ವಿಜಯಪುರ | ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು: ಇಸ್ರೋ ವಿಜ್ಞಾನಿ ವಿಜಯಶ್ರೀ

Date:

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಸಾಧನೆಗಳಿಗೆ ಸಾಕಷ್ಟು ಅವಕಾಶಗಳಿದ್ದು, ಮಹಿಳೆಯರು ಇದರಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದು ಬೆಂಗಳೂರು ಇಸ್ರೋದ ಯು ಆರ್ ರಾವ್ ಸ್ಯಾಟಲೈಟ್ ಕೇಂದ್ರದ ವಿಜ್ಞಾನಿ ವಿಜಯಶ್ರೀ ಎಂ ಕೆ ಹೇಳಿದರು.

- Advertisement -

ವಿಜಯಪುರ ನಗರದ ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಅಪ್ಲೈಡ್ ಸೈನ್ಸ್ ಮತ್ತು ಟೆಕ್ನಾಲಜಿ ಶಾಲೆ, ಅಲೈಡ್ ಹೆಲ್ತ್ ಸೈನ್ಸ್ ಶಾಲೆ, ಸಂಶೋಧನ ಮತ್ತು ಅಭಿವೃದ್ಧಿ ಘಟಕದ ಸಹಯೋಗದಲ್ಲಿ ಆಯೋಜಿಸಲಾದ ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮದಲ್ಲಿ ಅವರು ಆನಲೈನ್ ಮೂಲಕ ಪಾಲ್ಗೊಂಡು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಬೆಳಗಾವಿಯ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯಯದ ಬೆಳಗಾವಿಯ ವೈಜ್ಞಾನಿಕ ಅಧಿಕಾರಿ ಡಾ. ಜಿ ಸಿ ಕಡಕೋಳ ಮಾತನಾಡಿ, ನ್ಯಾಯ ವಿಜ್ಞಾನ ಕ್ಷೇತ್ರದಲ್ಲಿ ಅಪರಾಧ ತನಿಖೆಯ ಸಂದರ್ಭದಲ್ಲಿ ಎದುರಾಗುವ ಸವಾಲುಗಳು ಹಾಗೂ ವೈಜ್ಞಾನಿಕ ಮನೋಭಾವದ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಭಾರತೀಯ ಮಹಿಳಾ ವಿಜ್ಞಾನಿಗಳ ಸಾಧನೆಗಳನ್ನು ಒಳಗೊಂಡ ವಿಡಿಯೋ ಪ್ರದರ್ಶನ ನಡೆಯಿತು. ನಂತರ ಸಂಶೋಧನ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಇ-ಪೋಸ್ಟರ್‌ಗಳ ಪ್ರದರ್ಶಿಸಲಾಯಿತು. ಇ-ಪೋಸ್ಟರ್ ಹಾಗೂ ಕ್ವಿಜ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಅಲೈಡ್ ಹೆಲ್ತ್ ಸೈನ್ನ್ ಮತ್ತು ಅಪ್ಲೈಡ್ ಹೆಲ್ತ್ ಸೈನ್ಸ್ ಮತ್ತು ಟೆಕ್ನಾಲಜಿ ಶಾಲೆಯ ಡೀನ್ ಡಾ. ಎಸ್ ವಿ ಪಾಟೀಲ, ಸಂಶೋಧನ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಡಾ. ಎಂ ಎಂ ಪಾಟೀಲ, ಸ್ನಾತಕೋತ್ತರ ವಿಭಾಗದ ಸಂಯೋಜಕಿ ಡಾ. ಸ್ಮಿತಾ ಬಗಲಿ, ಪದವಿ ವಿಭಾಗದ ಸಂಯೋಜಕಿ ಡಾ. ಜ್ಯೋತಿ ಪಾಟೀಲ, ಸಂಯೋಜಕ ಡಾ. ಜಿ ಎಸ್ ಕಡಕೋಳ, ಸಂಶೋಧನ ವಿದ್ಯಾರ್ಥಿಗಳು, ಸ್ನಾತಕೋತ್ತರ ಹಾಗೂ ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ವಿಜಯಪುರ | ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣಕ್ಕೆ ಅರ್ಜಿ ಆಹ್ವಾನ

ಕಾರ್ಡಿಯಾಕ್ ಕೇರ್ ಟೆಕ್ನಾಲಜಿಯ ಉಪನ್ಯಾಸಕಿ ಕವಿತಾ ಸ್ವಾಗತಿಸಿದರು. ಈ ಕಾರ್ಯಕ್ರಮವನ್ನು ಸಿಎಎಂಆರ್ ಸಂಸ್ಥೆಯ ಸಂಸ್ಥೆಯ ಸಂಶೋಧನ ಸಹಾಯಕಿ ತೃಪ್ತಿ ಕಬಾಡಿ ನಿರೂಪಿಸಿದರು. ಫೊರೆನ್ಸಿಕ್ ಸೈನ್ಸ್ ವಿಭಾಗದ ಉಪನ್ಯಾಸಕಿ ಗುಣಶ್ರೀ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು ಸಾಕಣೆದಾರರಿಗೂ ಸಂಕಷ್ಟ

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ...

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...