ವಿಜಯಪುರ | ಸಂವಿಧಾನ, ಪ್ರಜಾಪ್ರಭುತ್ವಕ್ಕೆ ದೇಶ ಒಗ್ಗೂಡಿಸುವ ಶಕ್ತಿಯಿದೆ: ಸುಪ್ರಿಯಾ ಬನಸೂಡೆ

Date:

ವೈವಿಧ್ಯತೆಯಲ್ಲಿ ಏಕತೆಯನ್ನು ರೂಪಿಸುವ ಶಕ್ತಿ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗಿದೆ. ಜಾತಿ, ಧರ್ಮ, ಸಂಸ್ಕೃತಿ, ಭಾಷೆ, ಉಡುಗೆ-ತೊಡುಗೆ ಸೇರಿದಂತೆ ಹಲವು ಭಿನ್ನತೆಗಳ ನಡುವೆಯೂ ದೇಶದ ಜನರನ್ನು ಒಂದೇ ಚೌಕಟ್ಟಿನಲ್ಲಿ ಒಗ್ಗೂಡಿಸುವ ಶಕ್ತಿ ಪ್ರಜಾಪ್ರಭುತ್ವಕ್ಕಿದೆ ಎಂದು ಸುಪ್ರಿಯಾ ಬನಸೂಡೆ ಹೇಳಿದರು.

- Advertisement -

ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ವಿಜಯಪುರ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ನಾಗಠಾಣ ಮತಕ್ಷೇತ್ರದ ಶಾಸಕ ವಿಠಲ ಕಟಕದೊಂಡ ಮಾತನಾಡಿ,ಪ್ರಜಾಪ್ರಭುತ್ವ ಎಂದರೆ ಐದು ವರ್ಷಕ್ಕೊಮ್ಮೆ ಮತ ಚಲಾಯಿಸುವುದಷ್ಟೇ ಅಲ್ಲ. ಅದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಹೌದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಯೂ ತನ್ನ ಹಕ್ಕುಗಳ ಜೊತೆಗೆ ಕರ್ತವ್ಯ ಮತ್ತು ಜವಾಬ್ದಾರಿಗಳ ಬಗ್ಗೆಯೂ ಅರಿವು ಹೊಂದಿರಬೇಕು. ಎಲ್ಲರ ಅಭಿಪ್ರಾಯಗಳನ್ನು ಕ್ರೋಢೀಕರಿಸಿ, ಒಮ್ಮತದ ನಿರ್ಣಯ ಕೈಗೊಳ್ಳುವ ವ್ಯವಸ್ಥೆಯೇ ನಿಜವಾದ ಪ್ರಜಾಪ್ರಭುತ್ವ ಎಂದು ಅವರು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಭಾರತದ ವೈವಿಧ್ಯತೆಯನ್ನು ಆಳವಾಗಿ ಅವಲೋಕಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶದ ಜನರನ್ನು ಒಗ್ಗೂಡಿಸುವಂತಹ ಸಂವಿಧಾನವನ್ನು ರೂಪಿಸಿದ್ದಾರೆ ಎಂದರು.

ಜಿಲ್ಲಾಧಿಕಾರಿ ಡಾ. ಆನಂದ ಕೆ. ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ ದೇಶದ ಆಡಳಿತದ ಎಲ್ಲ ಹಂತಗಳಲ್ಲೂ ವ್ಯಾಪಿಸಿದೆ. ಭಾರತದಲ್ಲಿ ಯಾವುದೂ ಸರ್ವೋಚ್ಚವಲ್ಲ; ಸಂವಿಧಾನವೇ ಸರ್ವೋಚ್ಚ ಎಂದು ಹೇಳಿದರು.

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮ ವಿಭಾಗದ ಪ್ರಾಧ್ಯಾಪಕ ಓಂಕಾರ ಕಾಕಡೆ ಮಾತನಾಡಿ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಕೋಟ್ಯಂತರ ಜನರನ್ನು ಒಂದೇ ಸೂರಿನಡಿ ಮುನ್ನಡೆಸುತ್ತಿರುವ ಭಾರತದ ಸಂವಿಧಾನದ ಕರ್ತೃ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಪ್ರಜಾಪ್ರಭುತ್ವ ದಿನದಂದು ಸ್ಮರಿಸುವುದು ಅಗತ್ಯ ಎಂದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಅವರು ಸಂವಿಧಾನದ ಪೀಠಿಕೆಯನ್ನು ವಾಚಿಸಿದರು.

ಕಾರ್ಯಕ್ರಮದಲ್ಲಿ ವಿಡಿಎ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೊಡೆ, ಜಿ.ಪಂ. ಸಿಇಒ ರಿಷಿ ಆನಂದ್, ವಿಜಯಪುರ ಎಸಿ ಜುಫಿಶನ್ ಹಕ್, ಡಿಎಚ್‌ಒ ಡಾ. ಮಲ್ಲನಗೌಡ ಬಿರಾದಾರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಜೆ. ಬಿರಾದಾರ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಡೈಟ್ ಪ್ರಾಚಾರ್ಯೆ ಎಸ್.ಎಸ್. ಮುಜಾವರ, ಪ.ಪೂ. ಶಿಕ್ಷಣ ಇಲಾಖೆ ಡಿಡಿಪಿಯು ಕೆ.ಎ. ಉಪ್ಪಾರ, ತಾ.ಪಂ. ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಬಿ.ಆರ್. ಬನಸೋಡೆ, ವಿದ್ಯಾವತಿ ಅಂಕಲಗಿ, ಅಡಿವೆಪ್ಪ ಸಾಲಗಲ್, ರಮೇಶ ಆಸಂಗಿ, ಅಶೋಕ ಚಲವಾದಿ, ಚನ್ನು ಕಟ್ಟಿಮನಿ, ಸಿದ್ದು ರಾಯಣ್ಣವರ, ವಿನಾಯಕ ಗುಣಸಾಗರ, ಮಲ್ಲು ಬಿದರಿ, ಭೀಮರಾಯ ಜಿಗಜಿಣಗಿ, ಅಭಿಷೇಕ ಚಕ್ರವರ್ತಿ ಹಾಗೂ ಗಿರೀಶ ಕುಲಕರ್ಣಿ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಸಾಲದ ಹೊರೆ : ಬಾವಿಗೆ ಹಾರಿ ರೈತ ಆತ್ಮಹತ್ಯೆ

ಸಾಲದ ಹೊರೆಯಿಂದ ರೈತರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಔರಾದ್...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ರಷ್ಯಾ ಇಂಧನ ಖರೀದಿಸಿದರೆ ಭಾರತಕ್ಕೆ ಶೇ 100ರಷ್ಟು ಸುಂಕ: ಮಸೂದೆಗೆ ಅಮೆರಿಕ ಸಂಸತ್ತು ಅಸ್ತು

ರಷ್ಯಾದಿಂದ ತೈಲ ಮತ್ತು ಅನಿಲ ಇಂಧನಗಳನ್ನು ಖರೀದಿಸುತ್ತಿರುವ ಭಾರತ ಹಾಗೂ ಇತರ...