ವಿಜಯಪುರ | ಜ್ಞಾನ ಸಂಪಾದನೆ, ಇತಿಹಾಸ ಪ್ರಜ್ಞೆ ಇರಬೇಕೆಂದರೆ ಹೆಚ್ಚೆಚ್ಚು ಓದಬೇಕು: ಚಿಂತಕ ಡಾ. ಜೆ ಎಸ್ ಪಾಟೀಲ್

Date:

ಪ್ರಸ್ತುತ ಯುವಜನಾಂಗದಲ್ಲಿ ಓದುವ ಹವ್ಯಾಸ ಕಡಿಮೆಯಾಗಿರುವುದು ಅತ್ಯಂತ ವಿಷಾದದ ಸಂಗತಿಯಾಗಿದೆ. ಜ್ಞಾನ ಸಂಪಾದನೆ ಮತ್ತು ಇತಿಹಾಸ ಪ್ರಜ್ಞೆ ರೂಢಿಸಿಕೊಳ್ಳಬೇಕಾದರೆ ಯುವಜನರು ಹೆಚ್ಚೆಚ್ಚು ಓದಿನಲ್ಲಿ ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಈ ದಿನ.ಕಾಮ್‌ನಿಂದ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿರುವುದು ಪ್ರಶಂಸನೀಯ ಎಂದು ಪ್ರಗತಿಪರ ಚಿಂತಕ ಡಾ. ಜೆ ಎಸ್ ಪಾಟೀಲ್ ಅಭಿಪ್ರಾಯಪಟ್ಟರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜೈ ಹಿಂದ್, ಜೈ ಕರ್ನಾಟಕ ವಿಶೇಷ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಇತ್ತೀಚೆಗೆ ಮೊಬೈಲ್ ಬಳಕೆಯಿಂದ ಎಲ್ಲರಲ್ಲೂ ಓದುವ ಹವ್ಯಾಸ ಮರೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಈ ದಿನ.ಕಾಮ್‌ ಪ್ರಸ್ತುತ ಪೀಳಿಗೆಗಾಗಿ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿದೆ. ಎಲ್ಲರೂ ನೈಜ ಇತಿಹಾಸ ಅರಿಯುವ ಪ್ರಯತ್ನ ಮಾಡಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ಹಲವರು ತಮ್ಮ ಜೀವ ತ್ಯಾಗ ಮಾಡಿದ್ದಾರೆ. ಅಂಥವರನ್ನು ಗುರುತಿಸುವಲ್ಲಿ ನಾವು ವಿಫಲರಾಗುತ್ತಿದ್ದೇವೆ. ಕರ್ನಾಟಕ ಏಕೀಕರಣ ಸಂದರ್ಭದಲ್ಲಿ ಹಲವಾರು ಜನರು ಎಲೆಮರೆಯ ಕಾಯಿಯಂತೆ ಶ್ರಮಿಸಿದ್ದಾರೆ. ಏಕೀಕರಣಕ್ಕಾಗಿ ಶ್ರಮಿಸಿದವರನ್ನು ಇತಿಹಾಸದಿಂದ ಮರೆಮಾಚುವ ಕೆಲಸವಾಗುತ್ತಿದೆ. ವಿದ್ಯಾರ್ಥಿನಿಯರು ಇಂತಹ ವಿಷಯಗಳ ಬಗ್ಗೆ ಜ್ಞಾನ ಹೊಂದಬೇಕು. ಭಾರತದ ಇತಿಹಾಸವನ್ನು ಹೆಕ್ಕಿ ತೆಗೆದು, ನೈಜ ಇತಿಹಾಸ ಓದಬೇಕು” ಎಂದು ಸಲಹೆ ಮಾಡಿದರು.

ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಮಾತನಾಡಿ, “ವಿಭಿನ್ನ ವಿಚಾರಧಾರೆಗಳ ನಡುವೆ ಪ್ರಗತಿಶೀಲ ಚಿಂತನೆಗಳನ್ನು ಬಿತ್ತುವ ಕಾರ್ಯವನ್ನು ಈ ದಿನ.ಕಾಮ್ ಮಾಡುತ್ತಿದೆ. ಜನಪರ ಧ್ವನಿಯಾಗಿ ಪತ್ರಿಕೆ ಕಾರ್ಯನಿರ್ವಹಿಸುತ್ತಿದ್ದು, ತೊಂದರೆಗೆ ಈಡಾದವರ ಸಮಸ್ಯೆಗಳನ್ನು ಮುನ್ನೆಲೆಗೆ ತರುವಲ್ಲಿ ಶ್ರಮ ವಹಿಸುತ್ತಿದೆ. ನಿರ್ಲಕ್ಷ್ಯಕ್ಕೊಳಗಾದ ಇತಿಹಾಸವನ್ನು ಸಮಗ್ರವಾಗಿ ಕಟ್ಟಿಕೊಡುವ ಪ್ರಯತ್ನವನ್ನು ಮಾಡುತ್ತಿದೆ. ಇಂದಿನ ಯುವಜನತೆ ಮೊಬೈಲ್ ದಾಸರಾಗಬಾರದು. ಪುಸ್ತಕಗಳನ್ನು ಓದಬೇಕು. ಪ್ರಸ್ತುತ ಆಗುಹೋಗುಗಳ ಬಗ್ಗೆ ತಿಳಿದುಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

ಬೆಂಗಳೂರಿನ ಈ ದಿನ.ಕಾಮ್‌ನ ಸೆಂಟ್ರಲ್ ಕೋ-ಆರ್ಡಿನೇಟರ್ ಸಂತೋಷ್ ಎಚ್ ಎಮ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಈ ಸುದ್ದಿ ಓದಿದ್ದೀರಾ? ಕಟ್ಟಡ ಕಾರ್ಮಿಕರ‌ ಕಲ್ಯಾಣಕ್ಕಾಗಿ ಮೀಸಲಾದ ನಿಧಿ: ಇತರೆ ಕಾರ್ಯಗಳಿಗೆ ಬಳಸದಂತೆ ಸಿಐಟಿಯು ಆಗ್ರಹ

ಸಹಾಯಕ ಪ್ರಾಧ್ಯಾಪಕ ಡಾ. ಸಂದೀಪ್ ನಾಯಕ, ಸಂಶೋಧನಾ ವಿದ್ಯಾರ್ಥಿನಿಯರು, ಅತಿಥಿ ಉಪನ್ಯಾಸಕರು, ವಿವಿಧ ವಿಭಾಗಗಳ ವಿದ್ಯಾರ್ಥಿನಿಯರು, ಮತ್ತಿತರಿದ್ದರು.

ಈ ದಿನ.ಕಾಮ್‌ ಜಿಲ್ಲಾ ಕೋಆರ್ಡಿನೇಟರ್ ರಮೇಶ ಎಸ್ ಹೊಸಮನಿ, ಡಾ. ತಹಮೀನಾ ನಿಗಾರ ಸುಲ್ತಾನಾ ವಂದಿಸಿದರು, ಜಯಶ್ರೀ ತಳವಾರ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಬೋಧಕರ ಕೊರತೆ: ಪಿಎಚ್‌ಡಿ ವಿದ್ಯಾರ್ಥಿನಿಯರಿಂದಲೇ ಪಿಜಿ ಪಾಠ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ (ಪಿಜಿ) ತರಗತಿಗಳಿಗೆ...

ವಿಜಯಪುರ | ಸಮಾನತೆ ಮಾತು, ಘೋಷಣೆಗೆ ಸೀಮಿತವಾಗದಿರಲಿ: ಪ್ರೊ. ವಿಜಯಾ ಬಿ. ಕೋರಿಶೆಟ್ಟಿ

ಮಹಿಳೆಯರ ಧ್ವನಿಯನ್ನು ನಿರ್ಲಕ್ಷಿಸಿದಾಗ ಅದನ್ನು ಸಮಾಜದ ಗಮನಕ್ಕೆ ತರುವುದು ನಮ್ಮೆಲ್ಲರ ಕರ್ತವ್ಯ....

ವಿಜಯಪುರ | ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರ ನಡೆಸಿ: ಗ್ರಾಮ ಸ್ವರಾಜ್ಯ ಕರ್ನಾಟಕ ಆಗ್ರಹ

ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು...

ವಿಜಯಪುರ | ಕಬ್ಬಿಗೆ ರೂ. 5,500 ಘೋಷಣೆ ಆಗುವವರೆಗೂ ಸಕ್ಕರೆ ಕಾರ್ಖಾನೆ ಆರಂಭಿಸಬೇಡಿ: ರೈತ ಸಂಘ ಕರೆ

ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ ರೂ.5,500 ದರ ಘೋಷಿಸುವವರೆಗೆ ಹಾಗೂ...