ವಿಜಯಪುರ | ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 10.08 ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

Date:

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಚುರುಕುಗೊಂಡಿದ್ದು, ಮನೆ ಮನೆ ಗಣತಿ ಹಾಗೂ ಡಿಜಿಟಲೀಕರಣ ಪ್ರಕ್ರಿಯೆ ವೇಗವಾಗಿ ಸಾಗುತ್ತಿದೆ. ಜಿಲ್ಲಾದ್ಯಂತ ಒಟ್ಟು 19,39,677 ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಇದುವರೆಗೆ 10,08,899 ಗಣತಿ ನಮೂನೆಗಳನ್ನು ಯಶಸ್ವಿಯಾಗಿ ಡಿಜಿಟಲೀಕರಣಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ್ ಕೆ ತಿಳಿಸಿದ್ದಾರೆ.

- Advertisement -

ಜುಲೈ 16ರ ವೇಳೆಗೆ ವಿಜಯಪುರ ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಒಟ್ಟು 19,82,114 ಮತದಾರರು ದಾಖಲಾಗಿದ್ದು, ಪರಿಷ್ಕರಣೆ ಕಾರ್ಯಕ್ಕಾಗಿ ಎಲ್ಲಾ ಗಣತಿ ನಮೂನೆಗಳನ್ನು ಸಂಬಂಧಿಸಿದ ಬಿ.ಎಲ್.ಓಗಳಿಗೆ ವಿತರಿಸಲಾಗಿದೆ. ಮನೆ ಮನೆ ಗಣತಿ ಹಾಗೂ ಡಿಜಿಟಲೀಕರಣ ಕಾರ್ಯವು ಜೂನ್ 30ರಿಂದ ಆರಂಭಗೊಂಡಿದ್ದು, ಆಗಸ್ಟ್ 8ರವರೆಗೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಡಿಜಿಟಲೀಕರಣ ಪ್ರಕ್ರಿಯೆಯಲ್ಲಿ ಇದುವರೆಗೆ 3,321 ಮತದಾರರು ಆನ್‌ಲೈನ್ ಮೂಲಕ ಗಣತಿ ನಮೂನೆಗಳನ್ನು ಸಲ್ಲಿಸಿದ್ದಾರೆ.

ಕ್ಷೇತ್ರ ಭೇಟಿಯ ವೇಳೆ 221 ಮತದಾರರು ಗೈರುಹಾಜರಾಗಿರುವುದು ಕಂಡುಬಂದಿದ್ದು, 8,698 ಮಂದಿ ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಗೊಂಡಿರುವುದು ಗುರುತಿಸಲಾಗಿದೆ. ಅಲ್ಲದೆ 9,969 ಮೃತ ಮತದಾರರು, ಈಗಾಗಲೇ ನೋಂದಾಯಿಸಿಕೊಂಡಿರುವ 3,176 ಮತದಾರರು ಹಾಗೂ ಇತರೆ 150 ಪ್ರಕರಣಗಳು ದಾಖಲಾಗಿವೆ.

ಜಿಲ್ಲೆಯ ಎಲ್ಲ ಅರ್ಹ ಮತದಾರರ ವಿವರಗಳನ್ನು ನಿಖರವಾಗಿ ಪರಿಷ್ಕರಿಸುವ ಉದ್ದೇಶದಿಂದ ಬಿ.ಎಲ್.ಓಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಸಾರ್ವಜನಿಕರು ಅಗತ್ಯ ದಾಖಲೆಗಳು ಹಾಗೂ ಮಾಹಿತಿ ನೀಡಿ ಚುನಾವಣಾ ಸಿಬ್ಬಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ್ ಕೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...