ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

Date:

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸಲಾಗುತ್ತಿದೆ. ಹಬ್ಬದ ದಿನಗಳಲ್ಲಿ ಹೆಚ್ಚಾಗುವ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸುವ ಉದ್ದೇಶದಿಂದ ರೈಲ್ವೆ ಇಲಾಖೆ ಈ ವಿಶೇಷ ಸಂಚಾರ ವ್ಯವಸ್ಥೆ ಮಾಡಿದೆ.

ಅಕ್ಟೋಬರ್ 4ರಿಂದ 25ರವರೆಗೆ ವಿಶೇಷ ರೈಲು ಸಂಚಾರ ತಿರುಪತಿಯಿಂದ ವಿಜಯಪುರದತ್ತ ಸಂಚರಿಸುವ 07419 ಸಂಖ್ಯೆಯ ವಿಶೇಷ ರೈಲು ಅಕ್ಟೋಬರ್ 4, 11, 18 ಹಾಗೂ 25ರಂದು ಬೆಳಿಗ್ಗೆ 8.15ಕ್ಕೆ ತಿರುಪತಿಯಿಂದ ಹೊರಡಲಿದೆ. ಅದೇ ದಿನ ರಾತ್ರಿ 10.25ಕ್ಕೆ ವಿಜಯಪುರ ತಲುಪಲಿದೆ.

- Advertisement -

ವಿಜಯಪುರದಿಂದ ತಿರುಪತಿ ಕಡೆಗೆ ತೆರಳುವ 07420 ಸಂಖ್ಯೆಯ ವಿಶೇಷ ರೈಲು ಇದೇ ದಿನಗಳಲ್ಲಿ ರಾತ್ರಿ 11.35ಕ್ಕೆ ವಿಜಯಪುರದಿಂದ ಹೊರಟು, ಮರುದಿನ ಮಧ್ಯಾಹ್ನ 2.15ಕ್ಕೆ ತಿರುಪತಿ ತಲುಪಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ

ತಿರುಪತಿ–ವಿಜಯಪುರ ಹಾಗೂ ವಿಜಯಪುರ–ತಿರುಪತಿ ಎರಡೂ ಮಾರ್ಗಗಳಲ್ಲಿ ಈ ರೈಲು ರೇಣಿಗುಂಟ, ಕೋಡೂರು, ರಾಜಂಪೇಟೆ, ಕಡಪ, ಯರ್ರಗುಂಟ್ಲ, ತಾಡಿಪತ್ರಿ, ಗುತ್ತಿ, ಗುಂತಕಲ್, ಬಳ್ಳಾರಿ, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ, ಹೊಳೆಆಲೂರು, ಬಾದಾಮಿ, ಬಾಗಲಕೋಟೆ, ಆಲಮಟ್ಟಿ ಹಾಗೂ ಬಸವನಬಾಗೇವಾಡಿ ರೋಡ್‌ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ಪ್ರಯಾಣಿಕರ ವಿವಿಧ ವರ್ಗಗಳಿಗೆ ಅನುಕೂಲವಾಗುವಂತೆ ಒಟ್ಟು 11 ಬೋಗಿಗಳ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ 1 ಎಸಿ-2 ಟೈರ್, 2 ಎಸಿ-3 ಟೈರ್, 4 ಸ್ಲೀಪರ್ ಕ್ಲಾಸ್, 2 ಸಾಮಾನ್ಯ ಎರಡನೇ ದರ್ಜೆ ಬೋಗಿಗಳು ಹಾಗೂ 2 ಲಗೇಜ್/ಬ್ರೇಕ್ ವ್ಯಾನ್ ಮತ್ತು ಅಂಗವಿಕಲ ಪ್ರಯಾಣಿಕರಿಗೆ ಸೌಲಭ್ಯ ಹೊಂದಿರುವ ಬೋಗಿಗಳು ಇರಲಿವೆ.

ದಸರಾ ಹಬ್ಬದ ಸಂದರ್ಭದಲ್ಲಿ ತಿರುಪತಿ ಸೇರಿದಂತೆ ಮಾರ್ಗಮಧ್ಯದ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ತೆರಳುವ ಪ್ರಯಾಣಿಕರಿಗೆ ಈ ವಿಶೇಷ ರೈಲು ಸೇವೆ ಅನುಕೂಲವಾಗಲಿದೆ ಎಂದು ದಕ್ಷಿಣ ಕರಾವಳಿ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...