ವಿಜಯಪುರ | ನಗರಾಭಿವೃದ್ಧಿ ಪ್ರಾಧಿಕಾರದಿಂದ ರೂ. 47.50 ಕೋಟಿ ವೆಚ್ಚದ ಕಾಮಗಾರಿ ಮಂಜೂರಾತಿ

Date:

ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಅಮೃತ ಯೋಜನೆ, ಜಿಐಎಸ್ ಆಧಾರಿತ ಮಹಾಯೋಜನೆ-2041 (ಪರಿಷ್ಕೃತ-3) ಹಾಗೂ ಭೂಬಳಕೆ ವಲಯ ನಿಯಮಾವಳಿಗಳನ್ನು ಅಂತಿಮಗೊಳಿಸಿ ಸರ್ಕಾರಕ್ಕೆ ಅನುಮೋದನೆ ಸಲ್ಲಿಸುವ ನಿರ್ಧಾರ ಕೈಗೊಳ್ಳಲಾಯಿತು.

- Advertisement -

ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ 2026-27ನೇ ಸಾಲಿನಲ್ಲಿ ಕೈಗೊಳ್ಳಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹47.50 ಕೋಟಿ ಮಂಜೂರಾತಿ ಮಾಡಲಾಗಿದೆ. ಮಹಾತ್ಮ ಗಾಂಧಿ ವೃತ್ತದ ಅಭಿವೃದ್ಧಿ, ನಗರದ ಕೆರೆಗಳ ಪುನಶ್ಚೇತನ, ಪ್ರಮುಖ ವೃತ್ತಗಳಲ್ಲಿ ಸಂಚಾರ ಸುವ್ಯವಸ್ಥೆಗಾಗಿ ಸಿಗ್ನಲ್ ದೀಪಗಳ ಅಳವಡಿಕೆ, ನಗರದ ವಿವಿಧ ಭಾಗಗಳಲ್ಲಿನ ಸ್ಮಶಾನಗಳ ಅಭಿವೃದ್ಧಿ, ಪ್ರಮುಖ ರಸ್ತೆಗಳಲ್ಲಿ ಯೋಜನಾಬದ್ಧವಾಗಿ ಬಸ್ ಶೆಲ್ಟರ್‌ಗಳ ನಿರ್ಮಾಣ, ಉದ್ಯಾನವನಗಳ ಅಭಿವೃದ್ಧಿ ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೊಳ್ಳಲು ಸಭೆ ಒಪ್ಪಿಗೆ ನೀಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಇದಲ್ಲದೆ, ಕೋಟೆ ಗೋಡೆಯ ಸುತ್ತಲಿನ ಕಂದಕದ ಅಭಿವೃದ್ಧಿಗೆ ₹5 ಕೋಟಿ ಮೀಸಲಿಡಲಾಗಿದ್ದು, ನಗರದ ಕೆಲವು ಪ್ರದೇಶಗಳಲ್ಲಿ ಮೇಲ್ಮಟ್ಟದ ಜಲಸಂಗ್ರಹಗಾರಗಳ ನಿರ್ಮಾಣ ಸೇರಿದಂತೆ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಭೆ ಸೂಚಿಸಿತು.

ಸಭೆಯಲ್ಲಿ ನಾಗರಿಕ ಸೌಲಭ್ಯಕ್ಕಾಗಿ ಮೀಸಲಿರುವ ನಿವೇಶನಗಳನ್ನು ಸರ್ಕಾರಿ ಹಾಗೂ ಅರಸರ್ಕಾರಿ ಇಲಾಖೆಗಳು ಮತ್ತು ವಿವಿಧ ಸಂಘ-ಸಂಸ್ಥೆಗಳಿಗೆ ನಿಯಮಾನುಸಾರ ಹಂಚಿಕೆ ಮಾಡಲು ತೀರ್ಮಾನಿಸಲಾಯಿತು.

ಈ ವೇಳೆ ಸೇವಾ ನಿವೃತ್ತಿ ಹೊಂದಿದ ಪ್ರಾಧಿಕಾರದ ಸಹಾಯಕ ನಿರ್ದೇಶಕ ಲಕ್ಷ್ಮಣ ಮೋರೆ ಹಾಗೂ ಎಸ್‌ಡಿಎ ಸಂಗಪ್ಪ ಯಾದವಾಡ ಅವರನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್ ಸದಸ್ಯರು ವಿಠ್ಠಲ ಕಟಕದೊಂಡ ಮತ್ತು ಸುನೀಲಗೌಡ ಪಾಟೀಲ, ಜಿಲ್ಲಾಧಿಕಾರಿ ಆನಂದ ಕೆ., ಪ್ರಾಧಿಕಾರದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಸದಸ್ಯರು ಸಲೀಂ ಫಿರಜದೆ, ಸಂತೋಷ ಪವಾರ, ಮಹದೇವ ರಾಥೋಡ, ಕಾಶಿಬಾಯಿ ಹಡಪದ, ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ ಹಾಗೂ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಿಕೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಜೆಫ್ರಿ ಎಪ್‌ಸ್ಟೀನ್-ಹರ್ದೀಪ್ ಪುರಿ ಭೇಟಿ: ಸಚಿವರ ಮೇಲಿನ ಆರೋಪಕ್ಕೆ ಪ್ರಧಾನಿ ಮೌನವೇಕೆ ಎಂದು ಪ್ರಶ್ನಿಸಿದ ಕಾಂಗ್ರೆಸ್

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಅಮೆರಿಕದ ಕುಖ್ಯಾತ ಅಪರಾಧಿ ಜೆಫ್ರಿ ಎಪ್‌ಸ್ಟೀನ್...

ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

​7 ದಿನಗಳ ಜೈಲುವಾಸ ಅಂತ್ಯ: ಕೊನೆಗೂ ಬಿಡುಗಡೆಯಾದ ಕಾಕ್ರೋಚ್ ಜನತಾ ಪಾರ್ಟಿ ನಾಯಕರು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಕಾಕ್ರೋಚ್...