ವಿಜಯಪುರ | ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆ; 186 ಅಧಿಕಾರಿಗಳಿಗೆ ದಂಡ!

Date:

ಮಾಹಿತಿ ಹಕ್ಕು ಕಾಯ್ದೆಯಡಿ ನಿಗದಿತ ಅವಧಿಯಲ್ಲಿ ಮಾಹಿತಿ ನೀಡದೆ ಕರ್ತವ್ಯ ಲೋಪ ಎಸಗಿದ ಬೆಳಗಾವಿ ವಿಭಾಗದ ವಿವಿಧ ಇಲಾಖೆಗಳ 186 ಅಧಿಕಾರಿಗಳಿಗೆ ದಂಡ ವಿಧಿಸಲಾಗಿದ್ದು, 130 ಮೇಲ್ಮನವಿದಾರರಿಗೆ ಪರಿಹಾರ ಒದಗಿಸುವಂತೆ ಆದೇಶಿಸಲಾಗಿದೆ ಎಂದು ರಾಜ್ಯ ಮಾಹಿತಿ ಆಯುಕ್ತ ಪ್ರಕಾಶ ನಾರಾಯಣ ಚನ್ನಾಳ ತಿಳಿಸಿದ್ದಾರೆ.

- Advertisement -

ರಾಜ್ಯ ಮಾಹಿತಿ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಒಟ್ಟು 8,075 ಪ್ರಕರಣಗಳನ್ನು ಕೈಗೆತ್ತಿಕೊಂಡಿದ್ದು, ಈ ಪೈಕಿ 4,042 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಆಯೋಗದ ವಿಚಾರಣೆಗೆ ಹಾಜರಾಗದ ಹಾಗೂ ಮಾಹಿತಿ ನೀಡುವಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ದಂಡದ ಜತೆಗೆ ಇಲಾಖಾ ವಿಚಾರಣೆಗೂ ಶಿಫಾರಸು ಮಾಡಲಾಗಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ಗ್ರಾಮೀಣ ಜನರ ಕುಡಿಯುವ ನೀರು, ರಸ್ತೆ, ವಿದ್ಯುತ್, ಸ್ವಚ್ಛತೆ ಹಾಗೂ ಆರೋಗ್ಯ ಸೇರಿದಂತೆ ಮೂಲಸೌಕರ್ಯ ಸಮಸ್ಯೆಗಳಿಗೆ ಸಂಬಂಧಿಸಿದ ಅರ್ಜಿಗಳಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ರೈತರು ಹಾಗೂ ಯೋಧರ ಕುಟುಂಬದವರ ಅರ್ಜಿಗಳನ್ನೂ ಗಂಭೀರವಾಗಿ ಪರಿಗಣಿಸಲಾಗುತ್ತಿದೆ.

ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಅಧಿಕಾರಿಗಳಲ್ಲಿ ಹೊಣೆಗಾರಿಕೆ ಮೂಡಿಸುವ ಪ್ರಜಾಪ್ರಭುತ್ವದ ಪ್ರಬಲ ಅಸ್ತ್ರವಾಗಿದೆ. ನಿಗದಿತ ಕಾಲಮಿತಿಯಲ್ಲಿ ಮಾಹಿತಿ ನೀಡುವುದು ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಕರ್ತವ್ಯ. ನಿರ್ಲಕ್ಷ್ಯ ತೋರಿದರೆ ದಂಡ ಹಾಗೂ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂತರಂಗದ ಧ್ವನಿ ‘ಬಿಲಾಂಗಿಂಗ್’- ರಾಜೀವ್ ಹತ್ಯೆಯ ನಂತರದ ಧರ್ಮಸಂಕಟ ಬಿಚ್ಚಿಟ್ಟ ಸೋನಿಯಾ ಗಾಂಧಿ

ವರ್ಷಗಳಿಂದ ಕುತೂಹಲ ಕೆರಳಿಸಿದ್ದ, ಹಲವು ಬಾರಿ ಮುಂದೂಡಲ್ಪಟ್ಟಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ ಅವಕಾಶ ನೀಡಬಾರದು

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ...

ಬಾಗಲಕೋಟೆ | ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆ: ದಶಕಗಳ ಹೋರಾಟಕ್ಕೆ ಜಯ

ಕರ್ನಾಟಕ ರಾಜ್ಯ ಸರ್ಕಾರ ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ರಾಜ್ಯದ ಬೌದ್ಧ...

2ನೇ ಏಕದಿನ: ಡಿಎಲ್ಎಸ್ ನಿಯಮದಡಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 4 ರನ್‌ಗಳ ಜಯ

ಮಳೆಯಿಂದಾಗಿ ಅಡಚಣೆ ಎದುರಾದ ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ...