ವಿಜಯಪುರ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವಾರ್ಡ್ ಮಟ್ಟದ ಸಮಿತಿ ರಚನೆ

Date:

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಮುಂದುವರಿದಿದ್ದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವ ಪ್ರಕ್ರಿಯೆಯನ್ನು ಗ್ರಾಮೀಣ ಮಟ್ಟದಲ್ಲೂ ಪರಿಣಾಮಕಾರಿಗೊಳಿಸಲು ವಾರ್ಡ್ ಮಟ್ಟದ ಸಮಿತಿಗಳನ್ನು ರಚಿಸಲು ನಿರ್ಧರಿಸಲಾಗಿದೆ. ವಿಜಯಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಸ್.ಆರ್ ಪಾಟೀಲ ಬ್ಯಾಡಗಿ ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಅವರು ಮಾತನಾಡಿ, “ಯೋಜನೆ ಕಾಗದದಲ್ಲಷ್ಟೇ ಉಳಿಯಬಾರದು; ಅರ್ಹರ ಮನೆ ಬಾಗಿಲಿಗೆ ತಲುಪಬೇಕು’ ಎಂಬ ಆಶಯದೊಂದಿಗೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ವಿಶೇಷವಾಗಿ ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳ ಅರ್ಹ ಫಲಾನುಭವಿಗಳು ಯಾವುದೇ ಕಾರಣಕ್ಕೂ ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು” ಎಂದು ಹೇಳಿದರು.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ಮಹಿಳೆಯರು 22.47 ಕೋಟಿಗೂ ಅಧಿಕ ಬಾರಿ ಪ್ರಯಾಣ ಮಾಡಿದ್ದು, ಇದಕ್ಕಾಗಿ ಸರ್ಕಾರ ₹772.07 ಕೋಟಿ ವೆಚ್ಚ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳ ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಸ್ವಚ್ಛತೆ ಹಾಗೂ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡಲಾಗುವ ಉಚಿತ ಬಸ್ ಪಾಸ್‌ಗಳನ್ನು ಯಾವುದೇ ತೊಂದರೆಯಾಗದಂತೆ ವಿತರಿಸಬೇಕು ಎಂದು ಪಾಟೀಲ ಸೂಚಿಸಿದರು.

ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 4,50,372 ಗ್ರಾಹಕರು ನೋಂದಣಿಯಾಗಿದ್ದು, ಇದಕ್ಕಾಗಿ ₹667.03 ಕೋಟಿ ವಿನಿಯೋಗಿಸಲಾಗಿದೆ. ಪ್ರತಿ ತಿಂಗಳು ಯೋಜನೆಯಡಿ ಸುಮಾರು ₹20 ಕೋಟಿ ವೆಚ್ಚವಾಗುತ್ತಿದೆ ಎಂದು ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಎಸ್.ಆರ್. ಪಾಟೀಲ, ಯೋಜನೆಯಿಂದ ಯಾವುದೇ ಬಡ ಕುಟುಂಬ ಹೊರಗುಳಿಯದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಗೃಹಲಕ್ಷ್ಮಿಗೆ ಅತಿ ಹೆಚ್ಚು ವೆಚ್ಚ

ಮಹಿಳೆಯರ ಖಾತೆಗೆ ಮಾಸಿಕ ಧನಸಹಾಯ ನೀಡುವ ಗೃಹಲಕ್ಷ್ಮಿ ಯೋಜನೆ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಮೊತ್ತದ ಸೌಲಭ್ಯ ಒದಗಿಸಿರುವ ಯೋಜನೆಯಾಗಿದೆ. ಜಿಲ್ಲೆಯ 5,03,829 ಮಹಿಳಾ ಫಲಾನುಭವಿಗಳಿಗೆ ₹3,092.06 ಕೋಟಿ ತಲುಪಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಅನ್ನಭಾಗ್ಯ ಯೋಜನೆಯಡಿ 16.55 ಲಕ್ಷಕ್ಕೂ ಅಧಿಕ ಫಲಾನುಭವಿಗಳು ಸೌಲಭ್ಯ ಪಡೆಯುತ್ತಿದ್ದು, ಒಟ್ಟು ₹457.03 ಕೋಟಿ ಬಿಡುಗಡೆಯಾಗಿದೆ.


ನಿರುದ್ಯೋಗಿ ಯುವಜನರಿಗೆ ಆರ್ಥಿಕ ನೆರವು ನೀಡುವ ಯುವ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 28,070 ಮಂದಿ ನೋಂದಣಿಯಾಗಿದ್ದು, ₹80.24 ಕೋಟಿ ಧನಸಹಾಯ ನೀಡಲಾಗಿದೆ. ಕಾಲೇಜು ಮಟ್ಟದಲ್ಲಿ ಯುವ ನಿಧಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.

ಗ್ಯಾರಂಟಿ ಯೋಜನೆಗಳಿಂದ ಪ್ರಯೋಜನ ಪಡೆದ ಫಲಾನುಭವಿಗಳ ಬದುಕಿನಲ್ಲಿ ಆಗಿರುವ ಬದಲಾವಣೆಗಳನ್ನು ದಾಖಲಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಫಲಾನುಭವಿಗಳ ಯಶೋಗಾಥೆಗಳ ಕೈಪಿಡಿ ಸಿದ್ಧಪಡಿಸುವಂತೆ ಎಸ್.ಆರ್. ಪಾಟೀಲ ಸಲಹೆ ನೀಡಿದರು.

ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆ ನಡೆಯುತ್ತಿದ್ದು, ಶೇ.78ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್ ದೈವಾಡಿ ಮಾತನಾಡಿ, ಭಾರತ ಜೋಡೋ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 320 ಸಂಘಗಳನ್ನು ರಚಿಸಿ, ಮೆಂಟರ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೋಡೆ, ಮಹಾನಗರ ಪಾಲಿಕೆ ಗ್ಯಾರಂಟಿ ಯೋಜನೆ ಅಧ್ಯಕ್ಷ ಶಬ್ಬಿರ ಜಾಗೀರಾದಾರ, ಉಪಾಧ್ಯಕ್ಷರಾದ ಹೊನಮಲ್ಲ ರಾಠೋಡ, ನಬೀಲಾಲ್ ನಾಯೋಡಿ, ಆನಂದ ಜಾಧವ, ಮಹಾದೇವಿ ಗೋಕಾಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲೆಯ ಎಲ್ಲ ತಾಲೂಕುಗಳ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಟಿಯು ವಾರ್ಷಿಕ ಘಟಿಕೋತ್ಸವ: ಉತ್ತರ ಕನ್ನಡದ ಪ್ರತಿಭೆಗಳಿಗೆ ರಾಜ್ಯಮಟ್ಟದ ಗರಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ...

ಬೀದರ್‌ ಜಿಲ್ಲಾ ಮಟ್ಟದ ಕಾವ್ಯ ಕಮ್ಮಟ ಅ.4ರಂದು

ಕಾವ್ಯ ರಚನೆಯಲ್ಲಿ ಆಸಕ್ತಿ ಹೊಂದಿರುವವರಿಗಾಗಿ ಜನಪರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜಿಲ್ಲಾ...

‘ನಾವು ಹೋದಾಗ ನೀವು ಬರ್ತೀರಿ’ ಎಂದಿದ್ದ ಮೋದಿ ಮಾತಿನ ಮರ್ಮವೇನು? ರಾಹುಲ್ ಈ ಘಟನೆ ನೆನೆದದ್ದು ಯಾಕೆ?

ಚುನಾವಣಾ ಆಯೋಗದ ಪಾರದರ್ಶಕತೆ ಪ್ರಶ್ನಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ನಿರ್ಣಾಯಕ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ ಪುನಃ ಭುಗಿಲೆಬ್ಬಿಸಿದ ವಿವಾದ

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ...