ವಿಜಯಪುರ | ಪ್ರಕೃತಿ ವಿಕೋಪ ಎದುರಿಸಲು ಜಿಲ್ಲಾಡಳಿತ ಸಜ್ಜು

Date:

ಮುಂಗಾರು ಹಿನ್ನೆಲೆ ವಿಜಯಪುರ ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದ್ದು, ಪ್ರಕೃತಿ ವಿಕೋಪ ಸಂಭವಿಸಿದ ವೇಳೆ ಜೀವ ಹಾನಿಯಾಗದಂತೆ ಮುಂಜಾಗ್ರತೆ ವಹಿಸುವುದು ಪ್ರತಿಯೊಬ್ಬ ಅಧಿಕಾರಿಯ ಮೊದಲ ಆದ್ಯತೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚನೆ ನೀಡಿದರು.

- Advertisement -

ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಶುಕ್ರವಾರ 2026-27 ನೇ ಸಾಲಿನ ಮುಂಗಾರು ಮಳೆ ಅವಧಿಯ ಪೂರ್ವಸಿದ್ಧತೆ ಕುರಿತ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವೀಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, “ತುರ್ತು ಪರಿಸ್ಥಿತಿಯ ನಿರ್ವಹಣೆಗಾಗಿ ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರಸ್ಥಾನದಲ್ಲೇ ಇರಬೇಕು” ಎಂದು ಆದೇಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದರೆ ತಹಶೀಲ್ದಾರರು ಸ್ಥಳದಲ್ಲಿರಬೇಕು. ತುರ್ತು ಸಂದರ್ಭದಲ್ಲಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ ಪರಿಹರಿಸಬೇಕು ಎಂದು ಸೂಚಿಸಿದರು.

“ಪ್ರತಿ ತಾಲ್ಲೂಕಿನಲ್ಲಿ ದಿನದ 24 ಗಂಟೆ ಸಹಾಯವಾಣಿ ಆರಂಭಿಸಬೇಕು. ಯಾವುದೇ ಘಟನೆ ಸಂಭವಿಸಿದ ತಕ್ಷಣ ಸ್ಪಂದಿಸಿ, ಸ್ಥಳಕ್ಕೆ ಧಾವಿಸಬೇಕು. ಪ್ರವಾಹ, ಕಲುಷಿತ ನೀರು, ಕೊಠಡಿ ಸ್ಥಳಾಂತರ ಇತ್ಯಾದಿ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಬೇಕು. ಕಂಟ್ರೋಲ್ ರೂಂ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕು. ಕಂಟ್ರೋಲ್ ರೂಂನಲ್ಲಿದ್ದವರು ಎಲ್ಲ ಇಲಾಖೆಯ ಸಂಪರ್ಕ ಸಂಖ್ಯೆ ಹೊಂದಿರಬೇಕು” ಎಂದು ಮಾರ್ಗಸೂಚಿ ನೀಡಿದರು.

“ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಜಿಲ್ಲೆಯ ಕೃಷ್ಣಾ, ಭೀಮಾ ಮತ್ತು ದೋಣಿ ನದಿಗಳಿಗೆ ಯಾವುದೇ ಸಂದರ್ಭದಲ್ಲಿ ಪ್ರವಾಹದ ಸಾಧ್ಯತೆಗಳಿವೆ. ಹಾಗಾಗಿ ನದಿ ಪಾತ್ರದಲ್ಲಿ ನಿರಂತರ ನಿಗಾ ಇರಿಸಬೇಕು. ಜಲಾಶಯಗಳಲ್ಲಿನ ನೀರಿನ ಲಭ್ಯತೆಯ ಮಾಹಿತಿಯನ್ನು ಪ್ರತಿದಿನ ಸಂಗ್ರಹಿಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಪ್ರಕೃತಿ ವಿಕೋಪದಿಂದ ಉಂಟಾಗುವ ಹಾನಿಗಳಿಗೆ ತಕ್ಷಣವೇ ಪರಿಹಾರ ವಿತರಿಸಲು ಕ್ರಮ ವಹಿಸಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...