಡಿ ತಹಶೀಲ್ದಾರ ಬಿ.ಎಸ್ ಕಡಕಬಾವಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೀರಯ್ಯ ಸಾಲಿಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದೀನ ಸೌದಾಗರ, ಎಲ್ಲ ತಾಲೂಕಿನ ತಹಶೀಲ್ದಾರರು, ಮುಖ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.




