ವಿಜಯಪುರ | ಲಿಂಗಾಯತರಾಗುವ ಮುನ್ನ ದಲಿತರೇ ಆಗಿದ್ದರು: ಜಿ ಬಿ ಪಾಟೀಲ

Date:

ಲಿಂಗಾಯತ ಸಮುದಾಯಗಳೆಲ್ಲವೂ ಲಿಂಗಾಯತರಾಗುವ ಮುನ್ನ ದಲಿತರೇ ಆಗಿದ್ದರು. ಹೀಗಾಗಿ, ನಮ್ಮಲ್ಲಿಯೇ ಎಡಗೈ- ಬಲಗೈ ಎಂದು ವಿಭಾಗಿಸಿದರೆ ಯಾವುದೇ ಅರ್ಥ ಇಲ್ಲ ಎಂದು ಜಗತೇಕ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಜಿ ಬಿ ಪಾಟೀಲ ಹೇಳಿದರು.

- Advertisement -

ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಅಂಬೇಡ್ಕರ್ ಹಬ್ಬದ ಅಂಗವಾಗಿ ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ವಿವಿಧ ಪ್ರಗತಿಪರ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಸಾಂಸ್ಕೃತಿಕ ನಾಯಕ ಬಸವಣ್ಣ ಕುರಿತು ವೈಚಾರಿಕ ಚಿಂತನಗೋಷ್ಟಿಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

“ಚಲವಾದಿ ಮೊದಲಾದ ಸಮುದಾಯಗಳನ್ನು ಬಲಗೈ ಎಂದು, ಮಾದಿಗ ಸಮುದಾಯವನ್ನು ಎಡಗೈ ಎಂಬುದಾಗಿ ವಿಭಾಗಿಸಿರುವುದು ಸರಿಯಲ್ಲ. ದಲಿತ ಸಮುದಾಯದ ಜಿಲ್ಲಾಧಿಕಾರಿ ಅಥವಾ ರಾಜಕಾರಣಿಯ ಜತೆ ಕುಳಿತು ಸಹಭೋಜನ ಮಾಡಿದರೆ ಅದು, ಸಮಾನತೆ ಎನಿಸಿಕೊಳ್ಳುವುದಿಲ್ಲ. ಸಾಮಾನ್ಯ ದಲಿತ ವ್ಯಕ್ತಿ ಜತೆಗೆ ಸಹ ಭೋಜನ ಮಾಡಿದಾಗ ಮಾತ್ರ ಜಾತೀಯತೆಯ ಭೂತ ತೊಲಗುತ್ತದೆ” ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ? ತುಮಕೂರು | ಗೃಹ ಮಂತ್ರಿಗಳಿಗೆ ಕೆಟ್ಟ ಹೆಸರು ತರಲು ಕೆಆರ್ ಎಸ್ ಪಕ್ಷದ ಮುಖಂಡರು ಯತ್ನ : ಚಂದ್ರಶೇಖರ್‌ಗೌಡ

“ಎಷ್ಟೋ ವರ್ಷಗಳ ನಂತರ ಅಂಬೇಡ್ಕರ್ ಅವರ ಸಮಗ್ರ ಸಾಹಿತ್ಯ, ವಿಚಾರ ಮಂತನಗಳನ್ನು ಅಧ್ಯಯನ ಮಾಡುವ ಅವಕಾಶ ದೊರಕಿತು. ಜಗತ್ತಿನಲ್ಲಿಯೇ ಅವರು ಶ್ರೇಷ್ಠ ಸಂಶೋಧಕ, ಚಿಂತಕರಾಗಿದ್ದಾರೆ” ಎಂದರು.

ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣವರ, ವೈದ್ಯ ಬಾಬು ರಾಜೇಂದ್ರ ನಾಯಕ, ದಲಿತ ವಿದ್ಯಾರ್ಥಿ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ, ಬಾಲಾಜಿ ಕಾಂಬಳೆ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಿಜೆ ಇಂಡಿ, ಅಬ್ದುಲ್ ರಜಾಕ್ ಹೋರ್ತಿ, ಮೋಹನ್ ಕಟ್ಟಿಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...