ವಿಜಯಪುರ | SIR ವಿರುದ್ಧ ವಿವಿಧ ಸಂಘಟನೆಗಳ ಆಕ್ಷೇಪ: ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Date:

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ ಮರುಪರಿಶೀಲನೆ ನಡೆಸುವಂತೆ ಆಗ್ರಹಿಸಿ, ವಿಜಯಪುರದಲ್ಲಿ ವಿವಿಧ ಸಾಮಾಜಿಕ, ಪ್ರಗತಿಪರ ಹಾಗೂ ನಾಗರಿಕ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಮನವಿಯಲ್ಲಿ, “ಚುನಾವಣಾ ಆಯೋಗವು ಜಾರಿಗೊಳಿಸಿರುವ SIR ಪ್ರಕ್ರಿಯೆಯು ದೇಶದ ಕೋಟ್ಯಂತರ ಮತದಾರರ ಮತದಾನದ ಹಕ್ಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದ್ದು, ವಿಶೇಷವಾಗಿ ಬಡವರು, ಗ್ರಾಮೀಣ ಪ್ರದೇಶದ ಜನರು, ವಲಸೆ ಕಾರ್ಮಿಕರು, ಹಿರಿಯ ನಾಗರಿಕರು, ಮಹಿಳೆಯರು, ದಲಿತರು, ಆದಿವಾಸಿಗಳು ಹಾಗೂ ಅಲ್ಪಸಂಖ್ಯಾತ ಸಮುದಾಯಗಳಿಗೆ ತೊಂದರೆಯಾಗುವ ಆತಂಕವಿದೆ” ಎಂದು ಉಲ್ಲೇಖಿಸಲಾಗಿದೆ.

ಕೇವಲ 30 ದಿನಗಳೊಳಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ವಿಧಿಸಿರುವ ಷರತ್ತು ಸಾಮಾನ್ಯ ನಾಗರಿಕರಿಗೆ ಕಷ್ಟಕರವಾಗಿದ್ದು, ಅರ್ಹ ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ಕೈಬಿಡುವ ಅಪಾಯವಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯಧ್ಯಕ್ಷ ಶ್ರೀನಾಥ ಪೂಜಾರಿ, “ಮತದಾನ ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ಆಡಳಿತಾತ್ಮಕ ಪ್ರಕ್ರಿಯೆಗಳ ಹೆಸರಿನಲ್ಲಿ ಯಾರೊಬ್ಬರ ಮತದಾನದ ಹಕ್ಕು ಕಸಿದುಕೊಳ್ಳಬಾರದು. SIR ಪ್ರಕ್ರಿಯೆಯನ್ನು ಮರುಪರಿಶೀಲಿಸಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿದ ನಂತರವೇ ಮುಂದಿನ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಡಿಎಸ್ಎಸ್ ಜಿಲ್ಲಾ ಸಂಚಾಲಕ ಚನ್ನು ಕಟ್ಟಿಮನಿ ಮಾತನಾಡಿ, “ಪ್ರಜಾಪ್ರಭುತ್ವದಲ್ಲಿ ಮತದಾರರ ಹಕ್ಕು ಅತ್ಯಂತ ಮಹತ್ವದ್ದಾಗಿದ್ದು, ಬಡವರು ಹಾಗೂ ದಾಖಲೆ ಉಪಲಬ್ಧವಿರದ ನಾಗರಿಕರಿಗೆ ಅನ್ಯಾಯವಾಗದಂತೆ ಸರ್ಕಾರ ಮತ್ತು ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಸ್ಲಂ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಕ್ರಮ ಮಾಶಾಳಕರ ಮಾತನಾಡಿ, “ನಗರದ ಬಡವರು, ಸ್ಲಂ ನಿವಾಸಿಗಳು ಹಾಗೂ ದುರ್ಬಲ ವರ್ಗದ ಜನರಿಗೆ ಈ ಪ್ರಕ್ರಿಯೆಯಿಂದ ತೊಂದರೆಯಾಗುವ ಸಾಧ್ಯತೆ ಇರುವುದರಿಂದ SIR ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು” ಎಂದು ಆಗ್ರಹಿಸಿದರು.

ಮನವಿಯನ್ನು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಸ್ವೀಕರಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ರವಾನಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಯು. ಎಚ್. ಖದೀರ್, ಅನಿಲ್ ಹೊಸಮನಿ, ಫಯಾಜ್ ಕಲಾದಗಿ, ಸುರೇಶ್ ಬಿಜಾಪುರ, ಡಾ. ಗುರಿಕಾರ, ಆಮ್ ಆದ್ಮಿ ಪಕ್ಷದ ಜಿಲ್ಲಾ ಅಧ್ಯಕ್ಷ ಭೋಗೇಶ್ ಸೊಲ್ಲಾಪುರ, ವಿದ್ಯಾವತಿ ಅಂಕಲಗಿ, ರಾವುತ ತಳಕೆರಿ, “ಎದ್ದೇಳು ಕರ್ನಾಟಕ” ಸಂಘಟನೆಯ ಪದಾಧಿಕಾರಿಗಳು ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯಾ ಪ್ರಕರಣ: ಮಂಗಳೂರಿಗೆ ನೂತನ SIT ತಂಡ; ತನಿಖೆಗೆ ಸಿದ್ಧತೆ

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್...

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...