ವಿಜಯಪುರ | ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾವಂತ ಮಹಿಳೆಯರ ಪಾತ್ರ ದೊಡ್ಡದು: ಕುಲಪತಿ ಉಜ್ವಲ ಚಕ್ರದೇವ್

Date:

ದೇಶ ʼವಿಕಸಿತ ಭಾರತ- 2047ʼ ಎಂಬ ದೃಷ್ಟಿಕೋನದೊಂದಿಗೆ ಮುಂದುವರಿಯುತ್ತಿರುವ ಈ ಸಂದರ್ಭದಲ್ಲಿ, ಶಿಕ್ಷಣ ಪಡೆದ ಮತ್ತು ಸಬಲಗೊಂಡ ಮಹಿಳೆಯರ ಪಾತ್ರ ರಾಷ್ಟ್ರ ನಿರ್ಮಾಣದಲ್ಲಿ ಬಹುಮುಖ್ಯವಾಗುತ್ತದೆ. ಶಿಕ್ಷಣ ಪಡೆದ ಮಹಿಳೆಯರು, ಆರ್ಥಿಕವಾಗಿ ಸ್ವಾವಲಂಬಿ ಮಹಿಳೆಯರಾಗುತ್ತಾರೆ. ಎಲ್ಲ ಕ್ಷೇತ್ರಗಳಲ್ಲಿ ಮಹಿಳಾ ನಾಯಕತ್ವಕ್ಕೆ ಪ್ರಾಧಾನ್ಯತೆ ದೊರೆಯಬೇಕು. ʼಮಹಿಳೆಯರ ಅಭಿವೃದ್ಧಿಯಾದರೆ ರಾಷ್ಟ್ರ ಅಭಿವೃದ್ಧಿಯಾಗಲು ಸಾಧ್ಯʼ ಎಂದು ಮುಂಬೈನ ಎಸ್‌ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಉಜ್ವಲ ಚಕ್ರದೇವ್ ಅಭಿಪ್ರಾಯಪಟ್ಟರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 17ನೇ ಘಟಿಕೋತ್ಸವದಲ್ಲಿ ಘಟಿಕೋತ್ಸವ ಭಾಷಣ ಮಾಡಿದ ಅವರು “ಕೃತಕ ಬುದ್ಧಿಮತ್ತೆಯಿಂದ ರೂಪುಗೊಳ್ಳುತ್ತಿರುವ ಯುಗದಲ್ಲಿ ನಾವು ಬದುಕುತ್ತಿದ್ದೇವೆ. ಉದ್ಯಮಗಳನ್ನು ಪರಿವರ್ತಿಸುತ್ತಿದ್ದು, ಉದ್ಯೋಗಗಳನ್ನು ಮರು ಪರಿಭಾಷಿಸುತ್ತಿದೆ. ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿದೆ. ತಂತ್ರಜ್ಞಾನ ಮುಂದುವರಿದರೂ, ಮಾನವೀಯ ಮೌಲ್ಯಗಳು, ನೈತಿಕ ಚಿಂತನೆ, ಸೃಜನಶೀಲತೆ ಮತ್ತು ಸಹಾನುಭೂತಿ ಮುಂತಾದ ಮೌಲ್ಯಗಳು ಸದಾ ಸ್ಥಿರವಾಗಿರುತ್ತವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

“ತಂತ್ರಜ್ಞಾನ ದಕ್ಷತೆಯನ್ನು ಮಾನವೀಯ ಸಂವೇದನೆಯೊಂದಿಗೆ ಸಂಯೋಜಿಸಬಲ್ಲವರಿಗೆ ಭವಿಷ್ಯವಿದೆ. ಕೌಶಲ್ಯಗಳು, ಉದ್ಯೋಗಾರ್ಹತೆ ಮತ್ತು ಜೀವನಪೂರ್ತಿ ಕಲಿಕೆ ಇಂದಿನ ಯಶಸ್ಸಿನ ಮೂಲ ಅಂಶಗಳಾಗಿವೆ. ಇಂದಿನ ಯಶಸ್ಸು ಪದವಿಗಳ ಮೂಲಕ ಮಾತ್ರ ನಿರ್ಧಾರವಾಗುವುದಿಲ್ಲ; ಅದು ಕೌಶಲ್ಯ ಮತ್ತು ಹೊಂದಾಣಿಕೆಯ ಮೇಲೆ ಅವಲಂಬಿತವಾಗಿದೆ” ಎಂದು ಅಭಿಪ್ರಾಯಪಟ್ಟರು.

“ಮುಂಬೈನ ಎಸ್‌ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯ ಮತ್ತು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಗಳಂತಹ ಸಂಸ್ಥೆಗಳು ಸಮಾನ ಉದ್ದೇಶ ಹೊಂದಿವೆ. ಶಿಕ್ಷಣದ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುವುದು ಹಾಗೂ ಅವರನ್ನು ನಾಯಕಿಯರಾಗಿ, ಬದಲಾವಣೆಯ ಸಾರಥಿಗಳಾಗಿ ರೂಪಿಸುವುದು ಈ ಎರಡೂ ವಿಶ್ವವಿದ್ಯಾನಿಲಯಗಳ ಪ್ರಮುಖ ಉದ್ದೇಶವಾಗಿದೆ” ಎಂದು ಹೇಳಿದರು.

“ಪದವೀಧರರಾಗಿ ಹೊರಬರುತ್ತಿರುವ ನಿಮಗೆ ಜ್ಞಾಪಕದಲ್ಲಿರಲಿ- ಕಲಿಕೆ ಇಲ್ಲಿಗೆ ಅಂತ್ಯಗೊಳ್ಳುವುದಿಲ್ಲ. ಇದು ಜೀವನ ಪೂರ್ತಿ ನಡೆಯುವ ಪ್ರಯಾಣ. ಮುಂದಿನ ದಿನಗಳಲ್ಲಿ ನೀವು ವೃತ್ತಿಪರ, ವೈಯಕ್ತಿಕ ಮತ್ತು ಸಾಮಾಜಿಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಆದರೆ ʼಸವಾಲುಗಳು ಅಡ್ಡಿಗಳಲ್ಲ; ನಿಮ್ಮನ್ನು ಇನ್ನಷ್ಟು ಬಲಿಷ್ಠರನ್ನಾಗಿಸುವ ಅವಕಾಶಗಳುʼ. ನಿಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಡಿ. ದೃಢವಾಗಿರಿ. ನಿಮ್ಮ ಸಾಮರ್ಥ್ಯವನ್ನು ಎಂದಿಗೂ ಅನುಮಾನಿಸಬೇಡಿ” ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

“ಮಹಿಳಾ ಸಬಲೀಕರಣವೆಂದರೆ ಶಿಕ್ಷಣ ಅಥವಾ ಉದ್ಯೋಗ ಮಾತ್ರವಲ್ಲ. ಅದು ಆತ್ಮವಿಶ್ವಾಸ, ಸ್ವಾತಂತ್ರ‍್ಯ ಮತ್ತು ನಿರ್ಧಾರಗಳನ್ನು ತೆಗೆದುಕೊಂಡು ಅವುಗಳೊಂದಿಗೆ ನಿಂತುಕೊಳ್ಳುವ ಸಾಮರ್ಥ್ಯ. ವಿದ್ಯಾವಂತ ಮಹಿಳೆಯರಾಗಿ ನೀವು ಕುಟುಂಬ, ಸಮುದಾಯ ಮತ್ತು ಸಮಾಜದ ಮೇಲೆ ಮಹತ್ವದ ಪ್ರಭಾವ ಬೀರುವ ಶಕ್ತಿಯನ್ನು ಹೊಂದಿದ್ದೀರಿ. ನೀವು ವಿಶ್ವದತ್ತ ಹೆಜ್ಜೆ ಇಡುವಾಗ ಕಲಿಕೆಯನ್ನು ಎಂದಿಗೂ ನಿಲ್ಲಿಸಬೇಡಿ, ದೊಡ್ಡ ಕನಸು ಕಾಣಿರಿ. ಆದರೆ ವಾಸ್ತವಿಕ ಚಿಂತನೆಗಳನ್ನು ಒಳಗೊಳ್ಳಿ. ನೀವು ಮಾಡುವ ಪ್ರತಿಯೊಂದು ಕಾರ್ಯದಲ್ಲಿ ಪ್ರಾಮಾಣಿಕತೆಯನ್ನು ಕಾಪಾಡಿಕೊಳ್ಳಿ. ಒಡನಾಡಿ ಮಹಿಳೆಯರನ್ನು ಬೆಂಬಲಿಸಿ ಮತ್ತು ಉತ್ತೇಜಿಸಿ. ನಿಮ್ಮ ಬೇರುಗಳು ಮತ್ತು ಮೌಲ್ಯಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ. ನಿಮ್ಮ ಕುಟುಂಬಕ್ಕೆ ಗೌರವ ನೀಡಿ” ಎಂದು ಉಜ್ವಲಾ ಚಕ್ರದೇವ್ ಸಲಹೆ ನೀಡಿದರು.

ಇದನ್ನೂ ಓದಿ>ವಿಜಯಪುರ | ಓದುವುದರ ಜತೆಗೆ ಸಂಪಾದನೆ: ಮಹಿಳಾ ವಿವಿಯ ವಿನೂತನ ಯೋಜನೆ

“ನೀವು ಈ ವಿಶ್ವವಿದ್ಯಾನಿಲಯವನ್ನು ಬಿಟ್ಟು ಹೋಗುವಾಗ, ಅಕ್ಕಮಹಾದೇವಿಯವರ ʼಧೈರ್ಯ, ಜ್ಞಾನ ಮತ್ತು ನಿರ್ಭಯ ಸ್ವತಂತ್ರ‍್ಯ ಆತ್ಮವನ್ನು ನಿಮ್ಮೊಂದಿಗೆ ಕೊಂಡೊಯ್ಯಿರಿʼ. ಭವಿಷ್ಯವನ್ನು ರೂಪಿಸುವುದು ನಿಮ್ಮ ಕೈಯಲ್ಲಿದೆ. ಆತ್ಮವಿಶ್ವಾಸದೊಂದಿಗೆ ಮುಂದುವರಿಯಿರಿ. ಉತ್ತಮ ಸಮಾಜ ಮತ್ತು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ನಿಮ್ಮ ಕೊಡುಗೆಯನ್ನು ನೀಡಿ” ಎಂದು ಕರೆ ನೀಡಿದರು.

ವೇದಿಕೆಯ ಮೇಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಗೌರವ ಡಾಕ್ಟರೇಟ್ ಪದವಿಗೆ ಭಾಜನರಾದ ಪಾರ್ವತೆವ್ವ ಸಿದ್ದಪ್ಪ ಹೊಂಗಲ್, ಡಾ.ಸಂಗೀತಾ ಎನ್ ಕಟ್ಟಿಮನಿ ಮತ್ತು ಆಶಾದೇವಿ ಜಗದೀಶ ಗುಡಗುಂಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ ಎಲ್ ಲಕ್ಕಣ್ಣವರ ಸಿಂಡಿಕೇಟ್, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ: ಪ್ರೇಮ ವಿವಾಹದ ದ್ವೇಷಕ್ಕೆ ಯುವಕನ ಕುಟುಂಬದ ಮೇಲೆ ಮಾರಣಾಂತಿಕ ದಾಳಿ

ಪ್ರೀತಿಸಿ ಮದುವೆಯಾಗಿದ್ದ ಕಾರಣಕ್ಕೆ ಯುವಕನ ಕುಟುಂಬದ ಮೇಲೆ ಯುವತಿಯ ಕಡೆಯವರು ಮಾರಕಾಸ್ತ್ರಗಳಿಂದ...

ದಾಖಲೆಯ ರನ್ ಬೆನ್ನತ್ತಿದ ಭಾರತಕ್ಕೆ ಜಯ: ನ್ಯೂಜಿಲೆಂಡ್ ವಿರುದ್ಧ ಮಿಂಚಿದ ಸಂಜು ಸ್ಯಾಮ್ಸನ್

ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು ಇಳಿಕೆ: ಯಾವೆಲ್ಲ ಔಷಧಿ ಅಗ್ಗ? ಪಡೆಯುವ ವಿಧಾನ ಹೇಗೆ?

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ...

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...