ವಿಜಯಪುರ | ಮಹಿಳೆಯರ ಅವಕಾಶ ವಂಚನೆ ಇಂದಿಗೂ ಮುಂದುವರೆದಿದೆ: ಪ್ರೊ. ಬಿ ಕೆ ರವಿ

Date:

ಮಹಿಳೆಯರು ಇಂದಿಗೂ ಎಲ್ಲಾ ಕ್ಷೇತ್ರದಲ್ಲಿಯೂ ಅವಕಾಶ ವಂಚಿತರಾಗಿದ್ದಾರೆ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿಕೆ ರವಿ ಹೇಳಿದರು.

- Advertisement -

ವಿಜಯಪುರ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಮಾಧ್ಯಮ ವಿಭಾಗಗಳ ಹೋಲಿಕೆ ಮಾಡಿದಾಗ ವಿಜಯಪುರ ಮಹಿಳಾ ವಿಶ್ವವಿದ್ಯಾಲಯದ ಮಾಧ್ಯಮ ವಿಭಾಗ ಉನ್ನತ ಸ್ಥಾನದಲ್ಲಿದೆ. ಗ್ರಾಮೀಣ ಮತ್ತು ಕನ್ನಡ ಮಧ್ಯಮದ ಮಹಿಳೆಯರಿಗೆ ಬೆಳೆಯಲು ಹೆಚ್ಚಿನ ಅವಕಾಶಗಳು ದೊರೆಯಬೇಕು. ದೇಶವ್ಯಾಪಿಯಾಗಿ ಬೆಳೆಯುತ್ತಿರುವ ಪತ್ರಿಕೋದ್ಯಮ ಕ್ಷೇತ್ರ ಅಂತರರಾಷ್ಟ್ರೀಯ ಮಟ್ಟದಲ್ಲೂ ಪ್ರಭಾವ ಬೀಳಲಿ ಎನ್ನುವುದು ಎಲ್ಲರ ಆಶಯ. ಮನೆಯ ಜವಾಬ್ದಾರಿಗಳ ನಡುವೆ ಶಿಕ್ಷಣ ಮುಂದುವರಿಸುವುದು ಗ್ರಾಮೀಣ ಮಹಿಳೆಯರಿಗೆ ಸವಾಲಾಗಿದ್ದು, ಅವರಿಗೆ ಹೆಚ್ಚಿನ ಸೌಲಭ್ಯ ಮತ್ತು ಬೆಂಬಲ ಅಗತ್ಯವಿದೆ” ಎಂದು ಹೇಳಿದರು.

“ಮಹಿಳೆಯರ ಪ್ರಶ್ನೆಗಳು, ಅವರ ಹೋರಾಟಗಳು ಮತ್ತು ಸಮಾಜದ ಬದಲಾವಣೆಯ ಅಗತ್ಯವನ್ನು ಸ್ಪಚ್ಟವಾಗಿ ಹೇಳಿರುವ ಅನುಪಮಾ ನಿರಂಜನ ಅವರ ಲೇಖನಗಳು ಮಹಿಳಾ ಜಾಗೃತಿಗೆ ಮಹತ್ವದ ಪ್ರೇರಣೆಯಾಗಿವೆ. ಮಹಿಳೆಯರು ವರದಿಗಾರಿಕೆಗೆ ಮಾತ್ರ ಸೀಮಿತವಾಗದೆ ಸಾಹಿತ್ಯ–ಸಾಂಸ್ಕೃತಿಕ ಕ್ಷೇತ್ರದಲ್ಲಿಯೂ ತಮ್ಮ ಸ್ಥಾನವನ್ನು ಬಲಪಡಿಸಬೇಕು ಅಷ್ಟೇ ಅಲ್ಲದೇ ಅವಕಾಶವಂಚಿತ ಮಹಿಳೆಯರ ಸ್ಥಿತಿ ಇನ್ನೂ ಮುಂದುವರಿದಿರುವುದು ವಿಷಾದನೀಯವಾಗಿದ್ದು, ಮಹಿಳಾ ಸಬಲೀಕರಣಕ್ಕೆ ಪತ್ರಿಕೋದ್ಯಮ ವಿಭಾಗಗಳು ಬಲವಾದ ವೇದಿಕೆಯಾಗಬೇಕು. ಮಾಧ್ಯಮದಲ್ಲಿ ಪರಿಣತಿ ಹೊಂದಿದವರು ಉತ್ತಮ ಪತ್ರಿಕೋದ್ಯಮ ಶಿಕ್ಷಕರಾಗಬಹುದು ಎಂದರು. ಕರ್ನಾಟಕ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ನೀಡುತ್ತಿರುವ ಗುಣಮಟ್ಟದ ಶಿಕ್ಷಣ, ಸಮೃದ್ಧ ಮತ್ತು ಸುಸಜ್ಜಿತ ಸ್ಟುಡಿಯೋ ವಾತಾವರಣ ಮತ್ತು ವಿದ್ಯಾರ್ಥಿ–ಕೇಂದ್ರೀಕೃತ ಕೆಲಸಗಳು ಪ್ರಶಂಸನೀಯವೆAದರು. ಗುರಿ ಸ್ಪಷ್ಟವಾಗಿದ್ದರೆ ಸಾಧನೆ ಸುಲಭವಾಗುತ್ತದೆ” ಎಂದು ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.

ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಮಾತನಾಡಿ, “ಬಿಕೆ ರವಿ ಸರ್ ಅವರ ಕಾರ್ಯಕ್ಷೇತ್ರದ ನಿಷ್ಠೆ ಮತ್ತು ಸಮಾಜಮುಖಿ ಸಂಶೋಧನೆಗಳು ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರೇರಣೆಯಾಗಿವೆ. ಮಾಧ್ಯಮ ನೈತಿಕತೆ, ಜವಾಬ್ದಾರಿ ಮತ್ತು ವೃತ್ತಿಪರ ಮೌಲ್ಯಗಳನ್ನು ಅವರು ಸ್ಪಷ್ಟವಾಗಿ ಹೆಸರು ಪಡಿಸಿದ್ದಾರೆ. ಅಷ್ಟೇ ಅಲ್ಲದೇ ಅವರ ಮಾರ್ಗದರ್ಶನದಲ್ಲಿ ಅನೇಕ ವಿದ್ಯಾರ್ಥಿಗಳು ಗುಣಮಟ್ಟದ ಪತ್ರಿಕೋದ್ಯಮದತ್ತ ಪ್ರೇರಿತರಾಗಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರವಾಗಿದೆ” ಎಂದರು.

ಇದನ್ನೂ ಓದಿ: ವಿಜಯಪುರ | ಕೊಳಚೆ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಗೌಡಪ್ಪ ಬಡಿಗೇರ ಮನವಿ

ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ತಹಮೀನಾ ಕೊಲಾರ, ಡಾ. ಸಂದೀಪ್, ಸಂಶೋದನಾ ವಿದ್ಯಾರ್ಥಿನಿಯರಾದ ಪವಿತ್ರಾ ಕಂಬಾರ, ಜಯಶ್ರೀ ತಳವಾರ ಮತ್ತು ವಿವಿಧ ವಿಭಾಗಗಳ ವಿದ್ಯಾರ್ಥಿನಿಯರು, ಪ್ರಾಧ್ಯಾಪಕರು ಹಾಗೂ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...

ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಸೃಷ್ಟಿಸಲು ಯತ್ನಾಳ್ ಯತ್ನ: ಎಂ.ಬಿ ಪಾಟೀಲ್ ಕಿಡಿ

ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್...

ವಿಜಯಪುರ | ಸರ್ಕಾರಿ ಆಸ್ಪತ್ರೆಗಳನ್ನು ದತ್ತು ನೀಡುವ ಕ್ರಮಕ್ಕೆ ಎಸ್‌ಯುಸಿಐ ಬಿ ಭಗವಾನ್ ರೆಡ್ಡಿ ಖಂಡನೆ

ರಾಜ್ಯದ ಸರ್ಕಾರಿ ತಾಲೂಕು ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳನ್ನು ಸರ್ಕಾರಿ ಅಥವಾ...

ವಿಜಯಪುರ ಡಿಸಿಸಿ ಬ್ಯಾಂಕ್‌ಗೆ ದಾಖಲೆಯ ಪ್ರಗತಿ: ₹29.16 ಕೋಟಿ ನಿವ್ವಳ ಲಾಭ

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(ಡಿಸಿಸಿ) ಬ್ಯಾಂಕ್‌ 2025-26ನೇ ಸಾಲಿನಲ್ಲಿ ದಾಖಲೆ ಪ್ರಮಾಣದ...