ಕರ್ನಾಟಕ ಲೋಕಾಯುಕ್ತದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ನವೆಂಬರ್ 19ರಿಂದ 21ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ನವೆಂಬರ್ 19 ಮತ್ತು 20ರಂದು ಜಿಲ್ಲಾ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಲೋಕಾಯುಕ್ತದಲ್ಲಿ ಈಗಾಗಲೇ ದಾಖಲಾಗಿರುವ ಬಾಕಿ ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ.
ಸಂಬಂಧಪಟ್ಟ ದೂರುದಾರರು ಹಾಗೂ ಎದುರುದಾರರು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಬೇಕು. ಹೊಸ ದೂರುಗಳನ್ನು ಸ್ವೀಕರಿಸುವುದಿಲ್ಲ ಎಂದು ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಮಹಾನಿಂಗರಾಯ ನಂದಗಾಂವಿ ತಿಳಿಸಿದ್ದಾರೆ.



