ವಿಜಯಪುರ | ವಿದ್ಯಾರ್ಥಿನಿಯರ ಸಾಧನೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಡಾ. ವಿಜಯಕುಮಾರ ಬಿ. ಅಜೂರ

Date:

ವಿದ್ಯಾರ್ಥಿನಿಯರ ಸಾಧನೆಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ವಿದ್ಯಾರ್ಥಿನಿಯರು ಮುಂದಿನ ದಿನಗಳಲ್ಲಿ ಸರ್ಕಾರಿ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಹುದ್ದೆಗಳನ್ನು ಅಲಂಕರಿಸಲು ಶಿಕ್ಷಕರ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ಅಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ವಿಜಯಕುಮಾರ ಬಿ. ಅಜೂರ ಹೇಳಿದರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಸೆ. 5ರಂದು ಸಿಂಡಿಕೇಟ್ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ವಿದ್ಯಾರ್ಥಿನಿಯರ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಜವಾಬ್ದಾರಿ ಮಹತ್ವದ್ದಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಮೌಲ್ಯಮಾಪನ ಕುಲಸಚಿವ ಪ್ರೊ. ಬಿ. ಎಲ್. ಲಕ್ಕಣ್ಣನವರ ಮಾತನಾಡಿ, “ಶಿಕ್ಷಕರು ದೇಶದ ಏಳಿಗೆಗಾಗಿ ಶ್ರಮಿಸುವುದರ ಜೊತೆಗೆ ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಬೇಕು” ಎಂದು ಹೇಳಿದರು.

ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಎಂ. ನಾಗರಾಜ ಮಾತನಾಡಿ, “ಶಿಕ್ಷಕರು ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳ ಕುರಿತು ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ಮೇಲಿನ ಗೌರವ ಹಾಗೂ ಪ್ರೀತಿಯ ಸಂಕೇತವಾಗಿ ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಸಮಾಜದ ಪರಿವರ್ತನೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಜ್ಞಾನವಂತರನ್ನು ರೂಪಿಸುವ ಮೂಲಕ ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ” ಎಂದು ಅಭಿಪ್ರಾಯಿಸಿದರು.

ಕುಲಪತಿಗಳ ಸಂದೇಶ: ವಿದ್ಯಾರ್ಥಿನಿಯರಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಶಿಕ್ಷಣದ ಜ್ಯೋತಿ ಬೆಳಗಿಸುವಲ್ಲಿ ಶಿಕ್ಷಕರು ವಹಿಸುತ್ತಿರುವ ಪಾತ್ರ ಮಹತ್ವದ್ದಾಗಿದೆ. ವಿಶ್ವವಿದ್ಯಾನಿಲಯದ ಶಿಕ್ಷಕರ ತಂಡವು ಬೋಧನಾ ಕಾರ್ಯದಲ್ಲಿ ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿರುವುದು ಸಂತಸದ ಸಂಗತಿ ಎಂದು ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಕುಲಪತಿಗಳ ಸಂದೇಶವನ್ನು ಪ್ರಸ್ತುತಪಡಿಸಲಾಯಿತು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಹಿನ್ನೆಲೆ ಏನು?

ಕೃಪಾ ಆಳ್ವ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ...

ವಿಮಾನ ಇಂಧನ ತೆರಿಗೆ ಇಳಿಸಿದ ತಮಿಳುನಾಡು ಸಿಎಂ ವಿಜಯ್‌

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ವಿಮಾನಯಾನ ಸಂಸ್ಥೆಗಳಿಗೆ...

ಪಂಜಾಬ್‌ ಹೊಗೆ ಹರಿಯಾಣ ಬಿಟ್ಟು ನೇರವಾಗಿ ದೆಹಲಿಗೆ ಬರಲು ಪೈಪ್‌ಲೈನ್ ಇದೆಯೇ? BJPಗೆ AAP ಲೇವಡಿ

ಪಂಜಾಬ್‌ನಲ್ಲಿ ಭತ್ತದ ಹುಲ್ಲನ್ನು ಸುಡಲಾಗುತ್ತಿದೆ. ಅದರ ಹೊಗೆ ದೆಹಲಿಯಲ್ಲಿ ವಾಯು ಮಾಲಿನ್ಯಕ್ಕೆ...